ಸರಗೂರು: ಹೆಚ್.ಡಿ.ಕೋಟೆ ತಾಲ್ಲೂಕು ಹಾಗೂ ಸರಗೂರು ತಾಲ್ಲೂಕು ವ್ಯಾಪ್ತಿಯಲ್ಲಿ ಕಬಿನಿ ಜಲಾಶಯ ಹಾಗೂ ನುಗು ಜಲಾಶಯದ ಹಿನ್ನೀರಿನಲ್ಲಿ ಅಕ್ರಮ ರೆಸಾರ್ಟ್ ಗಳನ್ನು ನಿರ್ಮಾಣ ಮಾಡಲಾಗುತ್ತಿದ್ದು, ಇದಕ್ಕೆ ಸ್ಥಳೀಯ ಶಾಸಕರು, ಜಿಲ್ಲೆಯ ಜಿಲ್ಲಾಧಿಕಾರಿಗಳು ಹಾಗೂ ಸಂಬಂಧಿಸಿದ ಅಧಿಕಾರಿಗಳು ಅವಕಾಶಮಾಡಿಕೊಟ್ಟಿದ್ದಾರೆಂದು ಕೆಲವೊಂದು ಎಲೆಕ್ಟ್ರಾನಿಕ್ ಸುದ್ದಿ ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಾಕಾರಿಯಾಗಿ ಆರೋಪಿಸಲಾಗಿರುತ್ತದೆ ಕಿಡಿಗೇಡಿಗಳ ವಿರುದ್ಧ ಶಾಸಕರು ಅಧಿಕಾರಿಗಳಿಂದ ತನಿಖೆ ನಡೆಸುವಂತೆ ಸೂಚಿಸಿದ್ದಾರೆ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ ಎಂದು ಮಾಜಿ ತಾಪಂ ಅಧ್ಯಕ್ಷ ಮನುಗನಹಳ್ಳಿ ಗುರುಸ್ವಾಮಿ ತಿಳಿಸಿದರು.
ತಾಲ್ಲೂಕಿನಲ್ಲಿ ಅಕ್ರಮ ರೆಸಾರ್ಟ್ ಗಳ ನಿರ್ಮಾಣದ ಬಗ್ಗೆ ನನಗೆ ಯಾವುದೇ ಲಿಖಿತ ದೂರುಗಳು ಸ್ವೀಕೃತವಾಗಿರುವುದಿಲ್ಲ. ಆದ್ದರಿಂದ ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿನ ಅಂಶಗಳನ್ನು ದೂರುಗಳೆಂದು ಆಧರಿಸಿ ತಾಲ್ಲೂಕಿನಲ್ಲಿ ಅಕ್ರಮ ರೆಸಾರ್ಟ್ ನಿರ್ಮಾಣವಾಗುತ್ತಿದ್ದಲ್ಲಿ ಅಥವಾ ಕಾರ್ಯನಿರ್ವಹಿಸುತ್ತಿದ್ದಲ್ಲಿ ಇಲಾಖೆ ಅಧಿಕಾರಿಗಳಿಂದ ತನಿಖೆ ನಡೆಸಿ ಶಿಸ್ತು ಕ್ರಮ ಕೈಗೊಳ್ಳಲು ಕೋರುತ್ತೇನೆ. ಎಂದು ಜಿಲ್ಲಾಧಿಕಾರಿಗಳಿಗೆ ಲಿಖಿತ ಮೂಲಕ ಮನವಿ ಮಾಡಿದ್ದಾರೆ ಎಂದರು.
ತಾಲೂಕಿನಲ್ಲಿ ಇಲ್ಲಸಲ್ಲದ ಆರೋಪಗಳನ್ನು ಶಾಸಕರ ವಿರುದ್ಧ ಲೋಕಲ್ ಮಾಧ್ಯಮಗಳಲ್ಲಿ ಕಿಡಿಗೇಡಿಗಳು ಪ್ರಸಾರ ಮಾಡಿಕೊಂಡಿದ್ದಾರೆ. ಆದರಿಂದ ಸತ್ಯ ಸತ್ಯಗಳು ತನಿಖೆ ಮೂಲಕ ಹೊರಬಿರಲಿದೆ ಎಂದು ಪತ್ರಿಕೆ ಪ್ರಕಟಣೆಯಲ್ಲಿ ತಿಳಿಸಿದರು.
ವರದಿ: ಹಾದನೂರು ಚಂದ್ರ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC