nammatumakuru

    Subscribe to Updates

    Get the latest creative news from FooBar about art, design and business.

    What's Hot

    ದಕ್ಷಿಣ ಕರ್ನಾಟಕದ ಏಕೈಕ ಚಿತ್ರಕಲಾ ಕಾಲೇಜನ್ನು ಉಳಿಸಿ ಬೆಳೆಸಿದವರು ಸಿ.ಸಿ.ಬಾರಕೇರ:  ಡಾ.ಕರಿಯಣ್ಣ ಬಿ.

    July 1, 2025

    ಎಷ್ಟು ಹಣ ಕೊಟ್ಟರೂ ಆ ಒಂದು ಕೆಲಸ ಮಾಡುವುದಿಲ್ಲ ಎಂದ ರಶ್ಮಿಕಾ ಮಂದಣ್ಣ!

    July 1, 2025

    ಬೀದರ್ | ಭ್ರಷ್ಟಾಚಾರ ಆರೋಪ; ದ್ವಿತೀಯ ದರ್ಜೆ ಸಹಾಯಕ ಅಮಾನತು

    July 1, 2025
    Facebook Twitter Instagram
    ಟ್ರೆಂಡಿಂಗ್
    • ದಕ್ಷಿಣ ಕರ್ನಾಟಕದ ಏಕೈಕ ಚಿತ್ರಕಲಾ ಕಾಲೇಜನ್ನು ಉಳಿಸಿ ಬೆಳೆಸಿದವರು ಸಿ.ಸಿ.ಬಾರಕೇರ:  ಡಾ.ಕರಿಯಣ್ಣ ಬಿ.
    • ಎಷ್ಟು ಹಣ ಕೊಟ್ಟರೂ ಆ ಒಂದು ಕೆಲಸ ಮಾಡುವುದಿಲ್ಲ ಎಂದ ರಶ್ಮಿಕಾ ಮಂದಣ್ಣ!
    • ಬೀದರ್ | ಭ್ರಷ್ಟಾಚಾರ ಆರೋಪ; ದ್ವಿತೀಯ ದರ್ಜೆ ಸಹಾಯಕ ಅಮಾನತು
    • ತುಮಕೂರು: ವಿವಿಧ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ
    • ಜುಲೈ 1:  ರಾಷ್ಟ್ರೀಯ ಪತ್ರಿಕಾ ದಿನ: ಪತ್ರಿಕಾ ದಿನಾಚರಣೆಯ ಶುಭಾಶಯಗಳು
    • ಮನೆ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿಹಾಕಿ ಮಹಿಳೆಗೆ ಹಲ್ಲೆ!
    • ಬಿಗ್ ಬಾಸ್ ಸೀಸನ್ 12ಕ್ಕೂ ಕಿಚ್ಚ ಸುದೀಪ್ ನಿರೂಪಣೆ ಫಿಕ್ಸ್!
    • ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಾಮಾಜಿಕ ಗಣತಿ ವರದಿಯನ್ನು ಜಾರಿಗೊಳಿಸಲಾಗುವುದು: ಸಿಎಂ ಸಿದ್ದರಾಮಯ್ಯ
    Uncategorized September 29, 2024

    ಸಾಮಾಜಿಕ ಗಣತಿ ವರದಿಯನ್ನು ಜಾರಿಗೊಳಿಸಲಾಗುವುದು: ಸಿಎಂ ಸಿದ್ದರಾಮಯ್ಯ

    By adminSeptember 29, 2024No Comments3 Mins Read
    siddaramaiah

    ಮೈಸೂರು: ಸ್ವಾತಂತ್ರ್ಯ ದೊರೆತು ಇಷ್ಟು ವರ್ಷಗಳ ನಂತರವೂ ಸೌಲಭ್ಯಗಳಿಂದ ವಂಚಿತರಾಗಿರುವ ಜನರನ್ನು ಗುರುತಿಸುವ ಉದ್ದೇಶದಿಂದ ನಮ್ಮ ಸರ್ಕಾರ ಸಾಮಾಜಿಕ ಗಣತಿಯನ್ನು ನಡೆಸಿದ್ದು, ಮುಂದಿನ ದಿನಗಳಲ್ಲಿ ಈ ವರದಿಯನ್ನು ಸಚಿವ ಸಂಪುಟದ ಮುಂದಿರಿಸಿ, ಶಿಫಾರಸ್ಸುಗಳನ್ನು ಅನುಷ್ಠಾನಗೊಳಿಸಲು ಕ್ರಮಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

    ಇಂದು ಮೈಸೂರಿನಲ್ಲಿ ಹಿಂದುಳಿದ ವರ್ಗಗಳ ವಸತಿ ನಿಲಯಗಳ ಹಳೆ ವಿದ್ಯಾರ್ಥಿಗಳ ಸಂಘದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.


    Provided by

    ಸಾಮಾಜಿಕ ಗಣತಿ ವರದಿಯನ್ನು ಸರ್ಕಾರ ಸ್ವೀಕರಿಸಿದ್ದು, ಆದರೆ ಹಲವು ಕಾರಣದಿಂದ ಆ ವರದಿ ಇನ್ನೂ ಜಾರಿಯಾಗಿಲ್ಲ. ಆದರೆ ಮುಂದಿನ ದಿನಗಳಲ್ಲಿ ಈ ವರದಿಯನ್ನು ಸಚಿವ ಸಂಪುಟದ ಮುಂದಿರಿಸಿ ಜಾರಿಗೆ ಕ್ರಮಕೈಗೊಳ್ಳಲಾಗುವುದು. ಜಾತಿ ಜನಗಣತಿ ನಮ್ಮ ಪಕ್ಷದ ಸಿದ್ದಾಂತವೂ ಆಗಿದೆ. ದೇಶದಲ್ಲಿ ಜನಸಂಖ್ಯೆಯ ಗಣತಿಯೊಂದಿಗೆ ಜಾತಿ ಗಣತಿ ಕಾರ್ಯ 1930ರ ನಂತರ ಆಗಿಲ್ಲ. ಈಗ ಎಲ್ಲಾ ರಾಜ್ಯಗಳಲ್ಲಿ ಜಾತಿ ಗಣತಿ ಕುರಿತು ಚರ್ಚೆ ನಡೆಯುತ್ತಿದೆ ಎಂದರು.

    ಹಿಂದುಳಿದವರಿಗೆ, ದಲಿತ- ಅಲ್ಪಸಂಖ್ಯಾತರಿಗೆ ಸಮಾನ ಅವಕಾಶ ದೊರೆಯಬೇಕೆಂಬುದು ಸಂವಿಧಾನ ರಚಿಸಿದ ಡಾ.ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರ ಉದೇಶವಾಗಿತ್ತು. ಜನ ಅವಕಾಶಗಳಿಂದ ವಂಚಿತರಾಗಿರುವುದರಿಂದಲೇ ಅಸಮಾನತೆ ಸೃಷ್ಟಿಯಾಗಿದ್ದು, ಎಲ್ಲರಿಗೂ ಸಮಾನ ಅವಕಾಶವನ್ನು ಸಂವಿಧಾನದ ಮೂಲಕ ಕಲ್ಪಿಸಲು ಬಾಬಾ ಸಾಹೇಬರು ಪ್ರಯತ್ನಿಸಿದರು. ಸಾಮಾಜಿಕ ಜವಾಬ್ದಾರಿಯನ್ನು ಈ ತಲೆಮಾರಿನಲ್ಲಿ ಮೂಡಿಸುವ ಉದ್ದೇಶದಿಂದ ಸಂವಿಧಾನ ಪೀಠಿಕೆ ಬಗ್ಗೆ ಅರಿವು ಮೂಡಿಸುವ ಕಾರ್ಯವನ್ನು ರಾಜ್ಯದಾದ್ಯಂತ ನಾವು ಮಾಡಿದ್ದೇವೆ ಎಂದರು.

    ವೈಜ್ಞಾನಿಕ ಮನೋಭಾವವನ್ನು ಬೆಳೆಸಿ ಉತ್ತಮ ಮಾನವರಾಗಿ ರೂಪಿಸುವಂತಹ ಶಿಕ್ಷಣವೇ ಗುಣಮಟ್ಟದ ಶಿಕ್ಷಣವಾಗಿದೆ. ಜಾತಿ ವ್ಯವಸ್ಥೆ, ಕಂದಾಚಾರ, ಮೌಢ್ಯಗಳಿಂದ ಮುಕ್ತರಾಗಿ ಕುವೆಂಪು ಹೇಳಿದ ಹಾಗೆ ವಿಶ್ವ ಮಾನವರಾಗಬೇಕಿದೆ. ವೈಜ್ಞಾನಿಕತೆ, ವೈಚಾರಿಕತೆ, ಸಮಾಜಮುಖಿಯಾದ ಜವಾಬ್ದಾರಿ ಬೆಳೆಯದೆ ಹೋದರೆ ವಿದ್ಯೆ ದೊರೆತು ಏನು ಪ್ರಯೋಜನ? ಪ್ರತಿಯೊಬ್ಬರೂ ಸಮಾಜಮುಖಿಯಾಗಿ ಬದುಕಿ, ಸಮಾಜಕ್ಕೆ ನಮ್ಮ ಕೊಡುಗೆ ಏನು ಎಂದು ಯೋಚಿಸಬೇಕಿದೆ.

    ವಸತಿ ನಿಲಯಗಳಲ್ಲಿ ಕಲಿತವರು ಇಂದು ಅನೇಕ ಮಂದಿ ಉನ್ನತ ಸ್ಥಾನಗಳಲ್ಲಿದ್ದಾರೆ. ಈ ರೀತಿ ಉನ್ನತ ಹುದ್ದೆಗಳಲ್ಲಿರುವವರು ಸಮಾಜಕ್ಕೆ ಹಿಂತಿರುಗಿ ಕೊಡುಗೆ ನೀಡಬೇಕಾಗಿದೆ. ನೀವು ಯಾವ ಕ್ಷೇತ್ರದಲ್ಲಿದ್ದೀರಿ ಅಲ್ಲಿ ಸಮಾಜದ ದೀನ ದಲಿತರಿಗಾಗಿ ನಿಮ್ಮ ಕೈಯಿಂದಾಗುವಷ್ಟು ಸಹಾಯ ಮಾಡಿ. ಇದುವೇ ನೀವು ಸಮಾಜಕ್ಕೆ ನೀಡುವ ಕೊಡುಗೆ. ಸಮಾಜದ ಋಣ ತೀರಿಸಿದರೆ ನಮ್ಮ ಜೀವನ ಸಾರ್ಥಕ ಎಂದರು.

    ಸಮಾಜದ ಬಗ್ಗೆ ಚಿಂತಿಸದೆ, ಕುಟುಂಬದ ಬಗ್ಗೆ ಮಾತ್ರ ಯೋಚಿಸುವವರು ಸ್ವಾರ್ಥಿಗಳಾಗುತ್ತಾರೆ. ಇಂತವರಿಂದಲೇ ಸಮಾಜದಲ್ಲಿ ವೃದ್ಧಾಶ್ರಮಗಳ ಸಂಖ್ಯೆಯೂ ಹೆಚ್ಚಾಗುತ್ತಿದೆ. ವ್ಯವಸ್ಥೆಯಲ್ಲಿ ಬದಲಾವಣೆ ತರಲು ಪ್ರತಿಯೊಬ್ಬರೂ ಪ್ರಯತ್ನಿಸಬೇಕು ಎಂದು ಮನವಿ ಮಾಡಿದರು.

    ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಈಗಲೂ ಸಮಾಜದಲ್ಲಿ ಜಾತಿ ಶ್ರೇಣಿಯನ್ನು ಮುಂದುವರೆಸಲು ಪ್ರಯತ್ನಿಸುತ್ತಿದ್ದಾರೆ. ಅವರು ಈ ಸಮಾಜದಲ್ಲಿ ದಲಿತರು, ಹಿಂದುಳಿದವರು ಮತ್ತು ಅಲ್ಪಸಂಖ್ಯಾತರು ಮುಂದೆ ಬರುವುದನ್ನು ಇಚ್ಛೆ ಪಡುವುದಿಲ್ಲ, ಈ ಹಿನ್ನೆಲೆಯಲ್ಲಿ ಹಿಂದೆ ಮುಖ್ಯಮಂತ್ರಿಯಾಗಿದ್ದಾಗ ಬಡವರಿಗೆ ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ನೀಡಲು ಹಲವು ಭಾಗ್ಯಗಳನ್ನು ಜಾರಿಗೊಳಿಸಿದ್ದೆ. ಈಗ ಐದು ಗ್ಯಾರಂಟಿ ಯೋಜನೆಗಳ ಮೂಲಕ ಸಮಾಜದ ಎಲ್ಲಾ ಜಾತಿಯ ದುರ್ಬಲ ವರ್ಗಕ್ಕೆ ಆರ್ಥಿಕವಾಗಿ ಶಕ್ತಿ ತುಂಬುವ ಕಾರ್ಯವನ್ನು ಮಾಡಲಾಗಿದೆ.

    ಹಿಂದುಳಿದ ವರ್ಗ, ಪರಿಶಿಷ್ಟ ಜಾತಿ, ಪರಿಶಿಷ್ಠ ಪಂಗಡ, ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಶಿಕ್ಷಣ ಕಡ್ಡಾಯವಾಗಿ ದೊರೆಯಬೇಕು. ಈ ನಿಟ್ಟನಲ್ಲಿ ವಿದ್ಯಾರ್ಥಿ ನಿಲಯಗಳು ಅತ್ಯಾವಶ್ಯಕ. ಜಾತಿ ವ್ಯವಸ್ಥೆ ಆರ್ಥಿಕ, ಸಾಮಾಜಿಕ ಅಸಮಾನತೆಗೆ ಕಾರಣವಾಗಿದ್ದು, ದುರ್ಬಲ ವರ್ಗದ ಜನರು ಅವಕಾಶದಿಂದಲೂ ವಂಚಿತರಾಗುತ್ತಿದ್ದಾರೆ. ಸಮಾನ ಅವಕಾಶಗಳು ದೊರೆಯುವ ಮೂಲಕ ತುಳಿತಕ್ಕೊಳಗಾದವರು ಜೀವನದಲ್ಲಿ ಅಭಿವೃದ್ಧಿ ಹೊಂದುವಂತಾಗಬೇಕು. ಯಾವುದೇ ಜಾತಿ ಧರ್ಮಗಳು ಕರ್ಮಸಿದ್ಧಾಂತವನ್ನು ಪ್ರತಿಪಾದಿಸುವುದಿಲ್ಲ ಎಂದರು.

    ಇತಿಹಾಸ ತಿಳಿದವರು ಮಾತ್ರ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯ ಎಂಬುದನ್ನು ಡಾ.ಬಿ.ಆರ್.ಅಂಬೇಡ್ಕರ್ ರವರು ತಿಳಿಸಿದ್ದಾರೆ. ಎಲ್ಲರೂ ಸರಿಸಮಾನರಾಗಿ ಬಾಳಿದಾಗ ಮಾತ್ರ ಸಮಸಮಾಜ ನಿರ್ಮಾಣ ಸಾಧ್ಯ ಎಂದು ಬುದ್ಧ, ಬಸವಾದಿ ಶರಣರು ಹಾಗೂ ಅಂಬೇಡ್ಕರ್, ಗಾಂಧಿಜೀ ಅವರ ಪ್ರತಿಪಾದನೆಯಾಗಿತ್ತು ಎಂದರು.

    ನಮ್ಮ ಸಂವಿಧಾನ ಜಾರಿಯಾಗುವ ಮೊದಲೇ ಮೈಸೂರು ರಾಜ್ಯದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಆಡಳಿತದಲ್ಲಿ ಮೀಸಲಾತಿಯನ್ನು ಜಾರಿಗೆ ತರಲಾಗಿತ್ತು. 1960 ರಲ್ಲಿ ನಾಗೇಗೌಡ ಸಮಿತಿ ರಚನೆಯಾಯಿತು. ದೇವರಾಜ ಅರಸು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಹಾವನೂರು ಆಯೋಗ ರಚಿಸಲಾಯಿತು. ವರದಿಗೆ ವಿರೋಧದ ನಡುವೆಯೂ ಜಾರಿಗೆ ತರಲಾಯಿತು. 1977 ರಲ್ಲಿ ಹಿಂದುಳಿದ ವರ್ಗಗಳ ಮಕ್ಕಳಿಗೆ ವಿದ್ಯಾರ್ಥಿ ನಿಲಯಗಳನ್ನು ಪ್ರಾರಂಭಿಸಲಾಯಿತು. ವಿದ್ಯಾರ್ಥಿನಿಲಯಗಳಲ್ಲಿ ಶೇ.75 ರಷ್ಟು ಹಿಂದುಳಿದ ಜಾತಿಗಳ ಮಕ್ಕಳಿದ್ದರೆ, ಶೇ.25 ರಷ್ಟು ಪರಿಶಿಷ್ಠ ಜಾತಿ ಹಾಗೂ ಪರಿಶಿಷ್ಠ ಪಂಗಡದ ಮಕ್ಕಳಿದ್ದಾರೆ. 1,87,000 ವಿದ್ಯಾರ್ಥಿಗಳು ಇಂದು ವಿದ್ಯಾರ್ಥಿನಿಲಯಗಳಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.

    ನಾನು ಓದುವಾಗ ಮೀಸಲಾತಿ ವ್ಯವಸ್ಥೆ ಇಲ್ಲದಿದ್ದ ಕಾರಣ, ಉನ್ನತ ಶಿಕ್ಷಣಕ್ಕೆ ಅವಕಾಶ ದೊರಕಲಿಲ್ಲ. ಪಿಯುಸಿ, ಪದವಿ ಮಾಡುವ ಸಂದರ್ಭದಲ್ಲಿ ವಸತಿ ವ್ಯವಸ್ಥೆ ಇಲ್ಲದೇ, ನಾನೇ ಒಂದು ರೂಂ ಮಾಡಿಕೊಂಡು ಓದುತ್ತಿದ್ದೆ. ಆದ್ದರಿಂದ ವಿದ್ಯಾರ್ಥಿಗಳ ಕಷ್ಟಗಳ ಬಗ್ಗೆ ಅರಿತಿದ್ದ ನಾನು ವಿದ್ಯಾಸಿರಿ ಯೋಜನೆಯನ್ನು ಜಾರಿ ಮಾಡಿದೆ ಎಂದು ತಿಳಿಸಿದರು.

    ವಿದ್ಯಾರ್ಥಿ ನಿಲಯಗಳಲ್ಲಿ ಪೌಷ್ಟಿಕ ಆಹಾರ ದೊರಕಿಸುವ ಉದ್ದೇಶದಿಂದ ಪ್ರೀಮೆಟ್ರಿಕ್ ವಿದ್ಯಾರ್ಥಿಗಳಿಗೆ ನೀಡುವ ವಿದ್ಯಾರ್ಥಿ ವೇತನವನ್ನು ಹೆಚ್ಚಳ ಮಾಡಿದೆ. ಹೀಗೆ ಐದು ವರ್ಷವೂ ಕೂಡ ವಿದ್ಯಾರ್ಥಿ ವೇತನವನ್ನು ಹಂತ ಹಂತವಾಗಿ ಹೆಚ್ಚಿಸಲಾಗಿ, ಮುಂಚೆ ಇದ್ದ 750 ರೂ ವಿದ್ಯಾರ್ಥಿ ವೇತನವನ್ನು 1750 ರೂ.ಗಳಿಗೆ ಹೆಚ್ಚಿಸಲಾಗಿದೆ. ಹಾಸ್ಟೆಲ್ ಗಳಲ್ಲಿ ಇರುವ ವಿದ್ಯಾರ್ಥಿಗಳಿಗೆ ಪೌಷ್ಟಿಕ ಆಹಾರ ಲಭಿಸಿದಾಗ ಮಾತ್ರ ಉತ್ತಮ ಜ್ಞಾನಾರ್ಜನೆ ಮಾಡಲು ಸಾಧ್ಯ. 2024-25 ರಲ್ಲಿಯೂ ಕೂಡ ವಿದ್ಯಾರ್ಥಿ ವೇತನವನ್ನು 1850 ರೂ.ಗಳಿಗೆ ಪುನ: ಹೆಚ್ಚಿಸಲಾಗಿದೆ.

    ನಾನು ಹಣಕಾಸು ಮಂತ್ರಿಯಾಗಿದ್ದಾಗ ದಲಿತ ಸಂಘರ್ಷ ಸಮಿತಿಯವರ ಸಾರಾಯಿ ಅಂಗಡಿ ಬೇಡ, ಮಕ್ಕಳಿಗೆ ವಸತಿ ಶಾಲೆ ನಿರ್ಮಾಣವಾಗಬೇಕೆಂಬ ಬೇಡಿಕೆಯನ್ನಾಧರಿಸಿ, 1994-95 ರಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯನ್ನು ಪ್ರಾರಂಭಿಸಲಾಯಿತು. ಹೋಬಳಿಗೊಂದು ವಸತಿ ಶಾಲೆ ಯೋಜನೆಯಂತೆ ರಾಜ್ಯದಲ್ಲಿ ಒಟ್ಟು 822 ಮೊರಾರ್ಜಿ ದೇಸಾಯಿ ವಸತಿ ಶಾಲೆಗಳನ್ನು ನಿರ್ಮಿಸಲಾಗಿದೆ. ಈ ವರ್ಷ 20 ವಸತಿ ಶಾಲೆ ನಿರ್ಮಿಸಲು ತೀರ್ಮಾನಿಸಲಾಗಿದೆ. ಹಳ್ಳಿಗಾಡಿನ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ದೊರೆಯಬೇಕೆಂಬ ಉದ್ದೇಶದಿಂದ ಮುಂದಿನ ವರ್ಷದೊಳಗೆ ರಾಜ್ಯದ ಪ್ರತಿ ಹೋಬಳಿಯಲ್ಲಿ ಒಂದು ವಸತಿ ಶಾಲೆ ನಿರ್ಮಿಸುವ ಗುರಿಯನ್ನು ಸಾಧಿಸಬೇಕಿದೆ.

    ಕಲ್ಯಾಣ ಕರ್ನಾಟಕ ಭಾಗದಲ್ಲಿ ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ. ಆದ್ದರಿಂದ ಹತ್ತನೆ ತರಗತಿಯಲ್ಲಿ ಓದುವ ಮಕ್ಕಳಿಗೆ ವಾರಕ್ಕೆ ಆರು ದಿನ ಮೊಟ್ಟೆ ನೀಡಲಾಗುತ್ತಿದೆ. ಅನ್ನಭಾಗ್ಯದಡಿ 5 ಕೆಜಿ ಅಕ್ಕಿ, ಕ್ಷೀರಭಾಗ್ಯ ಕಾರ್ಯಕ್ರಮ, ಬಡಮಕ್ಕಳಿಗೆ ಶೂ ಭಾಗ್ಯ ಸೇರಿದಂತೆ ಹಲವು ಜನಪರ ಯೋಜನೆ ಜಾರಿಗೆ ತರಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ನಿರುದ್ಯೋಗಿ ಯುವಕರಿಗೆ ಸಿಹಿ ಸುದ್ದಿ: ತುಮಕೂರಿನಲ್ಲಿದೆ ಉದ್ಯೋಗಾವಕಾಶ

    June 14, 2025

    ಬಸ್ ಫ್ರೀ ಅಂತ ಟಿಕೆಟ್ ಇಲ್ಲದೇ ಪ್ರಯಾಣಿಸುವಂತಿಲ್ಲ: ಕೆಎಸ್ ಆರ್ ಟಿಸಿ ವಿಧಿಸಿದ ದಂಡದ ಮೊತ್ತ ಎಷ್ಟು ಗೊತ್ತಾ?

    May 10, 2025

    ದಾಂಪತ್ಯ ಜೀವನಕ್ಕೆ ಕಾಲಿಟ್ಟ ಚೈತ್ರಾ ಕುಂದಾಪುರ: ಅಣ್ಣ ಸ್ಥಾನದಲ್ಲಿ ನಿಂತ ರಜತ್‌ ಬುಜ್ಜಿ

    May 9, 2025
    Our Picks

    ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು

    June 30, 2025

    ಇಸ್ರೇಲ್ ಪರ ಬೇಹುಗಾರಿಕೆ: ಮೂವರನ್ನು ಗಲ್ಲಿಗೇರಿಸಿದ ಇರಾನ್

    June 25, 2025

    ಕೆಲವರಿಗೆ ಮೋದಿಯೇ ಮೊದಲು: ಶಶಿ ತರೂರ್ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಟೀಕೆ

    June 25, 2025

    ಏಳು ಪ್ರಮುಖ ಮಸೂದೆಗಳಿಗೆ ಅನುಮೋದನೆ ನೀಡಲು ರಾಷ್ಟ್ರಪತಿಗೆ ಸಿಎಂ ಸಿದ್ದರಾಮಯ್ಯ ಮನವಿ

    June 24, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ದಕ್ಷಿಣ ಕರ್ನಾಟಕದ ಏಕೈಕ ಚಿತ್ರಕಲಾ ಕಾಲೇಜನ್ನು ಉಳಿಸಿ ಬೆಳೆಸಿದವರು ಸಿ.ಸಿ.ಬಾರಕೇರ:  ಡಾ.ಕರಿಯಣ್ಣ ಬಿ.

    July 1, 2025

    ತುಮಕೂರು :  ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತುಮಕೂರು ಮತ್ತು ಸರ್ಕಾರಿ ಚಿತ್ರಕಲಾ ಮಹಾವಿದ್ಯಾಲಯ, ತುಮಕೂರು ಇವರ ಸಂಯುಕ್ತ ಆಶ್ರಯದಲ್ಲಿ…

    ಎಷ್ಟು ಹಣ ಕೊಟ್ಟರೂ ಆ ಒಂದು ಕೆಲಸ ಮಾಡುವುದಿಲ್ಲ ಎಂದ ರಶ್ಮಿಕಾ ಮಂದಣ್ಣ!

    July 1, 2025

    ಬೀದರ್ | ಭ್ರಷ್ಟಾಚಾರ ಆರೋಪ; ದ್ವಿತೀಯ ದರ್ಜೆ ಸಹಾಯಕ ಅಮಾನತು

    July 1, 2025

    ತುಮಕೂರು: ವಿವಿಧ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

    July 1, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.