ಅಥಣಿಯಲ್ಲಿ ಜರುಗಿದ ಕಾಲೇಜು ಬಸ್ ಅಪಘಾತ ಸ್ಥಳಕ್ಕೆ ಹಾಗೂ ಆಸ್ಪತ್ರೆಗಳಿಗೆ ಬೆಳಗಾವಿ ಎಸ್ ಪಿ ಸಂಜೀವ್ ಪಾಟೀಲ ಭೇಟಿ ನೀಡಿ ಗಾಯಗೊಂಡ ವಿದ್ಯಾರ್ಥಿಗಳ ಪರಿಸ್ಥಿತಿ ಅವಲೋಕಿಸಿದರು.
ಈ ವೇಳೆ ಮಾಧ್ಯಮದವರ ಜೊತೆ ಮಾತನಾಡಿ, ಬಸ್ಸಿನಲ್ಲಿ ಅತೀಯಾಗಿ ಮಕ್ಕಳನ್ನು ತುಂಬಿದ್ದಾರೆ ಎಂಬ ಆರೋಪದ ಬಗ್ಗೆ ಪರಿಶೀಲನೆ ಮಾಡಲಾಗುವುದು. ಘಟನೆಯಲ್ಲಿ ಗಾಯಗೊಂಡ ಸುಮಾರು 39 ವಿದ್ಯಾರ್ಥಿಗಳಿಗೆ ನಾಲ್ಕು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಲಾಗುತ್ತಿದೆ ಎಂದು ತಿಳಿಸಿದರು.
ಒಬ್ಬರು ಶಿಕ್ಷಕಿ ಗಂಭೀರವಾಗಿ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೆಳಗಾವಿಗೆ (Belagavi Hospital) ರವಾನಿಸಲಾಗಿದೆ. ದುರ್ಘಟನೆ ಜರುಗಿದಾಗ ಸ್ಥಳೀಯ ಖಾಸಗಿ ವೈದ್ಯರು ಮತ್ತು ಸಾರ್ವಜನಿಕರು ಸಕಾಲಕ್ಕೆ ಸ್ಪಂದಿಸಿದ್ದಾರೆ ಅವರಿಗೆ ಧನ್ಯವಾದಗಳನ್ನು ತಿಳಿಸುತ್ತೇನೆ ಎಂದರು.
ಅಪಘಾತದಲ್ಲಿ ಬಸ್ ಹಾಗೂ ಲಾರಿಯ ಇಬ್ಬರೂ ಚಾಲಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾಲೇಜು ವಾಹನದಲ್ಲಿ ಎಷ್ಟು ಜನ ಇದ್ದರು ಎನ್ನುವ ಬಗ್ಗೆ ಮಾಹಿತಿ ಪಡೆಯುತ್ತಿದ್ದೇವೆ. ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದರೆ ಬೇರೆಡೆ ಸ್ಥಳಾಂತರಿಸಲಿದ್ದೇವೆ ಎಂದು ಅವರು ತಿಳಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz