ಸಿದ್ದರಾಮಯ್ಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿಯನ್ನು ಭೇಟಿ ಮಾಡಿದ್ದಾರೆ. ನವದೆಹಲಿಯ ಜನ್ಪತ್ನಲ್ಲಿರುವ ಸೋನಿಯಾ ಗಾಂಧಿ ನಿವಾಸದಲ್ಲಿ ರಾಹುಲ್ ಜತೆ ಸಿದ್ದರಾಮಯ್ಯ ಮಾತುಕತೆ ನಡೆಸಿದ್ದಾರೆ.
ಸಿದ್ದರಾಮಯ್ಯರಿಗೆ ಸಿಎಂ ಸ್ಥಾನ, ಡಿಕೆ ಶಿವಕುಮಾರ್ಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವ ಸಾಧ್ಯತೆ ಇದೆ. ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿಯೂ ಮುಂದುವರಿಯಲಿದ್ದಾರೆ. ಅಧ್ಯಕ್ಷ ಹುದ್ದೆ ಜೊತೆ ಎರಡು ಪ್ರಮುಖ ಖಾತೆಗಳಿಗೆ ಡಿಕೆಶಿ ಆಯ್ಕೆ ಮಾಡುವ ಸಾಧ್ಯತೆ ಇದೆ ಎಂಬ ಬಗ್ಗೆ ಮಾಹಿತಿ ಸಿಕ್ಕಿದೆ. ಇಂಧನ ಮತ್ತು ನೀರಾವರಿ ಮೇಲೆ ಡಿಕೆ ಶಿವಕುಮಾರ್ ಕಣ್ಣಿಟ್ಟಿದ್ದಾರೆ ಎನ್ನಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


