ಕೊರಟಗೆರೆ: ತಾಲ್ಲೂಕಿನಾದ್ಯಂತ ಶ್ರೀ ಆಂಜನೇಯ ಸ್ವಾಮಿ ದೇಗುಲಗಳಲ್ಲಿ ಹನುಮ ಜಯಂತಿಯನ್ನು ಹಲವು ಧಾರ್ಮಿಕ ಪೂಜಾ ಕಾರ್ಯಕ್ರಮಗಳೊಂದಿಗೆ ವಿಶೇಷವಾಗಿ ಆಚರಿಸಿದ್ದು, ಪಟ್ಟಣದ ಉದ್ಭವ ಮೂರ್ತಿ ಇತಿಹಾಸವುಳ್ಳ ಶ್ರೀ ಗುಂಡಾಂಜನೇಯ ಸ್ವಾಮಿ ದೇಗುಲದಲ್ಲಿಯೂ ಹನುಮ ಜಯಂತಿಯನ್ನು ವಿಶೇಷವಾಗಿ ಆಚರಿಸಿ ಭಕ್ತರ ದರ್ಶನಕ್ಕೆ ವಿಶೇಷ ವ್ಯವಸ್ಥೆ ಕಲ್ಪಿಸಲಾಗಿತ್ತು.
ಹನುಮ ಜಯಂತಿ ಅಂಗವಾಗಿ ಶ್ರೀ ಗುಂಡಾಂಜನೇಯ ಸ್ವಾಮಿ ದೇವಾಲಯವನ್ನು ಹಸಿರು ತೋರಣ, ಹೂಗಳಿಂದ ಅಲಂಕೃತಗೊಳಿಸಿದ್ದು, ಸ್ವಾಮಿಗೆ ಮುಂಜಾನೆಯಿಂದಲೇ ಗಂಗಾಪೂಜೆ, ಪಂಚಾಮೃತ ಅಭಿಷೇಕ, ವಿಶೇಷ ಹೂವಿನ ಅಲಂಕಾರ, ಮಹಾ ಮಂಗಳಾರತಿ, ಸ್ವಾಮಿ ಉತ್ಸವ ಈಗೇ ಅನೇಕ ಧಾರ್ಮಿಕ ಪೂಜೆಗಳು ಜರುಗಿದ್ದು, ದರ್ಶನ ಪಡೆದ ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.

ಅರ್ಚಕ ಕಸ್ತೂರಿ ಹನುಮ ಜಯಂತಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ, ಪ್ರತಿ ವರ್ಷ ಭಕ್ತರ ಸಹಕಾರದಿಂದ ಹನುಮ ಜಯಂತಿಯನ್ನು ಹಲವು ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ಆಚರಣೆ ಮಾಡಲಾಗುತ್ತದೆ. ಜಯಂತಿ ಅಂಗವಾಗಿ ಮುಂಜಾನೆಯಿಂದಲೇ ವಿಶೇಷ ಪೂಜೆಗಳು ನಡೆದಿವೆ, ಭಕ್ತರು ಸಹ ಕುಟುಂಬ ಸಮೇತ ಹೆಚ್ಚಿನ ಸಂಖೈಯಲ್ಲಿ ಆಗಮಿಸಿ ಸ್ವಾಮಿ ದರ್ಶನ ಪಡೆದು ಪ್ರಸಾದ ಸ್ವೀಕರಿಸುತ್ತಿದ್ದಾರೆ ಎಂದರು.
ಈ ವೇಳೆ ದಲಿತ ಮುಖಂಡರು, ಕಾಂಗ್ರೆಸ್‌ನ ಪ್ರಮುಖ ಮುಖಂಡರು, ಮಹಿಳಾ ಕಾರ್ಯಕರ್ತರು ಸೇರಿದಂತೆ ಇತರರು ಹಾಜರಿದ್ದರು.
ಪರಂ ಮುಖ್ಯಮಂತ್ರಿಯಾಗಲೆಂದು ವಿಶೇಷ ಪೂಜೆ:
ರಾಜ್ಯವು ಇನ್ನಷ್ಟು ಅಭಿವೃದ್ಧಿಯಾಗಬೇಕಾದರೆ ದೂರದೃಷ್ಠಿ ನಾಯಕತ್ವ ಗುಣವುಳ್ಳ, ಸಜ್ಜನ ರಾಜಕಾರಿಣಿ ಡಾ.ಜಿ ಪರಮೇಶ್ವರ ಅವರು ಮುಖ್ಯಮಂತ್ರಿಯಾಗುವುದು ಸೂಕ್ತ, ರಾಜ್ಯದ ಪ್ರತಿಯೊಬ್ಬ ದಲಿತ ಮುಖಂಡರ, ಡಾ.ಜಿ ಪರಮೇಶ್ವರ ಅಭಿಮಾನಿ ಬಳಗ, ಪಕ್ಷದ ಬೆಂಬಲಿಗರ ಆಗ್ರಹವಾಗಿದ್ದು ಹನುಮ ಜಯಂತಿಯಂದು ಪರಮೇಶ್ವರ ಅವರು ಆದಷ್ಟು ಬೇಗ ಮುಖ್ಯಮಂತ್ರಿಯಾಗುವಂತೆ ಅನುಗ್ರಹಿಸುವಂತೆ ಆಂಜನೇಯ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿಕೊಂಡರು.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


