ಮಧುಗಿರಿ: ನನ್ನ ಸೋಲಿಗೆ ಕಾರಣರಾದವರಿಗೆ ವಿಧಾನ ಪರಿಷತ್ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಬೇಕು ಎಂದು ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಶುಕ್ರವಾರ ಮನವಿ ಮಾಡಿಕೊಂಡರು.
ಜೆಡಿಎಸ್ ಅಭ್ಯರ್ಥಿ ಆರ್.ಅನಿಲ್ ಕುಮಾರ್ ಪರ ಹಮ್ಮಿಕೊಂಡಿದ್ದ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ನನಗೆ ಆಗಿರುವ ನೋವು ಸರಿಪಡಿಸಲು ನಿಮಗೆ ಇದೊಂದು ಅವಕಾಶ ಸಿಕ್ಕಿದೆ ಎಂದು ಅವರು ಹೇಳಿದರು.
ಕಳೆದ ಲೋಕಸಭಾ ಚುನಾವಣೆಯಲ್ಲಿ ಜಿಲ್ಲೆಯಿಂದ ಸ್ಪರ್ಧಿಸುವಂತೆ ಮಾಡಿದರು. ಕೆಲವರು ರಾಜಕೀಯ ಷಡ್ಯಂತ್ರ ಮಾಡಿ ಸೋಲಿಗೆ ಕಾರಣರಾದರು. ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯನ್ನು ಗೆಲ್ಲಿಸುವ ಮೂಲಕ ನನ್ನ ಸೋಲಿಗೆ ಕಾರಣರಾದವರಿಗೆ ಉತ್ತರ ಕೊಡಬೇಕು ಎಂದು ದೇವೇಗೌಡರು ಹೇಳಿದರು.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700