ತುಮಕೂರು: ಜಿಲ್ಲೆಯ ಮಧುಗಿರಿ ತಾಲೂಕಿನ ಖಾಸಗಿ ವ್ಯಕ್ತಿಯೊಬ್ಬರ ತೋಟದ ಕೃಷಿ ಹೊಂಡದಲ್ಲಿ ಸೋಡಿಯಂ ಮೆಟಲ್ ಬಳಸಿ ಸ್ಫೋಟ ಮಾಡಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಧಿಸಲಾಗಿದ್ದ ಡ್ರೋನ್ ಪ್ರತಾಪ್‌ಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಮಧುಗಿರಿ 4ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಪ್ರತಾಪ್ ಗೆ ಜಾಮೀನು ಮಂಜೂರು ಮಾಡಿ ಆದೇಶ ನೀಡಿದೆ.
ಬಿಗ್ ಬಾಸ್ ರಿಯಾಲಿಟಿ ಶೋನ ಸ್ಪರ್ದಿಯಾಗಿದ್ದ ಪ್ರತಾಪ್, ತುಮಕೂರಿನ ಕೃಷಿಹೊಂಡದಲ್ಲಿ ಸೋಡಿಯಂ ಬಳಸಿ ಸ್ಪೋಟದ ಪ್ರಯೋಗ ಮಾಡಿದ್ದನು. ಜನಕಲೋಟಿ ಗ್ರಾಮದ ಬಳಿ ಕೃಷಿ ಹೊಂಡದಲ್ಲಿ ಸ್ಪೋಟದ ಪ್ರಯೋಗ ಮಾಡಿದ್ದಲ್ಲದೆ, ಸ್ಫೋಟದ ದೃಶ್ಯವನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದನು.
ಸ್ಪೋಟದ ವಿಡಿಯೋವನ್ನು ಆಧರಿಸಿ ಮಿಡಿಗೇಶಿ ಠಾಣೆ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣವನ್ನು ದಾಖಲಿಸಿಕೊಂಡು ಡ್ರೋನ್ ಪ್ರತಾಪ್ ನನ್ನು ಅರೆಸ್ಟ್ ಮಾಡಿದ್ದರು . ಬಳಿಕ ಅವರ ಇಬ್ಬರು ಸ್ನೇಹಿತರನ್ನು ಕೂಡ ಪೊಲೀಸ್ ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದರು. ಡ್ರೋನ್ ಪ್ರತಾಪ್ ಗೆ ಡಿಸೆಂಬರ್ 26ರವರೆಗೆ ಅಂದರೆ 10 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶ ಹೊರಡಿಸಿತ್ತು.
ಅಲ್ಲದೆ ಈ ಪ್ರಕರಣದ ಬಗ್ಗೆ ಸಂಪೂರ್ಣ ವಿವರ ನೀಡುವಂತೆಯೂ ಮುಖ್ಯಮಂತ್ರಿಗಳ ಸಚಿವಾಲಯದಿಂದ ಆದೇಶ ನೀಡಲಾಗಿತ್ತು. ಸೋಡಿಯಂ ಮೆಟಲ್ ಸ್ಫೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಧುಗಿರಿ ಸಿಪಿಐ ಕಚೇರಿಗೆ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಆಗಮಿಸಿ ಹೆಚ್ಚಿನ ಮಾಹಿತಿ ಸಂಗ್ರಹಿಸಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx