nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಾರಲ್ಲೇ ಪ್ರೇಮಿಗಳ ಗಲಾಟೆ: ಸ್ಫೋಟಕ ಸಿಡಿಸಿಕೊಂಡು ಯುವಕ ಸಜೀವ ದಹನ, ಯುವತಿಗೆ ಗಾಯ

    June 27, 2026

    ಬಾಳೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಹುಲಿ ದಾಳಿ

    June 27, 2026

    ತುಮಕೂರು: ಜೂ.29ರಂದು ವಿವಿಧ ಹುದ್ದೆಗಳಿಗೆ ಕಾರ್ಯಾಗಾರ

    June 27, 2026
    Facebook Twitter Instagram
    ಟ್ರೆಂಡಿಂಗ್
    • ಕಾರಲ್ಲೇ ಪ್ರೇಮಿಗಳ ಗಲಾಟೆ: ಸ್ಫೋಟಕ ಸಿಡಿಸಿಕೊಂಡು ಯುವಕ ಸಜೀವ ದಹನ, ಯುವತಿಗೆ ಗಾಯ
    • ಬಾಳೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಹುಲಿ ದಾಳಿ
    • ತುಮಕೂರು: ಜೂ.29ರಂದು ವಿವಿಧ ಹುದ್ದೆಗಳಿಗೆ ಕಾರ್ಯಾಗಾರ
    • ವಚನ ಗಾಯನ, ಪ್ರಬಂಧ ಸ್ಪರ್ಧೆ: ನೋಂದಾಯಿಸಲು ಸೂಚನೆ
    • ತೋಟಗಾರಿಕಾ ಬೆಳೆಗಳಿಗೆ ವಿಮಾ ಸೌಲಭ್ಯ: ರೈತರಿಗೆ ಉಪಯುಕ್ತ ಮಾಹಿತಿ ಇಲ್ಲಿದೆ
    • ಬೆಳಕುಣಿ ಚೌದ್ರಿ ಗ್ರಾಮದಲ್ಲಿ ನೀರಿಗಾಗಿ ಮಹಿಳೆಯರ ಪರದಾಟ: ಅಧಿಕಾರಿಗಳ ವಿರುದ್ಧ ಆಕ್ರೋಶ
    • ಪಂಚಗ್ಯಾರಂಟಿ ಯೋಜನೆಗಳ ಸ್ಥಗಿತ ಸಾಧ್ಯವಿಲ್ಲ: ಸಿ.ಡಿ. ಚಂದ್ರಶೇಖರ್
    • ಜೂಜಾಟ: 12 ಮಂದಿ ಆರೋಪಿಗಳ ಬಂಧನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಿಸೋದಿಯಾ ಬಂಧನ ಖಂಡಿಸಿ ಬಿಜೆಪಿ ಕಚೇರಿ ಎದುರು ಎಎಪಿ ಪ್ರತಿಭಟನೆ
    ರಾಷ್ಟ್ರೀಯ ಸುದ್ದಿ February 28, 2023

    ಸಿಸೋದಿಯಾ ಬಂಧನ ಖಂಡಿಸಿ ಬಿಜೆಪಿ ಕಚೇರಿ ಎದುರು ಎಎಪಿ ಪ್ರತಿಭಟನೆ

    By adminFebruary 28, 2023No Comments2 Mins Read
    aap pratibatane

    Provided by
    Provided by

    ದೆಹಲಿ ಉಪಮುಖ್ಯಮಂತ್ರಿ ಮನೀಷ್‌ ಸಿಸೋದಿಯಾರವರ ಬಂಧನ ಖಂಡಿಸಿ ಬೆಂಗಳೂರಿನಲ್ಲಿರುವ ಬಿಜೆಪಿ ರಾಜ್ಯ ಕಚೇರಿ ಎದುರು ಆಮ್‌ ಆದ್ಮಿ ಪಾರ್ಟಿ ಕಾರ್ಯಕರ್ತರು ಬೃಹತ್‌ ಪ್ರತಿಭಟನೆ ನಡೆಸಿ, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

    ಪ್ರತಿಭಟನೆ ವೇಳೆ ಮಾತನಾಡಿದ ಆಮ್‌ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ, “ದೆಹಲಿಯ ಆಮ್‌ ಆದ್ಮಿ ಪಾರ್ಟಿ ಪಕ್ಷವನ್ನು ವಿಭಜಿಸಿ ಬಿಜೆಪಿಯಲ್ಲಿ ವಿಲೀನಗೊಳಿಸಲು ಬಿಜೆಪಿ ನಾಯಕರು ಪ್ರಯತ್ನಿಸಿದರು. ಆದರೆ ಆಮ್‌ ಆದ್ಮಿ ಪಾರ್ಟಿ ನಾಯಕರಲ್ಲಿರುವ ಬದ್ಧತೆಯಿಂದಾಗಿ ಈ ಪ್ರಯತ್ನ ವಿಫಲವಾಯಿತು. ಇದರಿಂದ ಹತಾಶೆಗೊಂಡ ಬಿಜೆಪಿಯು ಬೆದರಿಕೆ ತಂತ್ರವಾಗಿ ಅಧಿಕಾರ ದುರ್ಬಳಕೆ ಮಾಡಿಕೊಂಡು ಎಎಪಿ ನಾಯಕರಿಗೆ ಕಿರುಕುಳ ನೀಡುತ್ತಿದೆ. ದೆಹಲಿಯ ಅಬಕಾರಿ ನೀತಿಯಲ್ಲಿ ಯಾವುದೇ ಅವ್ಯವಹಾರವಾಗಿಲ್ಲ. ನೂತನ ಅಬಕಾರಿ ನೀತಿಯನ್ನು ದೆಹಲಿಯಲ್ಲಿ ಇನ್ನೂ ಜಾರಿಗೆ ತಂದಿಲ್ಲ ಹಾಗೂ ಹಲವು ರಾಜ್ಯಗಳಲ್ಲಿ ಇದೇ ನೀತಿ ಜಾರಿಯಲ್ಲಿದೆ. ಆದರೂ ಸಿಸೋದಿಯಾರವರನ್ನು ಕೇಂದ್ರ ಸರ್ಕಾರ ಟಾರ್ಗೆಟ್‌ ಮಾಡುತ್ತಿರುವುದು ಖಂಡನೀಯ” ಎಂದು ಹೇಳಿದರು.

    “ಸುಮಾರು ಒಂದು ವರ್ಷದಿಂದ ಕೇಂದ್ರ ಸರ್ಕಾರದ ತನಿಖಾಧಿಕಾರಿಗಳು ಸಿಸೋದಿಯಾರವರನ್ನು ಗುರಿಯಾಗಿಸಿಕೊಂಡು ದಾಳಿ ಮಾಡುತ್ತಿದ್ದರೂ, ಆರೋಪವನ್ನು ಸಾಬೀತುಪಡಿಸುವಂತಹ ಯಾವುದೇ ಸಣ್ಣ ಸಾಕ್ಷಿ ಸಿಕಿಲ್ಲ. ನಗದು ಅಥವಾ ಯಾವುದೇ ಅಕ್ರಮ ದಾಖಲೆ ಪತ್ತೆ ಹಚ್ಚಲು ಸಾಧ್ಯವಾಗಿಲ್ಲ. ಆಮ್‌ ಆದ್ಮಿ ಪಾರ್ಟಿಯೊಂದೇ ಬಿಜೆಪಿಯನ್ನು ಎದುರಿಸುವ ಏಕೈಕ ಶಕ್ತಿ ಎಂಬುದನ್ನು ಅರಿತಿರುವ ಬಿಜೆಪಿಯು ನಮ್ಮನ್ನು ರಾಜಕೀಯವಾಗಿ ಎದುರಿಸಲು ಸಾಧ್ಯವಾಗದೇ, ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು ಈ ರೀತಿ ತೊಂದರೆ ನೀಡುತ್ತಿದೆ. ದೇಶ ಹಾಗೂ ಜನರಿಗೋಸ್ಕರ ಕೇವಲ ಬಂಧನ ಮಾತ್ರವಲ್ಲ, ಪ್ರಾಣ ನೀಡಲೂ ನಾವುಗಳು ಸಿದ್ಧವಿದ್ದೇವೆ” ಎಂದು ಪೃಥ್ವಿ ರೆಡ್ಡಿ ಹೇಳಿದರು.

    ಆಮ್‌ ಆದ್ಮಿ ಪಾರ್ಟಿಯ ರಾಜ್ಯ ಕಾರ್ಯಾಧ್ಯಕ್ಷ ಮೋಹನ್‌ ದಾಸರಿ ಮಾತನಾಡಿ, “ಕರ್ನಾಟಕ ಸೇರಿದಂತೆ ದೇಶಾದ್ಯಂತ ಆಮ್‌ ಆದ್ಮಿ ಪಾರ್ಟಿ ಪ್ರವರ್ಧಮಾನಕ್ಕೆ ಬರುತ್ತಿದೆ. ಜನರು ಎಎಪಿ ಪರವಾಗಿ ಇರುವುದನ್ನು ಸಹಿಸಿಕೊಳ್ಳಲು ಬಿಜೆಪಿಗೆ ಸಾಧ್ಯವಾಗುತ್ತಿಲ್ಲ. ಕರ್ನಾಟಕದ ಚುನಾವಣೆಯ ಪ್ರಚಾರಕ್ಕೆ ಮನೀಷ್‌ ಸಿಸೋದಿಯಾ ಆಗಮಿಸಿ, ಇಲ್ಲಿನ ಸರ್ಕಾರಿ ಶಾಲೆಗಳ ದುಸ್ಥಿತಿಯನ್ನು ಪ್ರಶ್ನಿಸಬಹುದು ಎಂಬ ಭಯದಿಂದ ಕೇಂದ್ರ ಸರ್ಕಾರವು ಸಿಬಿಐ ಮೂಲಕ ಅವರನ್ನು ಬಂಧಿಸಿದೆ.


    Provided by
    Provided by

    ಆಮ್‌ ಆದ್ಮಿ ಪಾರ್ಟಿಯ ದೆಹಲಿ ಸರ್ಕಾರದ ಶಿಕ್ಷಣ ಕ್ರಾಂತಿಯನ್ನು ಕಂಡು ಅನೇಕ ವಿದೇಶಗಳು ಕೂಡ ಮೆಚ್ಚುಗೆ ವ್ಯಕ್ತಪಡಿಸಿವೆ. ಆದರೆ ಬಿಜೆಪಿಗೆ ಮಾತ್ರ ಇದನ್ನು ಸಹಿಸಲು ಸಾಧ್ಯವಾಗುತ್ತಿಲ್ಲ. ಶಿಕ್ಷಣ ಸಚಿವರಾಗಿ ಮನೀಷ್‌ ಸಿಸೋದಿಯಾರವರು ಬರೋಬ್ಬರಿ 25,000ಕ್ಕೂ ಶಾಲಾ ಕೊಠಡಿಗಳನ್ನು ಅತ್ಯಾಧುನಿಕವಾಗಿ ನಿರ್ಮಿಸಿ, ಸುಮಾರು 20 ಲಕ್ಷ ವಿದ್ಯಾರ್ಥಿಗಳ ಭವಿಷ್ಯಕ್ಕೆ ಭದ್ರ ಅಡಿಪಾಯ ಹಾಕಿದ್ದಾರೆ. ಇಂತಹವರ ವಿರುದ್ಧ ಬಿಜೆಪಿಯು ಈ ರೀತಿ ಕೀಳುಮಟ್ಟದ ಕುತಂತ್ರ ಮಾಡುತ್ತಿರುವುದು ನಾಚಿಕೆಗೇಡಿನ ಸಂಗತಿ” ಎಂದು ಹೇಳಿದರು.

    ಆಮ್‌ ಆದ್ಮಿ ಪಾರ್ಟಿ ಮುಖಂಡರಾದ ಕೆ.ಮಥಾಯಿ, ಬ್ರಿಜೇಶ್‌ ಕಾಳಪ್ಪ, ಸುರೇಶ್‌ ರಾಥೋಡ್‌, ಜಗದೀಶ್‌ ವಿ ಸದಂ, ಸುಮನ್‌ ಪ್ರಶಾಂತ್‌, ರಾಜೇಂದ್ರ ಕುಮಾರ್‌, ಮೋಹನ್‌, ಕೀರ್ತನ್‌ ಕುಮಾರ್‌, ಶಾಶಾವಲ್ಲಿ, ಮಂಜುನಾಥ್‌, ಪ್ರಕಾಶ್‌ ಬೆಳ್ಳಂಕೊಂಡ ಮತ್ತಿತರ ನಾಯಕರು ಹಾಗೂ ಅನೇಕ ಕಾರ್ಯಕರ್ತರು ಭಾಗವಹಿಸಿದ್ದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸಿರಾ

    ಕಾರಲ್ಲೇ ಪ್ರೇಮಿಗಳ ಗಲಾಟೆ: ಸ್ಫೋಟಕ ಸಿಡಿಸಿಕೊಂಡು ಯುವಕ ಸಜೀವ ದಹನ, ಯುವತಿಗೆ ಗಾಯ

    June 27, 2026

    ತುಮಕೂರು: ಪ್ರೇಮಿಗಳ ನಡುವೆ ಚಲಿಸುವ ಕಾರಿನಲ್ಲೇ ಭೀಕರ ಗಲಾಟೆ ನಡೆದು, ಯುವಕನೊಬ್ಬ ಸ್ಫೋಟಕವೊಂದನ್ನು ಸಿಡಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ದೆಡ್ಲಿ ಘಟನೆ…

    ಬಾಳೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಹುಲಿ ದಾಳಿ

    June 27, 2026

    ತುಮಕೂರು: ಜೂ.29ರಂದು ವಿವಿಧ ಹುದ್ದೆಗಳಿಗೆ ಕಾರ್ಯಾಗಾರ

    June 27, 2026

    ವಚನ ಗಾಯನ, ಪ್ರಬಂಧ ಸ್ಪರ್ಧೆ: ನೋಂದಾಯಿಸಲು ಸೂಚನೆ

    June 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.