nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಹಿಳಾ ಪಿಎಸ್‌ ಐ ಮೇಲೆ ಕಪಾಳಮೋಕ್ಷ ಪ್ರಕರಣ: ಮಗಳ ವರ್ತನೆಗೆ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ ಬಿಜೆಪಿ ಶಾಸಕ ಸುರೇಶ್ ಗೌಡ

    August 14, 2026

    ಕರ್ತವ್ಯನಿರತ ಮಹಿಳಾ ಪಿಎಸ್‌ ಐ ಮೇಲೆ ಶಾಸಕನ ಪುತ್ರಿಯಿಂದ ಹಲ್ಲೆ: ಕಪಾಳಮೋಕ್ಷ ಆರೋಪ, ಎಫ್‌ ಐಆರ್ ದಾಖಲು!

    August 14, 2026

    ಕೊರಟಗೆರೆಯಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲ್ಲಿಸಿ ಹೆಚ್.ಡಿ.ಕೆ. ಅವರನ್ನು ಮುಖ್ಯಮಂತ್ರಿ ಮಾಡುವುದೇ ಗುರಿ | ಪಿ.ಎನ್. ಕೃಷ್ಣಮೂರ್ತಿ

    August 14, 2026
    Facebook Twitter Instagram
    ಟ್ರೆಂಡಿಂಗ್
    • ಮಹಿಳಾ ಪಿಎಸ್‌ ಐ ಮೇಲೆ ಕಪಾಳಮೋಕ್ಷ ಪ್ರಕರಣ: ಮಗಳ ವರ್ತನೆಗೆ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ ಬಿಜೆಪಿ ಶಾಸಕ ಸುರೇಶ್ ಗೌಡ
    • ಕರ್ತವ್ಯನಿರತ ಮಹಿಳಾ ಪಿಎಸ್‌ ಐ ಮೇಲೆ ಶಾಸಕನ ಪುತ್ರಿಯಿಂದ ಹಲ್ಲೆ: ಕಪಾಳಮೋಕ್ಷ ಆರೋಪ, ಎಫ್‌ ಐಆರ್ ದಾಖಲು!
    • ಕೊರಟಗೆರೆಯಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲ್ಲಿಸಿ ಹೆಚ್.ಡಿ.ಕೆ. ಅವರನ್ನು ಮುಖ್ಯಮಂತ್ರಿ ಮಾಡುವುದೇ ಗುರಿ | ಪಿ.ಎನ್. ಕೃಷ್ಣಮೂರ್ತಿ
    • ಬರಗಾಲದ ಆತಂಕ ಬೇಡ, ಕಾಂಗ್ರೆಸ್ ಸರ್ಕಾರ, ನಾವೂ ಇದ್ದೇವೆ: ಕೆ.ಎನ್. ರಾಜಣ್ಣ
    • ತುರುವೇಕೆರೆ: ಜಿ.ಪರಮೇಶ್ವರ್ ಅವರಿಂದ ಬರ ಅಧ್ಯಯನದ ಆತುರದ ವೀಕ್ಷಣೆ: ರೈತರಿಗೆ ನಿರಾಸೆ
    • ಆ.29: ಪಾವಗಡದಲ್ಲಿ ಉದ್ಯೋಗ ಮೇಳ
    • ದೇವೇಗೌಡರ ಪತ್ನಿ ಚೆನ್ನಮ್ಮ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ; ಸರ್ಕಾರಿ ಗೌರವ ನಿರ್ಧಾರ ಸಮರ್ಥಿಸಿಕೊಂಡ ಸಿಎಂ ಡಿ.ಕೆ. ಶಿವಕುಮಾರ್
    • ಮೇಕೆ ಮೇಲೆ ದಾಳಿ ಮಾಡಲು ಬಂದ ಚಿರತೆ ಸೆರೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಹಿಳಾ ಪಿಎಸ್‌ ಐ ಮೇಲೆ ಕಪಾಳಮೋಕ್ಷ ಪ್ರಕರಣ: ಮಗಳ ವರ್ತನೆಗೆ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ ಬಿಜೆಪಿ ಶಾಸಕ ಸುರೇಶ್ ಗೌಡ
    ರಾಜ್ಯ ಸುದ್ದಿ August 14, 2026

    ಮಹಿಳಾ ಪಿಎಸ್‌ ಐ ಮೇಲೆ ಕಪಾಳಮೋಕ್ಷ ಪ್ರಕರಣ: ಮಗಳ ವರ್ತನೆಗೆ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ ಬಿಜೆಪಿ ಶಾಸಕ ಸುರೇಶ್ ಗೌಡ

    By Ganesh TumkuruAugust 14, 2026No Comments2 Mins Read
    suresh gowda

    ಬೆಂಗಳೂರು: ಕರ್ತವ್ಯದಲ್ಲಿದ್ದ ಮಹಿಳಾ ಪೊಲೀಸ್ ಸಬ್ ಇನ್‌ ಸ್ಪೆಕ್ಟರ್ ಸವಿತಾ ಅವರ ಮೇಲೆ ತಮ್ಮ ಪುತ್ರಿ ಐಶ್ವರ್ಯಾ ಕಪಾಳಮೋಕ್ಷ ಮಾಡಿರುವ ಘಟನೆಗೆ ಸಂಬಂಧಿಸಿದಂತೆ ತುಮಕೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಶಾಸಕ ಬಿ. ಸುರೇಶ್ ಗೌಡ ಅವರು ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದಾರೆ.

    ಶ್ರೀರಂಗಪಟ್ಟಣ ತಾಲೂಕಿನ ಪ್ರಸಿದ್ಧ ಆರತಿ ಉಕ್ಕಡ ದೇವಸ್ಥಾನದಲ್ಲಿ ಭೀಮನ ಅಮಾವಾಸ್ಯೆಯಂದು ನಡೆದ ಈ ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಕ್ಯಾತನಹಳ್ಳಿ ಪೊಲೀಸ್ ಠಾಣೆಯಲ್ಲಿ ಐಶ್ವರ್ಯಾ ವಿರುದ್ಧ ಎಫ್‌ ಐಆರ್ ದಾಖಲಾಗಿದೆ.

    ಘಟನೆ ಸಂಬಂಧ ವಿಧಾನಸೌಧದ ಆವರಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಶಾಸಕ ಸುರೇಶ್ ಗೌಡ, ಭೀಮನ ಅಮಾವಾಸ್ಯೆಯ ದಿನ ತಮ್ಮ ಮಗಳು ಇಬ್ಬರು ಸಣ್ಣ ಮಕ್ಕಳೊಂದಿಗೆ ಆರತಿ ಉಕ್ಕಡ ದೇವಸ್ಥಾನಕ್ಕೆ ತೆರಳಿದ್ದಳು,  ಆ ಸಂದರ್ಭದಲ್ಲಿ ಕರ್ತವ್ಯದಲ್ಲಿದ್ದ ಸಬ್ ಇನ್‌ ಸ್ಪೆಕ್ಟರ್ ಅವಳನ್ನು ಒಳಗೆ ಬಿಡಲಿಲ್ಲ ಹಾಗೂ ವಿಐಪಿ ಸಾಲಿನಲ್ಲಿ ನಿಂತಿದ್ದಾಗ ಬೇರೆಯವರನ್ನು ಒಳಗಡೆ ಬಿಟ್ಟಿದ್ದರು. ಕ್ರಿಯೆಗೆ ಪ್ರತಿಕ್ರಿಯೆ ಸಹಜವಾಗಿ ಇರುತ್ತದೆ, ಮಾತಿಗೆ ಮಾತು ಬೆಳೆದು ಈ ಅಹಿತಕರ ಘಟನೆ ನಡೆದಿರಬಹುದು ಎಂದ ಅವರು ಸ್ಥಳದಲ್ಲಿ ವಾಸ್ತವವಾಗಿ ಏನು ನಡೆಯಿತು ಎಂಬುದು ತಮಗೆ ಪೂರ್ಣವಾಗಿ ತಿಳಿದಿಲ್ಲ ಎಂದು ಹೇಳಿದರು.

    “ಘಟನೆಯಲ್ಲಿ ನನ್ನ ಮಗಳ ಕಡೆಯ ದೂರು ಏನಿತ್ತು ಎಂಬುದನ್ನೂ ಪೊಲೀಸರು ಆಲಿಸಬೇಕಿತ್ತು. ಈ ಸಂಬಂಧ ಈಗಾಗಲೇ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಮಾತನಾಡಿದ್ದೇನೆ. ನನ್ನ ಮಗಳದ್ದು ತಪ್ಪಿದ್ದರೆ ನಾನು ಸಾರ್ವಜನಿಕವಾಗಿ ಕ್ಷಮೆ ಕೇಳಲು ಸಿದ್ಧ. ಅವಳು ಆ ಕ್ಷಣದಲ್ಲಿ ತಾಳ್ಮೆ ಕಳೆದುಕೊಂಡಿರಬಹುದು. ಆದರೆ ನಾವು ಸಾರ್ವಜನಿಕ ಜೀವನದಲ್ಲಿರುವವರು, ಈ ರೀತಿ ಎಂದಿಗೂ ನಡೆದುಕೊಳ್ಳಬಾರದು. ಹೀಗಾಗಿ ನನ್ನ ಮಗಳ ವರ್ತನೆಗಾಗಿ ನಾನೇ ಸಾರ್ವಜನಿಕವಾಗಿ ಕ್ಷಮೆ ಯಾಚಿಸುತ್ತೇನೆ ಎಂದರು.

    ಆಗಸ್ಟ್ 12ರಂದು ಆರತಿ ಉಕ್ಕಡ ದೇವಸ್ಥಾನದಲ್ಲಿ ಭೀಮನ ಅಮಾವಾಸ್ಯೆ ಹಿನ್ನೆಲೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಜಮಾಯಿಸಿದ್ದರು. ಈ ವೇಳೆ ಶಾಸಕರ ಪುತ್ರಿ ಐಶ್ವರ್ಯಾ ಅವರು ತಮ್ಮ ಪ್ರಭಾವ ಬಳಸಿ ವಿಐಪಿ ಪ್ರವೇಶ ಪಡೆದು ಗರ್ಭಗುಡಿ ಬಳಿ ಬಂದು ನಿಂತು ಒಳಗೆ ಬಿಡುವಂತೆ ಕೋರಿದ್ದರು. ಆದರೆ ಇಂದು ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರಿದ್ದು, ಈಗ ನಿಮ್ಮನ್ನು ಒಳಗೆ ಬಿಟ್ಟರೆ ಸಾಲಿನಲ್ಲಿ ನಿಂತ ಭಕ್ತರು ಗಲಾಟೆ ಮಾಡುತ್ತಾರೆ, ಹೀಗಾಗಿ ಸ್ವಲ್ಪ ಹೊತ್ತು ಕಾಯಿರಿ ಎಂದು ಪಿಎಸ್‌ ಐ ಸವಿತಾ ತಿಳಿಸಿದ್ದರು.

    ಇದೇ ಸಂದರ್ಭದಲ್ಲಿ ಮಫ್ತಿಯಲ್ಲಿದ್ದ ಸರ್ಕಲ್ ಇನ್ಸ್‌ ಪೆಕ್ಟರ್ ಲಕ್ಷ್ಮಿ ಅವರು ಗರ್ಭಗುಡಿಗೆ ತೆರಳಿದ್ದನ್ನು ಐಶ್ವರ್ಯಾ ಪ್ರಶ್ನಿಸಿದರು. ಅದಕ್ಕೆ ಅವರು ನಮ್ಮ ಸರ್ಕಲ್ ಇನ್ಸ್‌ ಪೆಕ್ಟರ್, ಡ್ಯೂಟಿಯಲ್ಲಿದ್ದಾರೆ ಎಂದು ಸವಿತಾ ಸ್ಪಷ್ಟಪಡಿಸಿದರು. ಇದರ ನಡುವೆಯೂ ವಾಗ್ವಾದ ಮುಂದುವರಿದು, ಕೊನೆಗೆ ಐಶ್ವರ್ಯಾ ಅವರು ಪಿಎಸ್‌ ಐ ಸವಿತಾ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಕಪಾಳಮೋಕ್ಷ ಮಾಡಿದ್ದರು. ಪ್ರಸ್ತುತ ಪಿಎಸ್‌ ಐ ಸವಿತಾ ಅವರು ನೀಡಿದ ದೂರಿನನ್ವಯ ಕ್ಯಾತನಹಳ್ಳಿ ಪೊಲೀಸ್ ಠಾಣೆಯಲ್ಲಿ ಐಶ್ವರ್ಯಾ ವಿರುದ್ಧ ಎಫ್‌ ಐಆರ್ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    Ganesh Tumkuru
    • Website

    Related Posts

    ಕರ್ತವ್ಯನಿರತ ಮಹಿಳಾ ಪಿಎಸ್‌ ಐ ಮೇಲೆ ಶಾಸಕನ ಪುತ್ರಿಯಿಂದ ಹಲ್ಲೆ: ಕಪಾಳಮೋಕ್ಷ ಆರೋಪ, ಎಫ್‌ ಐಆರ್ ದಾಖಲು!

    August 14, 2026

    ದೇವೇಗೌಡರ ಪತ್ನಿ ಚೆನ್ನಮ್ಮ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ; ಸರ್ಕಾರಿ ಗೌರವ ನಿರ್ಧಾರ ಸಮರ್ಥಿಸಿಕೊಂಡ ಸಿಎಂ ಡಿ.ಕೆ. ಶಿವಕುಮಾರ್

    August 13, 2026

    ವಿಐಪಿ ಸೆಲ್ ನಿಂದ ಸಾಮಾನ್ಯ ಕೈದಿಗಳ ಸೆಲ್ ಗೆ ಪ್ರಜ್ವಲ್ ರೇವಣ್ಣ ಶಿಫ್ಟ್: ಮೊಬೈಲ್ ನಲ್ಲಿ ಅಶ್ಲೀಲ ವಿಡಿಯೋಗಳು ಪತ್ತೆ!

    August 13, 2026

    Leave A Reply Cancel Reply

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಮಹಿಳಾ ಪಿಎಸ್‌ ಐ ಮೇಲೆ ಕಪಾಳಮೋಕ್ಷ ಪ್ರಕರಣ: ಮಗಳ ವರ್ತನೆಗೆ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ ಬಿಜೆಪಿ ಶಾಸಕ ಸುರೇಶ್ ಗೌಡ

    August 14, 2026

    ಬೆಂಗಳೂರು: ಕರ್ತವ್ಯದಲ್ಲಿದ್ದ ಮಹಿಳಾ ಪೊಲೀಸ್ ಸಬ್ ಇನ್‌ ಸ್ಪೆಕ್ಟರ್ ಸವಿತಾ ಅವರ ಮೇಲೆ ತಮ್ಮ ಪುತ್ರಿ ಐಶ್ವರ್ಯಾ ಕಪಾಳಮೋಕ್ಷ ಮಾಡಿರುವ…

    ಕರ್ತವ್ಯನಿರತ ಮಹಿಳಾ ಪಿಎಸ್‌ ಐ ಮೇಲೆ ಶಾಸಕನ ಪುತ್ರಿಯಿಂದ ಹಲ್ಲೆ: ಕಪಾಳಮೋಕ್ಷ ಆರೋಪ, ಎಫ್‌ ಐಆರ್ ದಾಖಲು!

    August 14, 2026

    ಕೊರಟಗೆರೆಯಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲ್ಲಿಸಿ ಹೆಚ್.ಡಿ.ಕೆ. ಅವರನ್ನು ಮುಖ್ಯಮಂತ್ರಿ ಮಾಡುವುದೇ ಗುರಿ | ಪಿ.ಎನ್. ಕೃಷ್ಣಮೂರ್ತಿ

    August 14, 2026

    ಬರಗಾಲದ ಆತಂಕ ಬೇಡ, ಕಾಂಗ್ರೆಸ್ ಸರ್ಕಾರ, ನಾವೂ ಇದ್ದೇವೆ: ಕೆ.ಎನ್. ರಾಜಣ್ಣ

    August 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.