ತುಮಕೂರು: ಮರಿದಾಸಹಳ್ಳಿ ಪಂಚಾಯಿತಿ , ತಿಪ್ಪಯನದುರ್ಗ ಎಂಬ ಗ್ರಾಮದಲ್ಲಿ ಮಣ್ಣು ಹಗರಣ ಆರೋಪ ಕೇಳಿ ಬಂದಿದ್ದು, ಟಿಪ್ಪರ್ ಹಾಗೂ ಜೆಸಿಬಿ ಸಹಿತ ರಾಜಾರೋಷವಾಗಿ ಅಕ್ರಮವಾಗಿ ಮಣ್ಣು ಸಾಗಿಸಲಾಗುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಮಣ್ಣು ಯಾಕೆ ತೆಗೆದುಕೊಂಡು ಹೋಗುತ್ತಿದ್ದೀರಿ ಎಂದು ಗ್ರಾಮಸ್ಥರು ಪ್ರಶ್ನಿಸಿದ ವೇಳೆ ಶಾಸಕ ಹೆಚ್. ವಿ ವೆಂಕಟೇಶ್ ಅವರ ಹೆಸರು ಹೇಳಿ ದಬ್ಬಾಳಿಕೆ ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.
ಮತ್ತೊಂದೆಡೆ ಗ್ರಾಮದ ಪಿಡಿಓ ಅಧಿಕಾರಿಗಳಿಗೆ ಕರೆ ಮಾಡಿದರೆ ಅವರು ತಮ್ಮ ಫೋನ್ ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಗ್ರಾಮದಲ್ಲಿ ಪ್ರತಿಬಾರಿಯೂ ಇದೇ ರೀತಿಯ ಘಟನೆಗಳು ನಡೆಯುತ್ತಿದೆ. ಅಕ್ರಮವಾಗಿ ಮಣ್ಣು ಸಾಗಿಸಿದರೂ ಅಧಿಕಾರಿಗಳು ಯಾವುದೇ ಕ್ರಮಕೈಗೊಳ್ಳುತ್ತಿಲ್ಲ ಎನ್ನುವ ಆರೋಪ ಕೇಳಿ ಬಂದಿದೆ.
ಶಾಸಕ ಹೆಚ್.ವಿ. ವೆಂಕಟೇಶ್ ಅವರು ಹಾಗೂ ತಹಶೀಲ್ದಾರ್ ಅವರು, ಜಿಲ್ಲಾಧಿಕಾರಿಗಳು ಈ ಬಗ್ಗೆ ಗಮನ ಹರಿಸಿ ತಪ್ಪಿತಸ್ಥರ ಮೇಲೆ ಕ್ರಮಕೈಗೊಳ್ಳಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ವರದಿ: ನಂದೀಶ್ ನಾಯ್ಕ, ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


