ತವರು ಮನೆಗೆ ತೆರಳಿದ್ದ ಪತ್ನಿಯನ್ನು ಕರೆತರಲು ಹೋಗಿದ್ದ ಪತಿರಾಯ ಪತ್ನಿಯನ್ನು ಕರೆತರದೆ ಅತ್ತೆಗೆ ಚಾಕು ಇರಿದಿರುವ ಘೋರ ಘಟನೆ ಬೆಂಗಳೂರಿನ ಇಬ್ಬಲೂರಿನಲ್ಲಿ ನಡೆದಿದೆ.
ಅಳಿಯ ಮನೋಜ್ ಎಂಬುವರು ಅತ್ತೆ ಗೀತಾಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ.ಇದು ಬೆಳ್ಳಂದೂರು ಬಳಿಯ ಇಬ್ಬಲೂರಿನಲ್ಲಿ ನಡೆದಿರುತ್ತದೆ.
ಕೋಲಾರ ಮೂಲದ ಮನೋಜ್ ಬೌನ್ಸರ್ ಆಗಿ ಕೆಲಸ ಮಾಡುತ್ತಿದ್ದ. ಈ ವೇಳೆ ಮಂಡ್ಯ ಮೂಲದ ವರ್ಷಿತಾ ಪರಿಚಯವಾಗಿ ಮನೆಯವರ ವಿರೋಧದ ನಡುವೆ ಪ್ರೀತಿಸಿ ಮದುವೆಯಾಗಿದ್ದರು.ಮದುವೆಯ ನಂತರ ಕುಡಿದು ಬಂದು ಗಲಾಟೆ ಮಾಡ್ತಾನೆ ಅನ್ನೋ ಕಾರಣಕ್ಕೆ ಪತ್ನಿ ಗಂಡನ ಮನೆ ಬಿಟ್ಟು ತವರು ಮನೆಗೆ ಬಂದಿದ್ದಳು.
ಹೆಂಡತಿಯನ್ನು ಜೊತೆಗೆ ಕಳುಹಿಸಿ ಕೊಡುವಂತೆ ಅತ್ತೆಯ ಜೊತೆಗೆ ಗಲಾಟೆ ತೆಗೆದಿದ್ದಾನೆ. ಈ ವೇಳೆ ಮಾತಿಗೆ ಮಾತು ಬೆಳೆದಿದ್ದು, ಅಳಿಯ ಅತ್ತೆಗೆ ಚಾಕು ಇರಿದು ಪರಾರಿಯಾಗಿದ್ದಾನೆ.ಆದರೆ ಈಗ ಬೆಳ್ಳಂದೂರು ಪೊಲೀಸರು ಆರೋಪಿಯನ್ನ ಬಂಧಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


