ಸಾಣೇಹಳ್ಳಿ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹಾಗೂ ಸಿರಿಗೆರೆ ಮಠದ ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿಯವರು ಈ ಕೂಡಲೇ ನಿವೃತ್ತಿಯಾಗಿ ಎರಡೂ ಮಠಕ್ಕೆ ಉತ್ತರಾಧಿಕಾರಿಯನ್ನು ನೇಮಿಸಬೇಕೆಂಬ ನಿರ್ಣಯ ಕೈಗೊಳ್ಳಲಾಗಿದೆ.
ಹಿರಿಯ ಗುರುಗಳ ಅವಧಿಯಲ್ಲಿ ರೂಪಿತವಾಗಿದ್ದ ನಿಯಮಗಳ ಪ್ರಕಾರ 60 ವರ್ಷದ ನಂತರ ಪೀಠ ತ್ಯಾಗ ಮಾಡಿ ಉತ್ತರಾಧಿಕಾರಿ ನೇಮಿಸಬೇಕು. ಆ ನಿಯಮ ಪಾಲನೆಯಾಗುತ್ತಿಲ್ಲ.ಈಗಿನ ಜಗದ್ಗುರುಗಳಿಗೆ 78 ವರ್ಷ ವಯಸ್ಸಾಗಿದೆ. ಮರಿ ಗುರುಗಳನ್ನೂ ನೇಮಿಸಿಲ್ಲ ಎಂಬುದು ಭಕ್ತರ ಅಸಮಾಧಾನಕ್ಕೆ ಪ್ರಮುಖ ಕಾರಣವಾಗಿತ್ತು.
ಮಠದ ಸಂಪೂರ್ಣ ಆಡಳಿತವನ್ನು ಸ್ವಾಮೀಜಿ ತಮ್ಮ ಹಿಡಿತಕ್ಕೆ ತೆಗೆದುಕೊಂಡಿದ್ದಾರೆ. 30 ವರ್ಷಗಳ ಹಿಂದೆ ಟ್ರಸ್ಟ್ ರಚಿಸಿ,ಮಾಡಿರುವ ಏಕ ವ್ಯಕ್ತಿ ಡೀಡ್ ವಿಸರ್ಜಿಸಬೇಕು. ಭಕ್ತರ ತೀರ್ಮಾನವೇ ಅಂತಿಮ ಆಗಬೇಕು ಎಂದು ಸಭೆ ಅಭಿಪ್ರಾಯಪಟ್ಟಿತು. ದಾವಣಗೆರೆ, ಚಿತ್ರದುರ್ಗ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಬೆಂಗಳೂರು ಸೇರಿ ರಾಜ್ಯದ ನಾನಾ ಜಿಲ್ಲೆಗಳಿಂದ ಮುಖಂಡರು ಆಗಮಿಸಿದ್ದರು.
ಭಾನುವಾರ ನಡೆದ ಅಖಿತ ಭಾರತ ವೀರಶೈವ ಲಿಂಗಾಯಿತ ಮಹಾಸಭಾದ ಅಧ್ಯಕ್ಷತೆ ವಹಿಸಿದ್ದ ಶಾಮನೂರು ಶಿವಶಂಕರಪ್ಪ ಸಭೆಯಲ್ಲಿ ಕೈಗೊಂಡಿರುವ ನಿರ್ಣಯದ ಬಗ್ಗೆ 25 ಸದಸ್ಯರ ನಿಯೋಗ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿಗಳನ್ನು ಭೇಟಿಮಾಡಿ ನಿರ್ಣಯವನ್ನು ತಿಳಿಸಲು ತೀರ್ಮಾನಿಸಿದ್ದು, ಅವರು ಒಪ್ಪಿದರೆ ಒಳ್ಳೆಯದು ಇಲ್ಲವಾದರೆ ಮತ್ತೊಂದು ಸಭೆ ಮಾಡೋಣವೆಂದು ಹೇಳಿದ್ದಾರೆ.
ಭಾನುವಾರ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ, ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಅಧ್ಯಕ್ಷತೆಯಲ್ಲಿ ಮಾಜಿ ಸಚಿವರಾದ ಎಸ್.ಎ.ರವೀಂದ್ರನಾಥ, ಬಿ.ಸಿ.ಪಾಟೀಲ, ಎಂಎಲ್‌ಸಿ ರುದ್ರೇಗೌಡ, ಸಮಾಜದ ಹಿರಿಯ ಮುಖಂಡರಾದ ಆನಗೋಡು ನಂಜುಂಡಪ್ಪ, ಅಣಬೇರು ರಾಜಣ್ಣ ಇತರರ ನೇತೃತ್ವದ ಸಭೆಯಲ್ಲಿ ಸುದೀರ್ಘ ಚರ್ಚೆ ನಂತರ ಈ ತೀರ್ಮಾನ ಕೈಗೊಳ್ಳಲಾಯಿತು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296