ಪಣಜಿ: ಬಿಜೆಪಿ ನಾಯಕಿ ಸೋನಾಲಿ ಪೋಗಟ್ ಸಾವಿನ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಗೋವಾ ಸರ್ಕಾರ ಕೇಂದ್ರವನ್ನು ಕೋರಿದೆ. ಸೋನಾಲಿ ಅನುಮಾನಾಸ್ಪದ ಸಾವಿನ ಪ್ರಕರಣವನ್ನು ಸಿಬಿಐಗೆ ಒಪ್ಪಿಸುವಂತೆ ಸೋನಾಲಿ ಕುಟುಂಬ ಸದಸ್ಯರು ಹರಿಯಾಣ ಸಿಎಂ ಕಟ್ಟರ್ ಅವರಿಗೆ ಮನವಿ ಮಾಡಿದ್ದಾರೆ.
ಗೋವಾ ಸರ್ಕಾರದ ತನಿಖೆಯಿಂದ ನಮಗೆ ತೃಪ್ತಿ ಇಲ್ಲ ಎಂದು ಸೋನಾಲಿ ಕುಟುಂಬ ಹೇಳಿದೆ. ಗೋವಾ ಪೊಲೀಸರ ಮೇಲೆ ನನಗೆ ಸಂಪೂರ್ಣ ನಂಬಿಕೆ ಇದೆ, ಆದರೆ ಸೋನಾಲಿ ಮಗಳ ಬೇಡಿಕೆಯಂತೆ ಪ್ರಕರಣವನ್ನು ಸಿಬಿಐಗೆ ಒಪ್ಪಿಸುವುದಾಗಿ ಗೋವಾ ಸಿಎಂ ಪ್ರಮೋದ್ ಸಾವಂತ್ ಹೇಳಿದ್ದಾರೆ.
ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಹಲವರು ಪತ್ರವನ್ನೂ ಬರೆದಿದ್ದು, ಹೀಗಾಗಿಯೇ ಕೇಂದ್ರ ತನಿಖಾ ಸಂಸ್ಥೆಗೆ ಪ್ರಕರಣವನ್ನು ಹಸ್ತಾಂತರಿಸುವಂತೆ ಕೇಂದ್ರ ಗೃಹ ಸಚಿವಾಲಯಕ್ಕೆ ಮನವಿ ಮಾಡುತ್ತಿದ್ದೇವೆ ಎಂದು ಸಿಎಂ ಬಹಿರಂಗಪಡಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy