ತುಮಕೂರು: ಜಿಲ್ಲಾಸ್ಪತ್ರೆಯಲ್ಲಿರುವ ಹಳೆಯ ಕಟ್ಟಡಗಳನ್ನು ಕೆಡವಿ ಸುಸಜ್ಜಿತ ಹೊಸ ಕಟ್ಟಡ ಹಾಗೂ ವೈದ್ಯಕೀಯ ಕಾಲೇಜು ನಿರ್ಮಿಸಲು ಉದ್ದೇಶಿಸಿರುವ ಜಿಲ್ಲಾಸ್ಪತ್ರೆ ಆವರಣಕ್ಕೆ ಕರ್ನಾಟಕ ಗಣಿ ಪರಿಸರ ಪುನಶ್ಚೇತನ ನಿಗಮ(ಕೆಎಂಇಆರ್ ಸಿ)ದ ವ್ಯವಸ್ಥಾಪಕ ನಿರ್ದೇಶಕ ಡಾ.ಸಂಜಯ್ ಎಸ್. ಬಿಜ್ಜೂರು ಅವರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕಟ್ಟಡ ನಿರ್ಮಾಣದ ನೀಲ ನಕ್ಷೆಯ ಬಗ್ಗೆ ವಿವರಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಚಂದ್ರಶೇಖರ್, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಅಸ್ಗರ್ ಬೇಗ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಅನುಪಮ, ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4