ತುಮಕೂರು: ನಗರದ ಶ್ರೀ ಸಿದ್ಧಾರ್ಥ ಪ್ರಥಮ ದರ್ಜೆ ಕಾಲೇಜಿನಲ್ಲಿ ರಸಾಯನಶಾಸ್ತ್ರ ವಿಭಾಗದಿಂದ ಆಂತರಿಕ ಗುಣಮಟ್ಟ ಭರವಸೆ ಕೋಶದ ಸಹಯೋಗದೊಂದಿಗೆ ಎಲೆಕ್ಟ್ರೋಕೆಮಿಸ್ಟ್ರಿ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಗುರುವಾರದಂದು ಮಾಡಲಾಯಿತು.
ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ನಿವೃತ್ತ ಸಹ ಪ್ರಾಧ್ಯಾಪಕರಾದ ಸುಬ್ಬಯ್ಯ ಅವರು ರಸಾಯನ ಶಾಸ್ತ್ರವನ್ನ ರಸವತ್ತಾಗಿ ಹಾಗೂ ಉತ್ತೇಜಭರಿತವಾಗಿ ಬೋಧಿಸಿ, ವಿದ್ಯಾರ್ಥಿಗಳಲ್ಲಿ ವಿಷಯದ ಬಗ್ಗೆ ಆಸಕ್ತಿ ಮೂಡುವಂತೆ ಮಾಡಿದರು.
ಶ್ರೀ ಸಿದ್ದಾರ್ಥ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಹೇಮಲತಾ ಪಿ. ಮಾತನಾಡಿ, ವಿದ್ಯಾರ್ಥಿಗಳಿಗೆ ಬಹಳ ಉಪಯೋಗವಾಗುವ ಕಾರ್ಯಕ್ರಮ ಆಗಿದೆ. ವಿದ್ಯಾರ್ಥಿಗಳು ಈ ಕಾರ್ಯಕ್ರಮದ ಸದುಪಯೋಗವನ್ನು ಪಡೆದುಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.
ಇದೇ ಸಂದರ್ಭದಲ್ಲಿ ಕನ್ನಡ ವಿಭಾಗದ ಮುಖ್ಯಸ್ಥರಾದ ಪ್ರೊ. ರಮೇಶ್ ಮನ್ನೆ.ಎಂ.ವಿ, ರಸಾಯನಶಾಸ್ತ್ರ ವಿಭಾಗ ಮುಖ್ಯಸ್ಥರಾದ ಕೆ.ವಿನೋದ, ರಸಾಯನಶಾಸ್ತ್ರ ವಿಭಾಗ ಸುಪ್ರಿಯಾ ಪಿ.ಹರಳೆ ಫ್ಯಾಕಲ್ಟಿ, ಐಕ್ಯೂಎಸಿ ಸಂಯೋಜಕರು ಹಾಗೂ ಎಂಕಾಂ ವಿಭಾಗದ ಮುಖ್ಯಸ್ಥರಾದ ಸೈಯದ್ ಬಾಬು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.
ವರದಿ: ನಂದೀಶ್ ನಾಯ್ಕ, ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC