ಮಂಡ್ಯ: ಪ್ರೀತಿ ಪ್ರೇಮಾ ಅಂತ ನಾಲ್ವರು ಯುವಕರು ಅಪ ಪ್ರಚಾರ ಮಾಡಿದ್ದರಿಂದ ನೊಂದು ಬಾಲಕಿಯೊಬ್ಬಳು ಸಾವಿಗೆ ಶರಣಾದ ಘಟನೆ ಘಟನೆ ಮಂಡ್ಯದ ಹನಕೆರೆ ಗ್ರಾಮದಲ್ಲಿ ನಡೆದಿದೆ.
ಇಂಪನಾ (14) ಸಾವಿಗೆ ಶರಣಾದ ಬಾಲಕಿಯಾಗಿದ್ದಾಳೆ. ಗಗನ್, ಸಂಜಯ್ , ಮಹೇಂದ್ರ ಹಾಗೂ ಲೋಹಿತ್ ಗಗನ್, ಸಂಜಯ್ , ಮಹೇಂದ್ರ ಹಾಗೂ ಲೋಹಿತ್ ಎಂಬವರು ಹನಕೆರೆ ಗ್ರಾಮದ ಗಗನ್ ಮತ್ತು ಸ್ನೇಹಿತರು ಸೇರಿ ಇಂಪನಾ- ಮಹೇಂದ್ರ ಎಂಬಾತನನ್ನು ಪ್ರೀತಿ ಮಾಡುತ್ತಿದ್ದಾಳೆ ಎಂದು ಗಾಳಿ ಸುದ್ದಿ ಹಬ್ಬಿಸಿದ್ದರು. ಇದರಿಂದ ಮನನೊಂದು ಬಾಲಕಿ ಸಾವಿಗೆ ಶರಣಾಗಿದ್ದಾಳೆ ಎಂದು ಹೇಳಲಾಗಿದೆ.
ಇಂಪನಾ 9ನೇ ತರಗತಿಯಲ್ಲಿ ಓದುತ್ತಿದ್ದಳು. ಅಪಪ್ರಚಾರದಿಂದ ನೊಂದು ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದು ಕೊಂಡು ಸಾವಿಗೆ ಶರಣಾಗಿದ್ದಾಳೆ. ಬಾಲಕಿಯ ವಿರುದ್ಧ ಅಪಪ್ರಚಾರ ನಡೆಸಿದವರ ವಿರುದ್ಧ ಕ್ರಮಕೈಗೊಳ್ಳುವಂತೆ ಪೋಷಕರು ಒತ್ತಾಯಿಸಿದ್ದಾರೆ. ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q