ನಿನ್ನೆ ಹಾಂಕಾಂಗ್ ನಲ್ಲಿ ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರು ಹೃದಯಾಘಾತದಿಂದ ನಿಧನರಾಗಿದ್ದು ಇಂದು ರಾತ್ರಿ ಬೆಂಗಳೂರಿಗೆ ಪಾರ್ಥೀವ ಶರೀರ ಆಗಮಿಸಲಿದೆ.
ಈ ಕುರಿತು ಮಾಹಿತಿ ನೀಡಿದ ಎಂಎಲ್ ಸಿ ಬಿ.ಕೆ ಹರಿಪ್ರಸಾದ್, ಇಂದು ರಾತ್ರಿ 11 ಗಂಟೆ ಸುಮಾರಿಗೆ ಏರ್ ಪೋರ್ಟ್ ಗೆ ಮೃತದೇಹ ಬರಲಿದೆ. 12 ಗಂಟೆ ವೇಳೆಗೆ ಮಲ್ಲೇಶ್ವರಂ ಮನೆಗೆ ತಲುಪಲಿದ್ದು, ಮನೆಯ ಬಳಿಯೇ ನಾಳೆ ಮಧ್ಯಾಹ್ನದವರೆಗೂ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ನಾಳೆ ಶ್ರೀರಾಂಪುರದ ಹರಿಶ್ಚಂದ್ರ ಘಾಟ್ ನಲ್ಲಿ ಸ್ಪಂದನಾ ಅಂತ್ಯಕ್ರಿಯೆ ನಡೆಯಲಿದೆ ಎಂದು ತಿಳಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


