ಬೆಂಗಳೂರು: ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ ಆರು ನಕ್ಸಲೀಯರನ್ನು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಗಿದ್ದು, ಬಿಗಿ ಪೊಲೀಸ್ ಭದ್ರತೆಯೊಂದಿಗೆ ಜೈಲಿಗೆ ಶಿಫ್ಟ್ ಮಾಡಲಾಯಿತು.
ನಕ್ಸಲ್ ನಾಯಕರಾದ ಮುಂಡಗಾರು ಲತಾ, ಸುಂದರಿ ಕೊತ್ಲೂರು, ವನಜಾಕ್ಷಿ ಬಾಳೆಹೊಳೆ, ಜಿಶಾ, ವಸಂತ್ ಟಿ.ಎನ್, ಮಾರೆಪ್ಪ ಅರೋಲಿ ಅವರಿಗೆ ಎನ್ಐಎ ವಿಶೇಷ ಕೋರ್ಟ್ ಜನವರಿ 31ರವರೆಗೆ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ.
ಚಿಕ್ಕಮಗಳೂರು ಡಿವೈಎಸ್ಪಿ ಬಾಲಾಜಿ ಸಿಂಗ್ ಅವರು ನಕ್ಸಲ್ ನಾಯಕರಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಿ ನಂತರ ಎನ್ ಐಎ ವಿಶೇಷ ಕೋರ್ಟ್ನ ನ್ಯಾಯಾಧೀಶರಾದ ಗಂಗಾಧರ್ ಅವರ ಮುಂದೆ ಹಾಜರುಪಡಿಸಿದ್ದರು.
ನ್ಯಾಯಾಧೀಶರು ಆರು ನಕ್ಸಲರಿಗೆ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದ್ದಾರೆ. ಹೀಗಾಗಿ ನಕ್ಸಲರನ್ನು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಯಿತು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx