nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೊರಟಗೆರೆ: ಮಾದಕ ವ್ಯಸನ ತಡೆಗೆ ‘ಸ್ವಾಸ್ಥ್ಯ ಸಂಕಲ್ಪ’ ಜಾಗೃತಿ

    July 1, 2026

    ಕೊರಟಗೆರೆಯಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಆರಂಭ ; ಜು.29ರವರೆಗೆ ಮನೆ-ಮನೆ ಭೇಟಿ

    July 1, 2026

    ಮತದಾರರ ಪಟ್ಟಿ ಪರಿಷ್ಕರಣೆಗೆ ಮನೆ–ಮನೆಗೆ ಭೇಟಿ ನೀಡುವ ಗಣತಿದಾರರಿಗೆ ಸಹಕರಿಸಲು ಮನವಿ

    July 1, 2026
    Facebook Twitter Instagram
    ಟ್ರೆಂಡಿಂಗ್
    • ಕೊರಟಗೆರೆ: ಮಾದಕ ವ್ಯಸನ ತಡೆಗೆ ‘ಸ್ವಾಸ್ಥ್ಯ ಸಂಕಲ್ಪ’ ಜಾಗೃತಿ
    • ಕೊರಟಗೆರೆಯಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಆರಂಭ ; ಜು.29ರವರೆಗೆ ಮನೆ-ಮನೆ ಭೇಟಿ
    • ಮತದಾರರ ಪಟ್ಟಿ ಪರಿಷ್ಕರಣೆಗೆ ಮನೆ–ಮನೆಗೆ ಭೇಟಿ ನೀಡುವ ಗಣತಿದಾರರಿಗೆ ಸಹಕರಿಸಲು ಮನವಿ
    • ಬೀದರ್‌: ರಾಡ್‌ನಿಂದ ಮಾರಣಾಂತಿಕ ಹಲ್ಲೆಗೈದು ಪತ್ನಿಯನ್ನು ಕೊಂದ ಪತಿ
    • ಬೀದರ್‌ | ಹೆದ್ದಾರಿಯಲ್ಲಿ ಬೈಕ್‌ ಗೆ ಕಾರು ಡಿಕ್ಕಿ: ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ‌, ಓರ್ವ ಗಂಭೀರ ಗಾಯ
    • ವೈದ್ಯರು – ಸಮಾಜದ ಜೀವನಾಡಿ
    • ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ: ಸರ್ವರೂ ಪಾಲ್ಗೊಳ್ಳುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕರೆ
    • SIR ಪ್ರಕ್ರಿಯೆಯಲ್ಲಿ ಭಾಗವಹಿಸಿದ ಸಿಎಂ ಡಿ.ಕೆ. ಶಿವಕುಮಾರ್!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೊರಟಗೆರೆಯಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಆರಂಭ ; ಜು.29ರವರೆಗೆ ಮನೆ-ಮನೆ ಭೇಟಿ
    ಕೊರಟಗೆರೆ July 1, 2026

    ಕೊರಟಗೆರೆಯಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಆರಂಭ ; ಜು.29ರವರೆಗೆ ಮನೆ-ಮನೆ ಭೇಟಿ

    By adminJuly 1, 2026No Comments2 Mins Read
    koratagere.jpg

    ವರದಿ: ಮಂಜುಸ್ವಾಮಿ ಎಂ.ಎನ್.

    ಕೊರಟಗೆರೆ: ಕೊರಟಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ Special Intensive Revision — SIR ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಒಂದು ತಿಂಗಳ ಕಾಲ ನಡೆಯುವ ಈ ಅಭಿಯಾನ ಜುಲೈ 29ಕ್ಕೆ ಮುಕ್ತಾಯವಾಗಲಿದೆ.

    ಕ್ಷೇತ್ರದ ಮಾಹಿತಿ: ಕೊರಟಗೆರೆ ಕ್ಷೇತ್ರದಲ್ಲಿ ಒಟ್ಟು 6 ಹೋಬಳಿ, 386 ಗ್ರಾಮ, 2,09,945 ಮತದಾರರು ಹಾಗೂ 240 ಮತಗಟ್ಟೆಗಳಿವೆ. ಪ್ರತಿ ಮತಗಟ್ಟೆಗೆ ಒಬ್ಬರಂತೆ ಒಟ್ಟು 240 ಬೂತ್ ಮಟ್ಟದ ಅಧಿಕಾರಿಗಳನ್ನು ಬಿ ಎಲ್ ಒ ನೇಮಿಸಲಾಗಿದೆ.
    ತಾಲೂಕು ಮತ್ತು ಹೋಬಳಿ ನೋಡೆಲ್ ಅಧಿಕಾರಿಗಳು ಹಾಗೂ ಬಿಎಲ್ ಒಗಳು ಮನೆ–ಮನೆಗೆ ಭೇಟಿ ನೀಡಿ ಮತದಾರರ ಹೆಸರು, ವಿಳಾಸ, ಫೋಟೋ ಸೇರಿದಂತೆ ಎಲ್ಲಾ ವಿವರಗಳನ್ನು ಪರಿಶೀಲಿಸಲಿದ್ದಾರೆ. ಹೊಸ ಮತದಾರರ ಸೇರ್ಪಡೆ, ಮೃತರಾದವರ ಹೆಸರು ತೆಗೆಯುವಿಕೆ, ತಿದ್ದುಪಡಿ ಕಾರ್ಯ ನಡೆಯಲಿದೆ.

    ಈ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲಾ ನೋಂದಣಾಧಿಕಾರಿ ವಿಜಯಲಕ್ಷ್ಮಿ ಡಿ.ಆರ್., ಕೃಷಿ ಇಲಾಖೆ ಉಪನಿರ್ದೇಶಕ ಡಾ.ಚಂದ್ರಕುಮಾರ್ ಹಾಗೂ ಕೊರಟಗೆರೆ ತಹಶೀಲ್ದಾರ್ ಮಂಜುನಾಥ್, ಪುರಸಭೆ ಮುಖ್ಯ ಅಧಿಕಾರಿ ಉಮೇಶ್, ಕಸಬಾ ಹೋಬಳಿ ಆರ್ ಐ ಬಸವರಾಜು, ವಿ ಎ ಪವನ್, ಅವರು ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೂತ್ ಮಟ್ಟದ ಅಧಿಕಾರಿಗಳ ಕಾರ್ಯ ವೈಖರಿ ಪರಿಶೀಲಿಸಿದರು.

    ಮತದಾರರ ಪಟ್ಟಿ ಪ್ರಜಾಪ್ರಭುತ್ವದ ಆಧಾರ. ಒಬ್ಬ ಮತದಾರನೂ ಮಿಸ್ ಆಗಬಾರದು, ನಕಲಿ ಮತದಾರ ಸೇರಬಾರದು. ಈ SIR ಅಭಿಯಾನದಲ್ಲಿ 100% ನಿಖರ ಪಟ್ಟಿ ತಯಾರಿಸುವುದು ನಮ್ಮ ಗುರಿ. ಬಿ ಎಲ್ ಒ ಗಳು ಪ್ರತಿ ಮನೆಗೂ ಭೇಟಿ ನೀಡಿ ಖಚಿತ ಪಡಿಸಿಕೊಳ್ಳುತ್ತಾರೆ.

    — ವಿಜಯಲಕ್ಷ್ಮೀ, ತುಮಕೂರು ಜಿಲ್ಲಾ ನೋಂದಣಾಧಿಕಾರಿ.

    ಗ್ರಾಮೀಣ ಭಾಗದ ರೈತಾಪಿ ಜನರಿಗೆ ಮತದಾನದ ಮಹತ್ವ ತಿಳಿಸಿಕೊಡುವುದು ನಮ್ಮ ಜವಾಬ್ದಾರಿ. ಈ ಪರಿಷ್ಕರಣೆ ವೇಳೆ 18 ವರ್ಷ ತುಂಬಿದ ಎಲ್ಲಾ ಯುವಕ–ಯುವತಿಯರ ಹೆಸರು ಸೇರ್ಪಡೆಯಾಗಬೇಕು. ರೈತರು ತಪ್ಪದೇ ಸಹಕರಿಸಿ.

    — ಡಾ. ಚಂದ್ರಕುಮಾರ್, ಉಪ ನಿರ್ದೇಶಕ, ಕೃಷಿ ಇಲಾಖೆ.

    ಯಾವುದೇ ಗೊಂದಲ ಅಥವಾ ಲೋಪ ಉಂಟಾಗದಂತೆ ಮನೆ-ಮನೆಗೆ ಸಮರ್ಪಕವಾಗಿ ಪರಿಶೀಲನೆ ನಡೆಸಿ, ದೋಷರಹಿತ ಮತದಾರರ ಪಟ್ಟಿ ಸಿದ್ಧಪಡಿಸಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇವೆ. ಸಾರ್ವಜನಿಕರು ಆಧಾರ್ ಕಾರ್ಡ್, ವೋಟರ್ ಐ ಡಿ, ಜನನ ಪ್ರಮಾಣ ಪತ್ರ ಸೇರಿದಂತೆ ಅಗತ್ಯ ದಾಖಲೆಗಳನ್ನು ಸಿದ್ಧವಾಗಿಟ್ಟುಕೊಂಡು ಬಿ ಎಲ್ ಒ ಗಳಿಗೆ ಸಹಕರಿಸಬೇಕು.

    — ಕೆ.ಮಂಜುನಾಥ, ತಹಶೀಲ್ದಾರ್ ಕೊರಟಗೆರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


    Provided by
    Provided by
    admin
    • Website

    Related Posts

    ಕೊರಟಗೆರೆ: ಮಾದಕ ವ್ಯಸನ ತಡೆಗೆ ‘ಸ್ವಾಸ್ಥ್ಯ ಸಂಕಲ್ಪ’ ಜಾಗೃತಿ

    July 1, 2026

    ಮತದಾರರ ಪಟ್ಟಿ ಪರಿಷ್ಕರಣೆಗೆ ಮನೆ–ಮನೆಗೆ ಭೇಟಿ ನೀಡುವ ಗಣತಿದಾರರಿಗೆ ಸಹಕರಿಸಲು ಮನವಿ

    July 1, 2026

    ಕೊರಟಗೆರೆ: 10,016 ಮಕ್ಕಳಿಗೆ ಪೋಲಿಯೋ ಲಸಿಕಾ ಗುರಿ: ಡಾ.ಜ್ಯೋತ್ಸ್ನಾ ರೆಡ್ಡಿ ಕರೆ

    June 29, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಕೊರಟಗೆರೆ: ಮಾದಕ ವ್ಯಸನ ತಡೆಗೆ ‘ಸ್ವಾಸ್ಥ್ಯ ಸಂಕಲ್ಪ’ ಜಾಗೃತಿ

    July 1, 2026

    ಕೊರಟಗೆರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರಾಜ್ಯಾದ್ಯಂತ ಆಯೋಜಿಸಿದ್ದ ‘ಸ್ವಾಸ್ಥ್ಯ ಸಂಕಲ್ಪ’ ಆನ್ ಲೈನ್ ಜಾಗೃತಿ ಕಾರ್ಯಕ್ರಮವು…

    ಕೊರಟಗೆರೆಯಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಆರಂಭ ; ಜು.29ರವರೆಗೆ ಮನೆ-ಮನೆ ಭೇಟಿ

    July 1, 2026

    ಮತದಾರರ ಪಟ್ಟಿ ಪರಿಷ್ಕರಣೆಗೆ ಮನೆ–ಮನೆಗೆ ಭೇಟಿ ನೀಡುವ ಗಣತಿದಾರರಿಗೆ ಸಹಕರಿಸಲು ಮನವಿ

    July 1, 2026

    ಬೀದರ್‌: ರಾಡ್‌ನಿಂದ ಮಾರಣಾಂತಿಕ ಹಲ್ಲೆಗೈದು ಪತ್ನಿಯನ್ನು ಕೊಂದ ಪತಿ

    July 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.