ತುರುವೇಕೆರೆ. ತಾಲೂಕಿನ ಸೊರವನಹಳ್ಳಿ ಗ್ರಾಮ ಪಂಚಾಯಿತಿ ಆವರಣದಲ್ಲಿ ಪಂಚಾಯಿತಿ ವತಿಯಿಂದ ಪಂಚಾಯಿತಿ ಅಧ್ಯಕ್ಷರಾದ ಎನ್.ವಿ.ಶಶಿಕಲಾ ಅವರ ಅಧ್ಯಕ್ಷತೆಯಲ್ಲಿ ವಿಕಲಚೇತನರ ವಿಶೇಷ ಸಮನ್ವಯ ಗ್ರಾಮ ಸಭೆಯನ್ನು ನಡೆಸಲಾಯಿತು.
ಇದೇ ವೇಳೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಸಂತ್ ಕುಮಾರ್ ಮಾತನಾಡಿ, ಗ್ರಾಮ ಪಂಚಾಯಿತಿಯಲ್ಲಿ ವಿಶೇಷ ಚೇತನರಿಗೆ ಸಿಗುವಂತಹ 5% ಅನುದಾನ ಕುರಿತು ಮಾಹಿತಿ ನೀಡಿ ವಿಕಲಚೇತನರಿಗೆ ಸಂಬಂಧಪಟ್ಟಂತೆ ಯಾವುದೇ ಮಾಹಿತಿ ಬೇಕಿದ್ದರೆ, ನೇರವಾಗಿ ಗ್ರಾಮ ಪಂಚಾಯಿತಿಯಲ್ಲಿ ಪಡೆದುಕೊಳ್ಳಿ ಎಂದರು.
ಬಳಿಕ ಗ್ರಾಮೀಣ ಪುನರ್ ವಸತಿ ಕಾರ್ಯಕರ್ತೆ ಹೇಮಂತ ಕುಮಾರಿ ಮಾತನಾಡಿ, ವಿಕಲಚೇತನರಿಗೆ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಸುಮಾರು ಹದಿಮೂರು ಯೋಜನೆಗಳು ಲಭ್ಯವಿದ್ದು, ಅದರ ಅನುಸಾರವಾಗಿ ನಿರಾಮಯ ಆರೈಕೆದಾರದ ಮಾಹಿತಿ ಜೊತೆಗೆ ಅಂದ ಮಹಿಳೆಯರ ಮಕ್ಕಳ ಪೋಷಣ ವಿದ್ಯಾರ್ಥಿ ವೇತನ ಶುಲ್ಕ ಮರುಪಾವತಿ, ಬ್ರೈಲ್ ಕಿಟ್, ಟಾಕಿಂಗ್ ಲ್ಯಾಪ್ಟಾಪ್, ತ್ರಿಚಕ್ರ ವಾಹನ, ಹಾಗೂ ವಿಕಲಚೇತನರಿಗೆ ಸಂಬಂಧಪಟ್ಟಂತೆ ಇನ್ನೂ ಹಲವು ಮಾಹಿತಿ ನೀಡಿ ಹಾಗೂ ಸೌಲಭ್ಯಗಳ ಬಗ್ಗೆ ತಿಳಿಸಿಕೊಟ್ಟರು.
ಇದೇ ಸಂದರ್ಭದಲ್ಲಿ ಲೋಕೇಶ್, ಗ್ರಂಥಪಾಲಕರಾದ ಪ್ರೇಮ್ ಕುಮಾರ್, ಪಂಚಾಯಿತಿ ಸದಸ್ಯರಾದ, ಮಹಾಲಕ್ಷ್ಮಮ್ಮ, ಜಯಲಕ್ಷ್ಮಮ್ಮ, ಸ್ವಸಹಾಯ ಸಂಘದ ಧನಲಕ್ಷ್ಮಿ, ಸಾವಿತ್ರಮ್ಮ, ಪಂಚಾಯಿತಿ ಸಿಬ್ಬಂದಿ ವರ್ಗ, ಮತ್ತು ವಿಕಲಚೇತನರು ಹಾಗೂ ಪೋಷಕರು ಉಪಸ್ಥಿತರಿದ್ದರು.
ವರದಿ: ಮಂಜುನಾಥ, ತುರುವೇಕೆರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


