ಮಂಡ್ಯ: ತಾಯಿಯ ಆತ್ಮಹತ್ಯೆಯಿಂದ ಮನನೊಂದಿದ್ದ ಪುತ್ರ ತಾನೂ ಆತ್ಮಹತ್ಯೆಗೆ ಶರಣಾದ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಕೊನ್ನಾಪುರ ಗ್ರಾಮದಲ್ಲಿ ನಿನ್ನೆ ನಡೆದಿದೆ.
ರಂಜಿತ್ (31) ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದಾನೆ. ಚನ್ನಪಟ್ಟಣದ ಉಜ್ಜೀವನ್ ಬ್ಯಾಂಕ್ ನಲ್ಲಿ ಮೃತನ ತಾಯಿ ಪ್ರೇಮಾ 6 ಲಕ್ಷ ರೂಪಾಯಿ ಸಾಲ ಪಡೆದುಕೊಂಡಿದ್ದರು. ಪತಿ ಹಾಗೂ ಪುತ್ರನ ಅನಾರೋಗ್ಯದಿಂದಾಗಿ 3 ತಿಂಗಳ ಕಂತು ಪಾವತಿಸಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಕೋರ್ಟ್ ಅನುಮತಿ ಪಡೆದು ಫೈನಾನ್ಸ್ ಸಿಬ್ಬಂದಿ ಮನೆಯನ್ನು ಸೀಝ್ ಮಾಡಿದ್ದರು.
ಮನೆ ಸೀಝ್ ಆಗಿದ್ದರಿಂದ ಮನನೊಂದ ಪ್ರೇಮಾ ಜನವರಿ 28ರಂದು ವಿಷದ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜ.29ರಂದು ಅವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದರು.
ತಾಯಿಯ ಸಾವಿನ ಸುದ್ದಿ ತಿಳಿದ ಪುತ್ರ ರಂಜಿತ್ ತಕ್ಷಣವೇ ಸ್ಥಳದಿಂದ ನಾಪತ್ತೆಯಾಗಿದ್ದ, ಬಳಿಕ ನಿನ್ನೆ ಹಗಲೂರು ಕೆರೆಯಲ್ಲಿ ರಂಜಿತ್ ನ ಮೃತದೇಹ ಪತ್ತೆಯಾಗಿತ್ತು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx