nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಾವೇರಿ ನೀರು ಹಂಚಿಕೆ ವಿವಾದ: ತಮಿಳುನಾಡು ಸಿಎಂ ಕರ್ನಾಟಕ ಭೇಟಿ ಮುಂದೂಡಿಕೆ

    July 31, 2026

    ಬೀದರ್: ಬಸವಕಲ್ಯಾಣದಲ್ಲಿ ಕೆರೆಯಂತಾದ ರಸ್ತೆಗಳು; ಗುಂಡಿಗಳಲ್ಲಿ ಈಜಾಡಿದ ಮಕ್ಕಳು!

    July 31, 2026

    ಸರಗೂರು: ತಾಯಿ ಚಿಕ್ಕದೇವಮ್ಮ ಬೆಟ್ಟದಲ್ಲಿ ಮೂರನೇ ಆಷಾಢ ಶುಕ್ರವಾರದ ಸಂಭ್ರಮ; ವಿಶೇಷ ಪೂಜೆ ಹಾಗೂ ಅನ್ನಸಂತರ್ಪಣೆ

    July 31, 2026
    Facebook Twitter Instagram
    ಟ್ರೆಂಡಿಂಗ್
    • ಕಾವೇರಿ ನೀರು ಹಂಚಿಕೆ ವಿವಾದ: ತಮಿಳುನಾಡು ಸಿಎಂ ಕರ್ನಾಟಕ ಭೇಟಿ ಮುಂದೂಡಿಕೆ
    • ಬೀದರ್: ಬಸವಕಲ್ಯಾಣದಲ್ಲಿ ಕೆರೆಯಂತಾದ ರಸ್ತೆಗಳು; ಗುಂಡಿಗಳಲ್ಲಿ ಈಜಾಡಿದ ಮಕ್ಕಳು!
    • ಸರಗೂರು: ತಾಯಿ ಚಿಕ್ಕದೇವಮ್ಮ ಬೆಟ್ಟದಲ್ಲಿ ಮೂರನೇ ಆಷಾಢ ಶುಕ್ರವಾರದ ಸಂಭ್ರಮ; ವಿಶೇಷ ಪೂಜೆ ಹಾಗೂ ಅನ್ನಸಂತರ್ಪಣೆ
    • ಸರಗೂರು: ಮಾನವ ಹಕ್ಕುಗಳ ರಕ್ಷಣೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ: ಅಹಮದ್ ಖಾನ್ ಸೆರ್
    • ತಿಪಟೂರು: ಆ.12ರಿಂದ ಭೀಮನ ಅಮಾವಾಸ್ಯೆ ಮಹೋತ್ಸವ
    • ಆ.3 ರಿಂದ ಕೋಟೆ ಗ್ರಾಮ ದೇವತೆ ಅಮ್ಮನವರ ಜಾತ್ರಾ ಮಹೋತ್ಸವ
    • ತುಮಕೂರು:  ಆ.3ರಿಂದ ಕೊಲ್ಲಾಪುರದಮ್ಮ, ಕರುಗಳಮ್ಮ ಜಾತ್ರಾ ಮಹೋತ್ಸವ
    • ಪಾವಗಡ: ವಸತಿ ಶಾಲೆಯಿಂದ ಓಡಿ ಹೋಗಿದ್ದ ವಿದ್ಯಾರ್ಥಿಗಳು ಪತ್ತೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿಕಲಚೇತನರ ಆತ್ಮಸ್ಥೈರ್ಯಕ್ಕೆ ಸಮಾಜದ ಬೆಂಬಲ ಅಗತ್ಯ: ಗೃಹ ಸಚಿವ ಡಾ.ಜಿ.ಪರಮೇಶ್ವರ್
    ತುಮಕೂರು March 23, 2025

    ವಿಕಲಚೇತನರ ಆತ್ಮಸ್ಥೈರ್ಯಕ್ಕೆ ಸಮಾಜದ ಬೆಂಬಲ ಅಗತ್ಯ: ಗೃಹ ಸಚಿವ ಡಾ.ಜಿ.ಪರಮೇಶ್ವರ್

    By adminMarch 23, 2025No Comments2 Mins Read
    tumakuru

    ತುಮಕೂರು:  ವಿಕಲಚೇತನರ ಆತ್ಮಸ್ಥೈರ್ಯಕ್ಕೆ ಸಮಾಜದ ಬೆಂಬಲ ಅಗತ್ಯ. ಅವರನ್ನು ಕಡೆಗಣಿಸದೆ, ನಿಂದಿಸದೆ ಆತ್ಮಗೌರವದಿಂದ ಬದುಕಲು ಅವಕಾಶ ನೀಡಬೇಕು ಎಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.

    ಶನಿವಾರ ಮಹಾತ್ಮ ಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ ಹಾಗೂ ವಿಕಲಚೇತನರ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಎಡಿಐಪಿ(ADIP) ಯೋಜನೆಯಡಿ ಜಿಲ್ಲೆಯ ಕುಣಿಗಲ್, ಶಿರಾ, ಪಾವಗಡ ತಾಲೂಕಿನ ವಿಕಲಚೇತನರಿಗೆ ವಿವಿಧ ಸಾಧನ ಸಲಕರಣೆಗಳ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ನಮ್ಮ ದೇಶದ ಜನಸಂಖ್ಯೆಯಲ್ಲಿ ಶೇಕಡಾ 5ರಷ್ಟು ವಿಶೇಷ ಚೇತನರಿದ್ದು, ಸಾಮಾನ್ಯ ಜನರಿಗಿಂತ ಹೆಚ್ಚು ಪ್ರತಿಭೆ, ಬುದ್ದಿವಂತಿಕೆ ಹೊಂದಿದ್ದಾರೆ ಎಂದು ತಿಳಿಸಿದರು.

    ಇತ್ತೀಚಿನ ದಿನಗಳಲ್ಲಿ ವಿಕಲಚೇತನರು ಅಂತರಾಷ್ಟ್ರೀಯ ಮಟ್ಟದಲ್ಲಿ ಕ್ರೀಡೆ ಸೇರಿದಂತೆ ಹಲವಾರು ಕ್ಷೇತ್ರಗಳಲ್ಲಿ ತಮ್ಮನ್ನು ತಾವು ಗುರುತಿಸಿಕೊಂಡು ಸಾಧನೆ ಮಾಡಿದ್ದಾರೆ. ಸ್ವಾವಲಂಬಿ ಬದುಕಿಗಾಗಿ ಅವರ ಉದ್ಯೋಗ ಕ್ಷೇತ್ರಗಳೂ ಬದಲಾಗುತ್ತಾ, ಹೊಸ ಅವಕಾಶಗಳೂ ದೊರೆಯುತ್ತಿವೆ. ಪ್ರಸ್ತುತ ದಿನಗಳಲ್ಲಿ ವಿಕಲಚೇತನರು ಆಧುನಿಕ ತಂತ್ರಜ್ಞಾನದ ಶಿಕ್ಷಣ ಪಡೆದು ಕಂಪ್ಯೂಟರ್ ಆಪರೇಟರ್, ಡೇಟಾ ಎಂಟ್ರಿ ಆಪರೇಟರ್ ನೌಕರಿ ಸೇರಿದಂತೆ ಸರ್ಕಾರದ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸುವ ಮೂಲಕ ತಮ್ಮ ಜೀವನ ರೂಪಿಸಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದರು.

    ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಮಾತನಾಡಿ ವಿಕಲಚೇತನರಿಗಾಗಿ ಎಲ್ಲ ಇಲಾಖೆಗಳ ಅನುದಾನದಲ್ಲಿ ಶೇಕಡಾ 3ರಷ್ಟು ಮೀಸಲಾತಿ ನೀಡಲಾಗುತ್ತದೆ. ಈ ಅನುದಾನವನ್ನು ಬಳಸಿಕೊಂಡು ವಿಲಚೇತನರಿಗೆ ಸರ್ಕಾರಿ ಸೌಲಭ್ಯಗಳು ಸಿಗುವಂತೆ ಅಧಿಕಾರಿಗಳು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕೆಂದು ತಿಳಿಸಿದರು.

    ವಿಶೇಷ ಯೋಜನೆಯಡಿ ಸರ್ಕಾರಿ ಸೌಲಭ್ಯಗಳನ್ನು ಪಡೆಯಲು ಯುಡಿಐಡಿ ಗುರುತಿನ ಚೀಟಿ ಹೊಂದಿರಬೇಕು. ಜಿಲ್ಲೆಯ ಪ್ರತಿ ತಾಲೂಕಿನಲ್ಲಿ ವಿಶೇಷ ಶಿಬಿರಗಳನ್ನು ನಡೆಸಿ ವಿಶೇಷ ಚೇತನರಿಗೆ ಗುರುತಿನ ಚೀಟಿ ನೀಡಲಾಗುತ್ತಿದ್ದು, ಜಿಲ್ಲೆಯಲ್ಲಿ ಈಗಾಗಲೇ ಶೇ.99ರಷ್ಟು ಯುಡಿಐಡಿ ಕಾರ್ಡುಗಳನ್ನು ನೀಡಲಾಗಿದೆ ಎಂದರು.

    ವಿವಿಧ ವಸತಿ ಯೋಜನೆಯಡಿ ಈವರೆಗೆ ಜಿಲ್ಲೆಯಲ್ಲಿ 10,000 ನಿವೇಶನಗಳನ್ನು ಗುರುತಿಸಲಾಗಿದ್ದು, ಇದರಲ್ಲಿ ವಿಶೇಷಚೇತನರಿಗಾಗಿ ಶೇಕಡಾ 3ರಷ್ಟು ಮೀಸಲಾತಿ ನೀಡಲು ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಅಲ್ಲದೆ ವಿಶೇಷಚೇತನ ವಿದ್ಯಾರ್ಥಿಗಳಿಗೆ ವಿದ್ಯಾರ್ಹತೆಗನುಗುಣವಾಗಿ ಲ್ಯಾಪ್‌ಟಾಪ್‌ಗಳನ್ನು ನೀಡಲು ಸಿದ್ಧತೆಗಳು ನಡೆಯುತ್ತಿವೆ ಎಂದು ತಿಳಿಸಿದರು.

    ನಗರ ಶಾಸಕ ಜಿ.ಬಿ. ಜ್ಯೋತಿ ಗಣೇಶ್ ಮಾತನಾಡಿ, ವಿಕಲಚೇತನರಿಗೂ ಸಮಾನ ಅವಕಾಶಗಳು ದೊರೆಯಬೇಕು. ವಿಕಲಚೇತನರಲ್ಲಿಯೂ ಬಹಳ ಪ್ರತಿಭಾವಂತವರಿದ್ದು, ಉತ್ತೇಜನ ನೀಡುವ ಕಾರ್ಯವನ್ನು ಸರ್ಕಾರದಿಂದ ಮಾಡಬೇಕು ಎಂದು ತಿಳಿಸಿದರು.

    ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಶುಭಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ.ವಿ., ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ, ಹೆಚ್.ಎ.ಎಲ್ ಪ್ರತಿನಿಧಿ ಪ್ರಧಾನ ವ್ಯವಸ್ಥಾಪಕ ಕೃಷ್ಣಪ್ಪ, ವಿಕಲ ಚೇತನ ಕಲ್ಯಾಣಾಧಿಕಾರಿ ಚಿದಾನಂದಮೂರ್ತಿ, ಮತ್ತಿತರ ಅಧಿಕಾರಿಗಳು ಇದ್ದರು.

    ಈ ಸಂದರ್ಭದಲ್ಲಿ ಸುಮಾರು 600 ಫಲಾನುಭವಿಗಳಿಗೆ ಬ್ಯಾಟರಿ ಚಾಲಿತ ಮೊಪೆಡ್, ಕೈ ಚಾಲಿತ ಸೈಕಲ್, ಕ್ರಚಸ್(ಊರುಗೋಲು), ವಾಕರ್, ಬ್ರೆöÊಲ್ ಕಿಟ್, ಸ್ಮಾರ್ಟ್ ಫೋನ್, ವ್ಹೀಲ್ ಚೇರ್, ಎಂ.ಆರ್. ಕಿಟ್, ಮತ್ತಿತರ ಸಲಕರಣೆ ಹಾಗೂ ಪಾಲಿಕೆ ವ್ಯಾಪ್ತಿಯ 3 ವಾರ್ಡು ಮತ್ತು 38 ಗ್ರಾಮ ಪಂಚಾಯತಿಗಳಿಗೆ ಕ್ಷಯರೋಗ ಮುಕ್ತವೆಂದು ಘೋಷಿಸಿ ಸಾಂಕೇತಿಕವಾಗಿ ಪ್ರಮಾಣಪತ್ರಗಳನ್ನು ಸಚಿವರು ವಿತರಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಆ.3 ರಿಂದ ಕೋಟೆ ಗ್ರಾಮ ದೇವತೆ ಅಮ್ಮನವರ ಜಾತ್ರಾ ಮಹೋತ್ಸವ

    July 31, 2026

    ತುಮಕೂರು:  ಆ.3ರಿಂದ ಕೊಲ್ಲಾಪುರದಮ್ಮ, ಕರುಗಳಮ್ಮ ಜಾತ್ರಾ ಮಹೋತ್ಸವ

    July 31, 2026

    ವಾಣಿಜ್ಯ ಬಳಕೆಗೆ ಗೃಹ ಬಳಕೆ ಸಿಲಿಂಡರ್ ಬಳಕೆ: 8 ವಶ

    July 30, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕಾವೇರಿ ನೀರು ಹಂಚಿಕೆ ವಿವಾದ: ತಮಿಳುನಾಡು ಸಿಎಂ ಕರ್ನಾಟಕ ಭೇಟಿ ಮುಂದೂಡಿಕೆ

    July 31, 2026

    ಬೆಂಗಳೂರು: ಕರ್ನಾಟಕದಲ್ಲಿ ಕಾವೇರಿ ನೀರು ಹಂಚಿಕೆ ವಿವಾದ ಮತ್ತು ತೀವ್ರ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಆಗಸ್ಟ್ 3ರಂದು ಬೆಂಗಳೂರಿಗೆ ನಿಗದಿಯಾಗಿದ್ದ ತಮಿಳುನಾಡು…

    ಬೀದರ್: ಬಸವಕಲ್ಯಾಣದಲ್ಲಿ ಕೆರೆಯಂತಾದ ರಸ್ತೆಗಳು; ಗುಂಡಿಗಳಲ್ಲಿ ಈಜಾಡಿದ ಮಕ್ಕಳು!

    July 31, 2026

    ಸರಗೂರು: ತಾಯಿ ಚಿಕ್ಕದೇವಮ್ಮ ಬೆಟ್ಟದಲ್ಲಿ ಮೂರನೇ ಆಷಾಢ ಶುಕ್ರವಾರದ ಸಂಭ್ರಮ; ವಿಶೇಷ ಪೂಜೆ ಹಾಗೂ ಅನ್ನಸಂತರ್ಪಣೆ

    July 31, 2026

    ಸರಗೂರು: ಮಾನವ ಹಕ್ಕುಗಳ ರಕ್ಷಣೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ: ಅಹಮದ್ ಖಾನ್ ಸೆರ್

    July 31, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.