ಬೆಂಗಳೂರು: ವಕ್ಫ್ ವಿಚಾರವಾಗಿ ಜನರು ದಂಗೆ ಏಳುವ ಪರಿಸ್ಥಿತಿ ಕರ್ನಾಟಕದಲ್ಲಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್, ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ವಕ್ಫ್ ಮಂಡಳಿಯಿಂದ ರೈತರ ಜಮೀನು ಕಬಳಿಕೆ ಖಂಡಿಸಿ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಫ್ರೀಡಂ ಪಾರ್ಕ್ನಲ್ಲಿ ಇಂದು ಹಮ್ಮಿಕೊಳ್ಳಲಾಗಿದ್ದ ಧರಣಿಯನ್ನುದ್ದೇಶಿಸಿ ಮಾತನಾಡಿದ ಅವರು, ರೈತರ ಜಮೀನು ಕಿತ್ತುಕೊಳ್ಳುವುದು ಕಾಂಗ್ರೆಸ್ ಸಚಿವರಿಗೆ ಸಣ್ಣ ವಿಚಾರ ಎನಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಏನೂ ಇಲ್ಲ ಎನ್ನುತ್ತಾರೆ. ಹಾಗಿದ್ದರೆ ಏನೂ ಇಲ್ಲದೆ ಹೋರಾಟಗಳು ನಡೆಯುತ್ತಿವೆಯೇ? ಮಠ, ಮಂದಿರಗಳ ಪ್ರಮುಖರೂ ಹೋರಾಟಕ್ಕೆ ಬಂದಿದ್ದಾರೆ. ಬಿಜೆಪಿಯಿಂದ, ರೈತರಿಂದ ಇವತ್ತು ರಾಜ್ಯಾದ್ಯಂತ ಹೋರಾಟ ನಡೆಯುತ್ತಿದೆ ಎಂದರು.
ಶ್ರೀರಂಗಪಟ್ಟಣದಲ್ಲಿ 400 ವರ್ಷ ಹಳೆಯ ದೇವಸ್ಥಾನ ಇದೆ. ಅಲ್ಲಿ ಮುಸ್ಲಿಮರ ಮನೆ ಇಲ್ಲ; ಮಸೀದಿಯೂ ಇಲ್ಲ. ಆದರೆ, ಆ ದೇವಸ್ಥಾನದ ಪಹಣಿಯಲ್ಲಿ ವಕ್ಫ್ ಬೋರ್ಡ್ ಆಸ್ತಿ ಎಂದು ನಮೂದಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನಮ್ಮ ಆಸ್ತಿ, ನಮ್ಮ ಹಕ್ಕು ಘೋಷವಾಕ್ಯದಡಿ ಹೋರಾಟ ನಡೆಯುತ್ತಿದೆ. ನಮ್ಮ ತೆರಿಗೆ ನಮ್ಮ ಹಕ್ಕು ಹೆಸರಿನಲ್ಲಿ ನಮ್ಮ ಜಯನಗರದ ಶಾಸಕರೂ ಹೋರಾಟ ಮಾಡುತ್ತಿದ್ದಾರೆ ಎಂದು ಅವರು ಹೇಳಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296