ಪಾವಗಡ: ಶ್ರೀ ಶಾರದಾದೇವಿ ಕಣ್ಣಿನ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ ಮಾರ್ಚ್ 26ರಂದು ಮಕ್ಕಳಿಗಾಗಿ ವಿಶೇಷ ನೇತ್ರ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ.
ಈ ಶಿಬಿರದಲ್ಲಿ ನಾಡಿನ ಹೆಸರಾಂತ ಮಕ್ಕಳ ತಜ್ಞರಾದ ಡಾ.ವಸುಧಾ ನರೇಶ್ MBBS MS (Ophth.), Fellowship in Strabismus & Cataract ರವರು ಭಾಗವಹಿಸಿ ಸೂಕ್ತ ಸಲಹೆ ಮತ್ತು ಚಿಕಿತ್ಸೆಯನ್ನು ನೀಡುವರು.
ಶಿಬಿರವು ಬೆಳಿಗ್ಗೆ 9:30 ರಿಂದ ಮಧ್ಯಾಹ್ನ 3:30ರವರೆಗೆ ನಡೆಯುತ್ತದೆ. ಮಕ್ಕಳಲ್ಲಿ ಕಂಡುಬರುವ ದೃಷ್ಟಿ ದೋಷ, ತಲೆ ನೋವು, ಕಣ್ಣು ಕೆಂಪಾಗಿರುವುದು, ಕಣ್ಣನ್ನು ಉಜ್ಜುವುದು, ಕಣ್ಣಲ್ಲಿ ಯಾವಾಗಲೂ ನೀರು ಮತ್ತು ಪಿಸಿರು ಸೋರುವುದು, ಮೆಳ್ಳಗಣ್ಣು, ಕಣ್ಣಿನ ಪೊರೆ, ರಾತ್ರಿ ವೇಳೆ ಕಣ್ಣು ಕಾಣಿಸದಿರುವುದು ಹಾಗೂ ಕಣ್ಣಿಗೆ ಸಂಬಂಧಪಟ್ಟ ಇನ್ನಿತರ ಯಾವುದಾದರೂ ತೊಂದರೆಗಳಿದ್ದಲ್ಲಿ ಪೋಷಕರು ತಮ್ಮ ಮಕ್ಕಳನ್ನು ಶಿಬಿರಕ್ಕೆ ಕರೆತಂದು ಸೂಕ್ತ ಸಲಹೆ ಹಾಗೂ ಚಿಕಿತ್ಸೆಯನ್ನು ಪಡೆಯಬಹುದು ಎಂದು ಸಂಸ್ಥೆಯ ಮುಖ್ಯಸ್ಥರಾದ ಶ್ರೀಸ್ವಾಮಿ ಜಪಾನಂದಜೀ ರವರು ತಿಳಿಸಿರುತ್ತಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4