nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಿಪಟೂರಿನ ಎಚ್.ಬೈರಾಪುರದಲ್ಲಿ ಕರಿಯಮ್ಮ, ಪ್ಲೇಗಿನಮ್ಮ ದೇವಿ ಜಾತ್ರೆ: ವಿಜೃಂಭಣೆಯ ರಥೋತ್ಸವಕ್ಕೆ ತೆರೆ

    April 9, 2026

    ತುಮಕೂರು ಜನತಾ ದರ್ಶನದಲ್ಲೇ ಅವ್ಯವಸ್ಥೆಯ ದರ್ಶನ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಚಿವ ಪರಮೇಶ್ವರ್ ಗರಂ, ದೂರುಗಳ ರಾಶಿ

    April 9, 2026

    ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ: ದೂರು ನೀಡಿದ್ದ ಬೆನ್ನಲ್ಲೇ ಬೆಂಗಳೂರಿನ ಮಹಿಳೆ ನಾಪತ್ತೆ!

    April 8, 2026
    Facebook Twitter Instagram
    ಟ್ರೆಂಡಿಂಗ್
    • ತಿಪಟೂರಿನ ಎಚ್.ಬೈರಾಪುರದಲ್ಲಿ ಕರಿಯಮ್ಮ, ಪ್ಲೇಗಿನಮ್ಮ ದೇವಿ ಜಾತ್ರೆ: ವಿಜೃಂಭಣೆಯ ರಥೋತ್ಸವಕ್ಕೆ ತೆರೆ
    • ತುಮಕೂರು ಜನತಾ ದರ್ಶನದಲ್ಲೇ ಅವ್ಯವಸ್ಥೆಯ ದರ್ಶನ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಚಿವ ಪರಮೇಶ್ವರ್ ಗರಂ, ದೂರುಗಳ ರಾಶಿ
    • ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ: ದೂರು ನೀಡಿದ್ದ ಬೆನ್ನಲ್ಲೇ ಬೆಂಗಳೂರಿನ ಮಹಿಳೆ ನಾಪತ್ತೆ!
    • ಸಿದ್ದೇಶ್ವರ ಜಾತ್ರೆ: ಶತ್ರುಗಳ ಮನೆ ಮುಂದೆ ಕುಣಿದಿದ್ದಕ್ಕೆ ವ್ಯಕ್ತಿಯ ಬರ್ಬರ ಹತ್ಯೆ, ಎಂಟು ಮಂದಿ ಬಂಧನ
    • ದ್ವಿತೀಯ ಪಿಯುಸಿ ಫಲಿತಾಂಶ 2026: ಡಿಜಿಲಾಕರ್ ಮೂಲಕ ಅಂಕಪಟ್ಟಿ ಪಡೆಯುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ
    • ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆ ವಿರುದ್ಧ ಕೇಸ್
    • ಹೈನುಗಾರರ ಸೇವೆಗೆ ಮರಳಿರುವುದು ಸಂತಸ ತಂದಿದೆ: ತುಮುಲ್ ಕಚೇರಿಯಲ್ಲಿ ಕೊಂಡವಾಡಿ ಚಂದ್ರಶೇಖರ್
    • ಜನಗಣತಿ ತರಬೇತಿ ವೇಳೆ ಶಿಕ್ಷಕಿ ಅಸ್ವಸ್ಥ: ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ ತಹಶೀಲ್ದಾರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶವಸಂಸ್ಕಾರಕ್ಕೆ ಸ್ಮಶಾನವೇ ಇಲ್ಲದೇ ದಲಿತ ಕುಟುಂಬಗಳ ಪರದಾಟ
    ಕೊರಟಗೆರೆ February 3, 2022

    ಶವಸಂಸ್ಕಾರಕ್ಕೆ ಸ್ಮಶಾನವೇ ಇಲ್ಲದೇ ದಲಿತ ಕುಟುಂಬಗಳ ಪರದಾಟ

    By adminFebruary 3, 2022No Comments2 Mins Read
    dalith

    ಕೊರಟಗೆರೆ : ತಾಲ್ಲೂಕಿನ ಹೊಳವನಹಳ್ಳಿ ಹೋಬಳಿಯ ಬೈರೇನಹಳ್ಳಿಯ ದಲಿತ ಕಾಲೋನಿಯ ಹನುಮಂತರಾಯಪ್ಪ ಎಂಬ ಮೃತ ವ್ಯಕ್ತಿಯ ಶವವನ್ನು ರಸ್ತೆಯಲ್ಲಿಟ್ಟು ಪ್ರತಿಭಟನೆಗೆ ಮುಂದಾಗಿದ್ದಾರೆ.  ವಿಷಯ ತಿಳಿದ ತಕ್ಷಣವೇ ಸ್ಥಳಕ್ಕೆ  ತಹಸೀಲ್ದಾರ್ ನಹಿದಾ ಜಮ್ ಜಮ್ ಭೇಟಿ ನೀಡಿ ಸ್ಪಂದಿಸಿದ್ದಾರೆ.

    100ಕ್ಕೂ ಅಧಿಕ ದಲಿತ ಕುಟುಂಬ ಇರುವಂತಹ ಬೈರೇನಹಳ್ಳಿಗೆ ಗ್ರಾಮದಲ್ಲಿ ಸ್ಮಶಾನವೇ ಮರೀಚಿಕೆಯಾಗಿದೆ.  50ಕ್ಕೂ ಹೆಚ್ಚು ಭಾರಿ ಅರ್ಜಿ ನೀಡಿದ್ದ ದಲಿತರಿಗೆ ಸ್ಮಶಾನದ ಜಾಗ ನಿಗದಿ ಪಡಿಸದೆ ಕೊರಟಗೆರೆ ತಾಲ್ಲೂಕು ಆಡಳಿತ ಜಾಣ ಮೌನವಹಿಸಿದೆ.


    Provided by
    Provided by

    100ಕ್ಕೂ ಹೆಚ್ಚು ಜನ ದಲಿತ ಕುಟುಂಬ ವಾಸವಿರುವ ಬೈರೇನಹಳ್ಳಿ ಗ್ರಾಮದಲ್ಲಿ  ದಲಿತರಿಗೆ ಶವ ಸಂಸ್ಕಾರಕ್ಕೆ ಜಾಗವಿಲ್ಲದೇ ಕೆರೆ-ಕಟ್ಟೆ, ರಸ್ತೆಬದಿ, ಸರಕಾರಿ ಹಳ್ಳದಲ್ಲಿ ಮಣ್ಣು ಮಾಡಬೇಕಿದೆ  ಮಾಡುವ ಸ್ಥಿತಿ ಇದೆ ಎಂದು ಇಲ್ಲಿನ ನಿವಾಸಿಗಳು ದೂರಿದ್ದು,  ತಡರಾತ್ರಿ ಅನಾರೋಗ್ಯದಿಂದ ಮೃತಪಟ್ಟಿದ್ದ ಪರಿಶಿಷ್ಟ ಜಾತಿಯ ಸಮುದಾಯದ ಹನುಮಂತರಾಯಪ್ಪ(55) ಎಂಬವರ  ಮೃತದೇಹವನ್ನು ರಸ್ತೆಯಲ್ಲಿಟ್ಟು ಪ್ರತಿಭಟನೆ ನಡೆಸಿದ ಘಟನೆ ಗುರುವಾರ ನಡೆದಿದೆ.

    ಬೈರೇನಹಳ್ಳಿ ಗ್ರಾಮದ ಲೇ.ತಿಮ್ಮಯ್ಯ ಎಂಬವರ  ಮಗನಾದ ಹನುಮಂತರಾಯಪ್ಪಅನಾರೋಗ್ಯ ಹಿನ್ನಲೆ ಬುಧವಾರ ತಡರಾತ್ರಿ ಮೃತಪಟ್ಟಿದ್ದರು ಮೃತಪಟ್ಟ ದಲಿತ ವ್ಯಕ್ತಿಗೆ ಶವ ಸಂಸ್ಕಾರ ನಡೆಸಲು ಸ್ಮಶಾನವೇ ಇಲ್ಲದಿರುವ ಪರಿಣಾಮ ಬುಧವಾರ ರಾತ್ರಿಯಿಂದ ರಸ್ತೆಯಲ್ಲಿಯೇ ಕಾಯುವಂತಹ ಪರಿಸ್ಥಿತಿ ನಿರ್ಮಾನವಾಗಿದೆ. ಬೈರೇನಹಳ್ಳಿ-ಮಧುಗಿರಿ ಸಂಪರ್ಕದ ಮುಖ್ಯರಸ್ತೆಯ ಅಕ್ಕಪಕ್ಕದಲ್ಲಿ ಈಗಾಗಲೇ ನೂರಾರು ದಲಿತ ಸಮುದಾಯದ ಜನರ ಶವ ಸಂಸ್ಕಾರ ನಡೆಸಲಾಗಿದೆ. ಈಗ ಅಲ್ಲಿ ಗುಂಡಿ ತೋಡಿದರೇ ಶವಗಳ ದೇಹಗಳು ಸಿಗುತ್ತಿವೆ. ಕೊರಟಗೆರೆ ತಹಶೀಲ್ದಾರ್, ಶಾಸಕರು ಮತ್ತು ಅಧಿಕಾರಿಗಳಿಗೆ 50ಕ್ಕೂ ಅಧಿಕ ಅರ್ಜಿಗಳು ನೀಡಿದ್ದರೂ ಪ್ರಯೋಜನಾ ಆಗಿಲ್ಲ ಎಂದು ಸ್ಥಳೀಯರು ಆರೋಪ ಮಾಡಿದ್ದಾರೆ.

    ಘಟನೆ ಸಂಭಂಧ ಬೈರೇನಹಳ್ಳಿ ಗ್ರಾಮದ ದಲಿತ ಯುವ ಮುಖಂಡ ಲಕ್ಷ್ಮೀಕಾಂತ್  ಮಾತನಾಡಿ, ಕಳೆದ 40ವರ್ಷದಿಂದ ಕೆರೆ-ಕಟ್ಟೆ ಮತ್ತು ರಸ್ತೆ ಬದಿಯ ಚರಂಡಿಯೇ ಬೈರೇನಹಳ್ಳಿ ದಲಿತರಿಗೆ ಶವಸಂಸ್ಕಾರದ ಸ್ಥಳವಾಗಿದೆ. ಬೈರೇನಹಳ್ಳಿ ಗ್ರಾಮದ 100 ದಲಿತ ಕುಟುಂಬಗಳಿಗೆ ಸ್ಮಶಾನವೇ ಮರೀಚಿಕೆ ಆಗಿದೆ.  ನಮಗೆ ನಿಗದಿ ಪಡಿಸಿರುವ ಸ್ಥಳವನ್ನು ಗುರುತಿಸುವಲ್ಲಿ ಅಧಿಕಾರಿವರ್ಗ ವಿಫಲವಾಗಿದೆ. ದಯವಿಟ್ಟು ನಮ್ಮ ಸಮುದಾಯ ಬದುಕಲು ಅನುವು ಮಾಡಿಕೊಡಿ ಎಂದು ಮನವಿ ಮಾಡಿದರು.

    dalith

    ನಂತರ ದಲಿತ ಮುಖಂಡ ವೆಂಕಟೇಶ್ ಮಾತನಾಡಿ,  ಪರಿಶಿಷ್ಟ ಜಾತಿ ಮತ್ತು ಪಂಗಡದ ಸಭೆಯಲ್ಲಿ ಕಳೆದ 30ವರ್ಷದಿಂದ ಸ್ಮಶಾನದ ಜಾಗಕ್ಕೆ ಮನವಿ ಮಾಡಲಾಗಿದೆ. ಆದರೆ ನಮ್ಮ ಮನವಿ ಅರ್ಜಿಗಳಿಗೆ ಮಾತ್ರ ಸಿಮೀತವಾಗಿದೆ. ಅಧಿಕಾರಿಗಳ ನಿರ್ಲಕ್ಷದಿಂದ ದಲಿತ ಕುಟುಂಬದ ಸಮಸ್ಯೆಗಳು ಹೆಚ್ಚಾಗುತ್ತಿವೆ. ಸ್ಮಶಾನ ಇಲ್ಲದೇ ರಸ್ತೆಯಲ್ಲಿ ಶವ ಸಂಸ್ಕಾರ ಮಾಡುತ್ತಿರುವ ದುಸ್ಥಿತಿ ಬೈರೇನಹಳ್ಳಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ತಕ್ಷಣ ತಹಶೀಲ್ದಾರ್ ಕೊರಟಗೆರೆ ತಾಲೂಕಿನ ದಲಿತರಿಗೆ ಸ್ಮಶಾನದ ಜಾಗವನ್ನು ಗುರುತಿಸಿ ಕೊಡಬೇಕಿದೆ ಎಂದು ಆಗ್ರಹ ಮಾಡಿದರು.

    ನಂತರ ಕೊರಟಗೆರೆ ತಹಶೀಲ್ದಾರ್ ನಾಹೀದಾ ಜಮ್ ಜಮ್ ಮಾತನಾಡಿ, ಈಗಾಗಲೇ ಬೈರೇನಹಳ್ಳಿ ಗ್ರಾಮದಲ್ಲಿ 4 ಸ್ಮಶಾನ ಜಾಗಗಳು ಇದ್ದರೂ ಕೂಡ ಸ್ಥಳೀಯ ಗ್ರಾಮದವರಿಗೆ ಸರಿಯಾದ ಮಾಹಿತಿ ಇಲ್ಲದ ಕಾರಣ ಸ್ಮಶಾನಕ್ಕಾಗಿ ಅಲೆಯುವಂತಾಗಿದೆ. ದಲಿತ ಕುಟುಂಬಕ್ಕೆ ಬೈರೇನಹಳ್ಳಿ ಗ್ರಾಮದ ಸರ್ವೇ ನಂಬರ್  261ರಲ್ಲಿ 20ಗುಂಟೆ ಜಮೀನು ಸ್ಮಶಾನಕ್ಕಾಗಿ ಗುರುತಿಸಿ, ಗ್ರಾ.ಪಂ.ಗೆ ಹಸ್ತಾಂತರ ಮಾಡಲಾಗಿದೆ. ಸ್ಮಶಾನ ಅಭಿವೃದ್ದಿ ಮಾಡುವಂತೆ ಈಗಾಗಲೇ ಅರಸಾಪುರ ಗ್ರಾ.ಪಂ.ಗೆ ಸೂಚಿಸಿದ್ದೇನೆ. ಕೊರಟಗೆರೆ ತಾಲೂಕಿನಲ್ಲಿ ವಾಸಿಸುತ್ತಿರುವ ದಲಿತರಿಗೆ ಸ್ಮಶಾನದ ಜಾಗ ನೀಡಲು ತುರ್ತು ಕ್ರಮ ಕೈಗೊಳ್ಳುತ್ತೇನೆ ಎಂದು ಭರವಸೆ ನೀಡಿದರು.

    ಬೈರೇನಹಳ್ಳಿಯ ದಲಿತ ಕುಟುಂಬಗಳ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ ತಾತ್ಕಾಲಿಕವಾಗಿ ಬಗೆಹರಿಸುವ ಪ್ರಯತ್ನ ಮಾಡಿದ್ದಾರೆ. ಆದರೆ ಇನ್ನೂಳಿದ 55ಗ್ರಾಮಗಳಲ್ಲಿ ಇದೇ ರೀತಿಯ ಸಮಸ್ಯೆಗಳಿದ್ದು, ತಕ್ಷಣ ಕಾರ್ಯಪ್ರವೃತ್ತರಾಗಿ ದಲಿತ ಕುಟುಂಬಗಳಿಗೆ ಶವ ಸಂಸ್ಕಾರ ಮಾಡಲು ಸ್ಮಶಾನಕ್ಕೆ ಜಾಗವನ್ನು ಹಸ್ತಾಂತರ ಮಾಡಿ ಸ್ಮಶಾನದ ಜಾಗವನ್ನು ಅಭಿವೃದ್ದಿ ಪಡಿಸಬೇಕಿದೆ.

    ವರದಿ: ಮಂಜುಸ್ವಾಮಿ.ಎಂ.ಎನ್. , ಕೊರಟಗೆರೆ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಏ.15ರ ನಂತರ ಮನೆ ಮನೆಗೆ ಜನ ಗಣತಿ ಕಾರ್ಯಕರ್ತರು ಭೇಟಿ | ನಾಗರಿಕರು ಸ್ವಯಂ ಗಣತಿಯಲ್ಲಿ ಭಾಗವಹಿಸಿ: ತಹಶೀಲ್ದಾರ್ ಮಂಜುನಾಥ್ ಕೆ. ಕರೆ

    April 6, 2026

    ಕೊರಟಗೆರೆ: ಜನವಸತಿ ಪ್ರದೇಶದಲ್ಲಿ ಕರಡಿ ಪ್ರತ್ಯಕ್ಷ: ಪಟ್ಟಣದ ಜನತೆಯಲ್ಲಿ ಹೆಚ್ಚಿದ ಆತಂಕ

    April 6, 2026

    ಕೊರಟಗೆರೆ: ಪರವಾನಗಿ ಭೂಮಾಪಕರ ಭದ್ರತೆ ಮತ್ತು ಸೌಲಭ್ಯಕ್ಕೆ ಒತ್ತಾಯಿಸಿ ಪ್ರತಿಭಟನೆ

    March 31, 2026

    Leave A Reply Cancel Reply

    Our Picks

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    Uncategorized

    ತಿಪಟೂರಿನ ಎಚ್.ಬೈರಾಪುರದಲ್ಲಿ ಕರಿಯಮ್ಮ, ಪ್ಲೇಗಿನಮ್ಮ ದೇವಿ ಜಾತ್ರೆ: ವಿಜೃಂಭಣೆಯ ರಥೋತ್ಸವಕ್ಕೆ ತೆರೆ

    April 9, 2026

    ತಿಪಟೂರು: ತಾಲ್ಲೂಕಿನ ಹೊನ್ನವಳ್ಳಿ ಹೋಬಳಿಯ ಎಚ್.ಬೈರಾಪುರ ಗ್ರಾಮದಲ್ಲಿ ಗ್ರಾಮದೇವತೆಗಳಾದ ಕರಿಯಮ್ಮದೇವಿ ಹಾಗೂ ಪ್ಲೇಗಿನಮ್ಮ ದೇವಿ ಜಾತ್ರಾ ಮಹೋತ್ಸವ ಮತ್ತು ರಥೋತ್ಸವವು…

    ತುಮಕೂರು ಜನತಾ ದರ್ಶನದಲ್ಲೇ ಅವ್ಯವಸ್ಥೆಯ ದರ್ಶನ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಚಿವ ಪರಮೇಶ್ವರ್ ಗರಂ, ದೂರುಗಳ ರಾಶಿ

    April 9, 2026

    ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ: ದೂರು ನೀಡಿದ್ದ ಬೆನ್ನಲ್ಲೇ ಬೆಂಗಳೂರಿನ ಮಹಿಳೆ ನಾಪತ್ತೆ!

    April 8, 2026

    ಸಿದ್ದೇಶ್ವರ ಜಾತ್ರೆ: ಶತ್ರುಗಳ ಮನೆ ಮುಂದೆ ಕುಣಿದಿದ್ದಕ್ಕೆ ವ್ಯಕ್ತಿಯ ಬರ್ಬರ ಹತ್ಯೆ, ಎಂಟು ಮಂದಿ ಬಂಧನ

    April 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.