ಬೀದಿ ಬದಿ ಸೊಪ್ಪು ಮಾರುವ ವೃದ್ಧೆ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿರುವ ಘಟನೆ ಕಳೆದ ಶನಿವಾರ ಜಯನಗರದ 26ನೇ ಕ್ರಾಸ್ ನಲ್ಲಿರುವ ಬಾಲಜಿ ಮೆಡಿಕಲ್ ಬಳಿ ನಡೆದಿದೆ.
ವೃದ್ಧೆ ಚಂದ್ರಮ್ಮ ಬಾಲಜಿ ಮೆಡಿಕಲ್ ಬಳಿ ಫುಟ್ ಬಾತ್ ನಲ್ಲಿ ಕಳೆದ ಕೆಲ ವರ್ಷಗಳಿಂದ ಸೊಪ್ಪಿನ ವ್ಯಾಪಾರವನ್ನು ಮಾಡುತ್ತಿದ್ದರು. ಶನಿವಾರ ಸಂಜೆ ಬೈಕ್ ನಲ್ಲಿ ಹೆಲ್ಮೆಟ್ ಧರಿಸಿ ಬಂದ ಇಬ್ಬರು ದುಷ್ಕರ್ಮಿಗಳು ಏಕಾಏಕಿ ಚಂದ್ರಮ್ಮ ತಲೆಗೆ ಮಚ್ಚಿನಿಂದ ಹೊಡೆದು ಪರಾರಿಯಾಗಿದ್ದಾರೆ. ಚಂದ್ರಮ್ಮ ತಲೆಗೆ ತೀವ್ರ ಪೆಟ್ಟಾಗಿದೆ.
ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದು, ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ಕುರಿತು ತಿಲಕ್ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


