ಚಿಕ್ಕಬಳ್ಳಾಪುರ: ತಾಯಿಯ ಸಾವಿನಿಂದ ನೊಂದು ಮಗ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಂದಿ ಮೋರಿ ಬಳಿ ನಡೆದಿದೆ.
ರಕ್ಷಿತ್ ಬಾಬು (24) ಮೃತಪಟ್ಟ ಯುವಕನಾಗಿದ್ದಾನೆ. ಯುವಕ ಫುಡ್ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ.
ರಕ್ಷಿತ್ ನ ತಾಯಿ ಚಂದ್ರಿಕಾ ಅವರು ಸಾಲ ಬಾಧೆಯ ಹಿನ್ನೆಲೆ ಒಂದೂವರೆ ತಿಂಗಳ ಹಿಂದೆಯಷ್ಟೇ ನೇಣಿಗೆ ಶರಣಾಗಿದ್ದರು. ಇದರಿಂದ ರಕ್ಷಿತ್ ತೀವ್ರವಾಗಿ ನೊಂದಿದ್ದರು ಎನ್ನಲಾಗಿದೆ. ಘಟನೆ ಸಂಬಂಧ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4