ತುಮಕೂರು: ಜನಪರ ಮತ್ತು ಭ್ರಷ್ಟಾಚಾರ ಮುಕ್ತ ದಕ್ಷ ಆಡಳಿತಕ್ಕಾಗಿ ಮತ್ತು ಆ ಮೂಲಕ ನಾಡಿನ ಸಮಗ್ರ ಅಭಿವೃದ್ಧಿಗಾಗಿ ಹೋರಾಡುತ್ತಿರುವ ಕೆ.ಆರ್.ಎಸ್. ಪಕ್ಷವು ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದು, ಈ ಚುನಾವಣೆಯಲ್ಲಿ ಶಿಕ್ಷಕರು ಕೆ.ಆರ್.ಎಸ್. ಪಕ್ಷವನ್ನು ಬೆಂಬಲಿಸುವಂತೆ ಪಕ್ಷದ ಮುಖಂಡರು ಮನವಿ ಮಾಡಿಕೊಂಡಿದ್ದಾರೆ.
ಶಿಕ್ಷಕರು ನಿರಂತರವಾಗಿ ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದು, ಅವುಗಳನ್ನು ಬಗೆಹರಿಸಲು ದಕ್ಷ ಮತ್ತು ಪ್ರಾಮಾಣಿಕ ಆಡಳಿತದಿಂದ ಮಾತ್ರ ಸಾಧ್ಯ, ಅದನ್ನು ಹೊರತುಪಡಿಸಿ ಬೇರೆ ಯಾವುದೇ ಮಾರ್ಗವಿಲ್ಲ. ಈ ನಿಟ್ಟಿನಲ್ಲಿ ಕೆ.ಆರ್.ಎಸ್. ಪಕ್ಷವು ನಿರಂತರವಾಗಿ ಕೆಲಸ ಮಾಡುತ್ತಾ ಬಂದಿದೆ ಎಂದು ಪಕ್ಷ ಹೇಳಿದೆ.
ಪ್ರಸ್ತುತ ಅತಿಥಿ ಶಿಕ್ಷಕರ ಸಮಸ್ಯೆಯು ಬಹು ದೊಡ್ಡ ಸಮಸ್ಯೆಯಾಗಿದ್ದು, ಕಳೆದ ಮೂರು ದಶಕಗಳಿಂದ ಈ ಸಮಸ್ಯೆ ಉಲ್ಬಣಗೊಳ್ಳುತ್ತಿದೆಯೆ ವಿನಃ, ಈ ಯಾವ ಸರ್ಕಾರಗಳಿಗೂ ಬಗೆಹರಿಸಲು ಸಾಧ್ಯವಾಗಿಲ್ಲ ಮತ್ತು ಮುಂದೆಯೂ ಅವರಿಗೆ ಬಗೆಹರಿಸಲು ಸಾಧ್ಯವಾಗುವುದಿಲ್ಲ. ಇನ್ನು ರಾಜ್ಯದ ಸರ್ಕಾರಿ ಶಾಲಾ ಕಾಲೇಜು ಶಿಕ್ಷಕರ ವರ್ಗಾವಣೆ ಪಾರದರ್ಶಕವಾಗಿ ನಡೆಯುತ್ತಿಲ್ಲ ಮತ್ತು ಕಾಲಕಾಲಕ್ಕೆ ನೇಮಕಾತಿಗಳು ನಡೆಯುತ್ತಿಲ್ಲ. ಇದರಿಂದ ಈ ವರ್ಗದವರಲ್ಲಿ ಸಾಮಾಜಿಕ ಮತ್ತು ಆರ್ಥಿಕ ಸಮಸ್ಯೆಗಳು ಕಾಡುತ್ತಿವೆ. ಇವೆಲ್ಲ ಸಮಸ್ಯೆಗಳೂ ಒಂದಕ್ಕೊಂದು ಬೆಸೆದುಕೊಂಡಿದ್ದು, ಅಂತಿಮವಾಗಿ ಅದು ದಕ್ಷ ಮತ್ತು ಪ್ರಾಮಾಣಿಕ ಆಡಳಿತದ ಅಗತ್ಯವನ್ನು ಬೇಡುತ್ತದೆ. ಪ್ರಸ್ತುತ ರಾಜ್ಯದ ಪ್ರಮುಖ ರಾಜಕೀಯ ಪಕ್ಷಗಳಿಂದ ಮತ್ತು ಅವರ ಅಭ್ಯರ್ಥಿಗಳಿಂದ ನಾವು ಇದನ್ನು ನಿರೀಕ್ಷಿಸಲು ಸಾಧ್ಯವೇ ಇಲ್ಲ, ಆದ್ದರಿಂದಲೇ ಅವರಿಂದ ಶಿಕ್ಷಕರ ಕ್ಷೇತ್ರದ ಸಮಸ್ಯೆಗಳನ್ನು ಬಗೆಹರಿಸಲು ಸಾಧ್ಯವೇ ಇಲ್ಲ ಎಂದಿದೆ.
ರಾಜ್ಯದಲ್ಲಿ ಉಚಿತ ಶಿಕ್ಷಣ ಮತ್ತು ಆರೋಗ್ಯ ವ್ಯವಸ್ಥೆಯನ್ನು ಕಲ್ಪಿಸುವುದು ಕೆ.ಆರ್.ಎಸ್. ಪಕ್ಷದ ಆದ್ಯತೆಯಾಗಿದೆ. ಈ ನಿಟ್ಟಿನಲ್ಲಿ ಶಿಕ್ಷಕರ ನೇಮಕಾತಿ ಮತ್ತು ಅವರ ಸಮಸ್ಯೆಗಳನ್ನು ಬಗೆಹರಿಸುವುದು ಅಷ್ಟೇ ಆದ್ಯತೆಯ ಕೆಲಸವಾಗಿರುತ್ತದೆ. ಆದ್ದರಿಂದ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಅಭ್ಯರ್ಥಿಯಾದ ಕಿಶನ್ ಎಂ.ಜಿ. ಅವರನ್ನು ಬೆಂಬಲಿಸಬೇಕೆಂದು ಆಗ್ನೇಯ ಶಿಕ್ಷಕರ ಕ್ಷೇತ್ರದ ಶಿಕ್ಷಕರಲ್ಲಿ ಮನವಿ ಮಾಡುತ್ತಿದ್ದೇವೆ. ಅಭ್ಯರ್ಥಿ ಕಿಶನ್ ಅವರು ವೃತ್ತಿಯಲ್ಲಿ ವಕೀಲರಾಗಿದ್ದು, ನ್ಯಾಯವಾದಿಗಳ ಮತ್ತು ಶಿಕ್ಷಕರ ಕುಟುಂಬದಿಂದ ಬಂದವರಾಗಿದ್ದು, ಇವರಿಗೆ ಶಿಕ್ಷಕರ ಸಮಸ್ಯೆಗಳ ಅರಿವಿದ್ದು, ಹಾಗೆಯೆ ಕಾನೂನಿನ ಜ್ಞಾನವೂ ಇದ್ದು, ಜಠಿಲ ಸಮಸ್ಯೆಗಳಿಗೆ ಕಾನೂನಾತ್ಮಕವಾಗಿ ಪರಿಹಾರ ಕಂಡುಕೊಳ್ಳುವ ಬಗ್ಗೆ ತಿಳಿದಿದೆ. ನಾಡಿನ ಪ್ರಜೆಗಳನ್ನು ಸೃಷ್ಠಿಸುವ ಮಹತ್ತರ ಜವಾಬ್ದಾರಿಯನ್ನು ಹೊತ್ತಿರುವ ಶಿಕ್ಷಕರು ತಮ್ಮ ಹಾಗೂ ನಾಡಿನ ಉತ್ತಮ ಭವಿಷ್ಯಕ್ಕಾಗಿ ಕೆ.ಆರ್.ಎಸ್. ಪಕ್ಷದ ಅಭ್ಯರ್ಥಿ ಕಿಶನ್ ಎಂ. ಜಿ. ಅವರಿಗೆ ತಮ್ಮ ಪ್ರಥಮ ಪ್ರಾಶಸ್ತ್ಯದ ಮತ ನೀಡಬೇಕೆಂದು ಪಕ್ಷದ ಮುಖಂಡರಾದ ಜಿಲ್ಲಾಧ್ಯಕ್ಷರು ಗಜೇಂದ್ರ ಕುಮಾರ್ ಗೌಡ., ಜಯಂತ್ , ಡಿಸಿ , ಆನಂದ್ VA, ಜಿಲ್ಲಾ ಕಾರ್ಯದರ್ಶಿಗಳು ರವಿಕುಮಾರ್, ರಾಜೇಶ್,ಗುರುಮೂರ್ತಿ,(ತಾಲೂಕು ಕಾರ್ಯದರ್ಶಿಗಳು), ಮನವಿ ಮಾಡಿಕೊಂಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA