ತುಮಕೂರು: ಆಗಸ್ಟ್ 21 ರಿಂದ 3 ದಿನಗಳು ನಡೆಯುವ ಸುಪ್ರೀಂ ಕೋರ್ಟ್‌ನ ವಿಶೇಷ ಲೋಕ್ ಅದಾಲತ್ ಕಾರ್ಯಕ್ರಮದಲ್ಲಿ ಭಾಗವಹಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ಕಕ್ಷಿದಾರರು ತಮ್ಮ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ ಎಂದು ಹೈಕೋರ್ಟ್ ನ್ಯಾಯಾಧೀಶರು ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷರಾದ ನ್ಯಾ. ಅನು ಶಿವರಾಮನ್ ತಿಳಿಸಿದ್ದಾರೆ.
ಬೆಂಗಳೂರಿನ ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರದಲ್ಲಿ ಗುರುವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ರಾಜ್ಯಾದ್ಯಂತ ಸುದ್ದಿಗೋಷ್ಠಿ ನಡೆಸಿದ ಅವರು, ಸುಪ್ರೀಂ ಕೋರ್ಟ್‌ನಲ್ಲಿ ಪ್ರಕರಣಗಳು ಬಾಕಿಯಿದ್ದು, ಹೊರ ರಾಜ್ಯದ ಕಕ್ಷಿದಾರರು ನ್ಯಾಯಾಲಯಕ್ಕೆ ಸಕಾಲಕ್ಕೆ ಹಾಜರಾಗದೆ ಪ್ರಕರಣಗಳು ಬಾಕಿಯಿರುವ ಹಿನ್ನೆಲೆಯಲ್ಲಿ ಹೊರ ರಾಜ್ಯದ ಕಕ್ಷಿದಾರರಿಗೆ ಅನುಕೂಲವಾಗಬೇಕೆಂಬ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶರ ಆದೇಶದಂತೆ ಲೋಕ ಅದಾಲತ್ ಕಾರ್ಯಕ್ರಮದ ಮೂಲಕ ಆಗಸ್ಟ್ 21 ರಿಂದ 3 ದಿನಗಳು ವಿಶೇಷ ಲೋಕ್ ಅದಾಲತ್ ನಡೆಸುತ್ತಿದ್ದು, ಈ ಕಾರ್ಯಕ್ರಮದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಮೂಲಕ ಪೂರ್ವ ಸಂಧಾನ ಕಾರ್ಯಕ್ರಮಗಳು ನಡೆದು ಆಗಸ್ಟ್ 21 ರಿಂದ 3 ದಿನಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ಕಕ್ಷಿದಾರರು ತಮ್ಮ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ ಎಂದು ಅವರು ವಿವರಿಸಿದರು.
ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಹಾಗೂ ರಾಜ್ಯ ಕಾನೂನು ಸೇವೆಗಳ ಸಮಿತಿ ಅಧ್ಯಕ್ಷರಾದ ನ್ಯಾ. ಆರ್. ದೇವದಾಸ್, ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಜಿಲ್ಲಾ ನ್ಯಾಯಾಧೀಶರಾದ ಹೆಚ್. ಶಶಿಧರಶೆಟ್ಟಿ ಇದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


