ತುಮಕೂರು: ಭಾರತ ಚುನಾವಣಾ ಆಯೋಗವು ಕರ್ನಾಟಕ ವಿಧಾನ ಪರಿಷತ್ತಿನ ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆ ಸಂಬಂಧ ಹೊರಡಿಸಿರುವ ವೇಳಾಪಟ್ಟಿಯನ್ವಯ ಮತದಾರರ ಪಟ್ಟಿಗೆ ಹೆಸರನ್ನು ನೋಂದಾಯಿಸಲು ಡಿಸೆಂಬರ್ 10 ಕಡೆಯ ದಿನವಾಗಿದೆ ಎಂದು ತುಮಕೂರು ನಗರ ವಿಧಾನಸಭಾ ಕ್ಷೇತ್ರದ ಸಹಾಯಕ ಮತದಾರರ ನೋಂದಣಾಧಿಕಾರಿ ಹಾಗೂ ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.
ಆಯೋಗದ ವೇಳಾಪಟ್ಟಿಯನ್ವಯ De–novo ಮತದಾರರ ಪಟ್ಟಿಯನ್ನು ತಯಾರಿಸುವ ಸಂಬಂಧ ಈಗಾಗಲೇ ನಿಗದಿತ ನಮೂನೆ–18 ಅನ್ನು ವಿತರಿಸುವ ಕಾರ್ಯ ಆರಂಭವಾಗಿದೆ. ಮಹಾನಗರಪಾಲಿಕೆ ವ್ಯಾಪ್ತಿಯ ಅರ್ಹ ಮತದಾರರು ಮತದಾರರ ಪಟ್ಟಿಗೆ ತಮ್ಮ ಹೆಸರನ್ನು ನೋಂದಾಯಿಸಲು ನಿಗದಿತ ನಮೂನೆ 18ನ್ನು ಭರ್ತಿ ಮಾಡಿ ತುಮಕೂರು ಮಹಾನಗರಪಾಲಿಕೆಯ ಚುನಾವಣಾ ಶಾಖೆಯಲ್ಲಿ ನಿಗದಿಪಡಿಸಿರುವ ನಿಯೋಜಿತ ಅಧಿಕಾರಿ/ಸಿಬ್ಬಂದಿಗೆ ಡಿಸೆಂಬರ್ 10ರೊಳಗಾಗಿ ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬೇಕು.
ಮತದಾರರ ಪಟ್ಟಿಗೆ ನೋಂದಾಯಿಸಲು ನಿಗದಿತ ನಮೂನೆ–18ನ್ನು ಭರ್ತಿ ಮಾಡಿ ಸಹಿ ಮಾಡಿ ಸಲ್ಲಿಸಬೇಕು. ಅರ್ಜಿದಾರರ ಪಾಸ್ ಪೋರ್ಟ್ ಅಳತೆಯ ಭಾವಚಿತ್ರವನ್ನು ಲಗತ್ತಿಸಬೇಕು. ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯದಿಂದ ಪದವಿ ಪ್ರಮಾಣ ಪತ್ರ/ಕಾನೊಕೇಶನ್ ಸರ್ಟಿಫಿಕೇಟ್ (ದೃಢೀಕೃತ), ಚುನಾವಣಾ ಗುರುತಿನ ಚೀಟಿ(Epic Card), ಆಧಾರ್ ಕಾರ್ಡ್/ಚಾಲನಾ ಪರವಾನಿಗೆ/ಪಡಿತರ ಚೀಟಿ/ಪಾಸ್ ಪೋರ್ಟ್/ ವಿಳಾಸ ದೃಢೀಕರಣ ಸಂಬಂಧ ದೃಢೀಕೃತ ದಾಖಲೆಗಳನ್ನು ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ತುಮಕೂರು ಮಹಾನಗರ ಪಾಲಿಕೆಯ ಚುನಾವಣಾ ಶಾಖೆಯ ಕಂಟ್ರೋಲ್ ರೂಂ ನಂ.9449872599/0816–2278480ಯನ್ನು ಸಂಪರ್ಕಿಸಬೇಕೆಂದು ಅವರು ಮನವಿ ಮಾಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


