ಜಾರ್ಖಂಡ್ ನಲ್ಲಿ ಸ್ಪ್ಯಾನಿಷ್ ವ್ಲಾಗರ್ ನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ನಾಲ್ವರನ್ನು ಬಂಧಿಸಲಾಗಿದೆ. ಗ್ಯಾಂಗ್ ನ ಎಲ್ಲ ಸದಸ್ಯರನ್ನು ಗುರುತಿಸಲಾಗಿದ್ದು, ಉಳಿದವರನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಹತ್ತು ಜನರ ಗುಂಪು ವಿದೇಶಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದೆ. ಜಾರ್ಖಂಡ್ ನ ದುಮ್ಕಾದಲ್ಲಿ ಶುಕ್ರವಾರ ರಾತ್ರಿ ಈ ಘಟನೆ ನಡೆದಿದೆ. ಮಹಿಳೆ ತನ್ನ ಪತಿಯೊಂದಿಗೆ ರಜಾದಿನವನ್ನು ಆಚರಿಸಲು ಭಾರತಕ್ಕೆ ಬಂದಿದ್ದಳು. ಪ್ರವಾಸಿ ವೀಸಾದಲ್ಲಿ ಭಾರತಕ್ಕೆ ಬಂದಿದ್ದ ಇಬ್ಬರೂ ಹಂಸ್ದಿಹಾ ಪೊಲೀಸ್ ಠಾಣೆ ವ್ಯಾಪ್ತಿಯ ದುಮ್ಕಾದ ಕುಂಜಿ ಗ್ರಾಮದಲ್ಲಿ ಟೆಂಟ್ ನಲ್ಲಿ ತಂಗಿದ್ದರು.
ಶುಕ್ರವಾರದಂದು ದಂಪತಿ ಬಿಹಾರದ ಭಾಗಲ್ಪುರಕ್ಕೆ ತೆರಳುತ್ತಿದ್ದಾಗ ಮಹಿಳೆಗೆ ಕಿರುಕುಳ ನೀಡಲಾಗಿತ್ತು. ಅಮಾನುಷವಾಗಿ ಚಿತ್ರಹಿಂಸೆಗೆ ಒಳಗಾದ ಯುವತಿ ಇದೀಗ ಸರಯಾಹತ್ ನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಪತಿ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


