ನವದೆಹಲಿ: ತುಮಕೂರು ಜಿಲ್ಲೆಯ ಅಭಿವೃದ್ಧಿಯ ಕುರಿತಾಗಿ ಕೆಲವು ವಿಶೇಷ ಪ್ರಸ್ತಾವನೆಗಳನ್ನು ಪ್ರಧಾನಮಂತ್ರಿಗಳಿಗೆ ಮಂಡಿಸಿದ್ದು, ತಮ್ಮ ಲೋಕಸಭಾ ಕ್ಷೇತ್ರದ ಸರ್ವೋತೋಮುಖ ಅಭಿವೃದ್ದಿಗೆ ವಿಶೇಷ ಅನುದಾನ ನೀಡುವಂತೆ ಕೇಂದ್ರ ಸಚಿವ ವಿ.ಸೋಮಣ್ಣ ಅವರು ಪ್ರಧಾನ ಮಂತ್ರಿಗಳಲ್ಲಿ ಮನವಿ ಮಾಡಿದ್ದಾರೆ.
ಅಭಿವೃದ್ಧಿಗೆ ರೂ.87 ಕೋಟಿ ಅನುದಾನ ನೀಡಿದ್ದು, ಈ ರೈಲ್ವೆ ನಿಲ್ದಾಣಕ್ಕೆ ಡಾ.ಶ್ರೀ ಶ್ರೀ ಶ್ರೀ ಶಿವಕುಮಾರ್ ಮಹಾ ಸ್ವಾಮೀಜಿಯವರ ನಾಮಕರಣ ಮಾಡುವಂತೆ ಮನವಿ ಮಾಡಿದ್ದಾರೆ.
ತುಮಕೂರು -– ರಾಯದುರ್ಗ ಮತ್ತು ತುಮಕೂರು–ಚಿತ್ರದುರ್ಗ–ದಾವಣಗೆರೆ ರೈಲ್ವೆ ಮಾರ್ಗವನ್ನು ಜೂನ್ 2027ರಲ್ಲಿ ಲೋಕಾರ್ಪಣೆ ಮಾಡಲು ತುಮಕೂರಿಗೆ ಆಗಮಿಸುವಂತೆ ಪ್ರಧಾನಮಂತ್ರಿಗಳಲ್ಲಿ ಕೇಂದ್ರ ಸಚಿವ ಸೋಮಣ್ಣ ಮನವಿ ಮಾಡಿದ್ದಾರೆ.
ರೈಲ್ವೆ ಇಲಾಖೆಯಲ್ಲಿ ಅಭಿವೃದ್ದಿಗಳಿಗೆ ಸಹಕಾರ ನೀಡಿದ ಕೇಂದ್ರ ಸಚಿವ ಅಶ್ವೀನಿ ವೈಷ್ಣವ ಇವರ ಸಹಕಾರ ಮನೋಭಾವನೆಯನ್ನು ಅತ್ಯಂತ ಗೌರವಪೂರ್ವಕವಾಗಿ ಕೇಂದ್ರ ಸಚಿವ ಸೋಮಣ್ಣನವರು ಪ್ರಧಾನಮಂತ್ರಿಯವರ ಭೇಟಿಯ ಸಂದರ್ಭದಲ್ಲಿ ವ್ಯಕ್ತಪಡಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296