ತುರುವೇಕೆರೆ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಾದ 5 ಗ್ಯಾರಂಟಿಗಳ ಬಗ್ಗೆ ವಿಶೇಷ ಅಭಿಯಾನವನ್ನು ನೋಂದಣಿಗಾಗಿ ಮಾಡಲಾಗುತ್ತಿದ್ದು ಇದನ್ನು ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳಲು ತಹಶೀಲ್ದಾರ್ ರೇಣುಕುಮಾರ್ ಮನವಿ ಮಾಡಿದರು.
ತುರುವೇಕೆರೆ ತಾಲ್ಲೂಕು ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗೃಹಲಕ್ಷ್ಮೀ, ಅನ್ನಭಾಗ್ಯ, ಶಕ್ತಿ ಯೋಜನೆ , ಯುವ ನಿಧಿ, ಗೃಹ ಜ್ಯೋತಿ ಯೋಜನೆಗಳಿಗೆ ಸರಿಯಾದ ಫಲಾನುಭವಿಗಳಿಗೆ ತಲುಪುವ ನಿಟ್ಟಿನಲ್ಲಿ ಇದೇ ತಿಂಗಳ 3 –2 –24 ರಿಂದ 6—2–24 ಮತ್ತು 9–2 –24ರವರೆಗೆ ವಿಶೇಷ ನೋಂದಣಿ ಅಭಿಯಾನವನ್ನು ತಾಲೂಕಿನಲ್ಲಿರುವ ಗ್ರಾಮಒನ್ ಬಾಪೂಜಿ ಸೇವಾಕೇಂದ್ರ ಕರ್ನಾಟಕ ಓನ್ ಕೇಂದ್ರಗಳಲ್ಲಿ ನೋಂದಣಿ ಮಾಡಿಕೊಳ್ಳುತ್ತಿದ್ದು ಮತ್ತು ಆಯಾ ಗ್ರಾಮ ಪಂಚಾಯಿತಿಯ ವ್ಯಾಪ್ತಿಗಳಲ್ಲಿ ಆಯೋಜನೆ ಮಾಡಲಾಗಿದೆ ಸಾರ್ವಜನಿಕರು ತಮ್ಮ ಹತ್ತಿರದ ಗ್ರಾಮ ಪಂಚಾಯಿತಿಗಳು ಹಾಗೂ ಗ್ರಾಮಓನ್ ಗಳಿಗೆ ಭೇಟಿ ನೀಡಿ ನೋಂದಣಿ ಮಾಡಿಸಿಕೊಂಡು ಈ ಯೋಜನೆಯನ್ನು ಯಶಸ್ವಿಗೊಳಿಸಬೇಕೆಂದು ತಹಶೀಲ್ದಾರ್ ರವರು ಸಾರ್ವಜನಿಕರಲ್ಲಿ ಮನವಿ ಮಾಡಿದರು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಶಿವ ರಾಜಯ್ಯ, ಸಿಡಿಪಿಓ ಗೋಪಾಲಪ್ಪ, ತೋಟಗಾರಿಕಾ ಇಲಾಖೆಯ ಆಂಜನೇಯ ರೆಡ್ಡಿ, ಬೆಸ್ಕಾಂ ಎ ಇ ಇ ರಾಜಶೇಖರ್, ಕೆಎಸ್ ಆರ್ ಟಿಸಿ ಘಟಕ ವ್ಯವಸ್ಥಾಪಕರಾದ ಮೂರ್ತಿ, ಪಟ್ಟಣ ಪಂಚಾಯಿತಿ ಮುಖ್ಯಧಿಕಾರಿ ಶ್ರೀನಾಥ್ ಬಾಬು, ಆಹಾರ ಇಲಾಖೆಯ ಶಿರಸ್ತೆದಾರ್ ಪ್ರೇಮ, ಆಹಾರ ನಿರೀಕ್ಷಕರಾದ ಕೃಷ್ಣೆಗೌಡ, ಕೃಷಿ ಇಲಾಖೆಯ ತಾಂತ್ರಿಕ ವಿಭಾಗದ ಗಿರೀಶ್, ಕಂದಾಯ ಇಲಾಖೆಯ ವತ್ಸಲ ಸೇರಿದಂತೆ ಹಲವು ಅಧಿಕಾರಿಗಳು ಹಾಜರಿದ್ದರು.
ವರದಿ: ಸುರೇಶ್ ಬಾಬು ಎಂ. ತುರುವೇಕೆರೆ