ವರದಿ: ಹಾದನೂರು ಚಂದ್ರ
ಸರಗೂರು: ಪಟ್ಟಣದಲ್ಲಿ ನಾಯಕ ಸಮಾಜದ ವತಿಯಿಂದ ಶ್ರೀ ಚಿಕ್ಕದೇವಮ್ಮನವರ 49ನೇ ವರ್ಷದ ಅಂಗವಾಗಿ ಶುಕ್ರವಾರ ವಿಶೇಷ ಪೂಜಾ ಮಹೋತ್ಸವ ಹಾಗೂ ಪಲ್ಲಕ್ಕಿ ಉತ್ಸವದ ಮೆರವಣಿಗೆ ವಿಜೃಂಭಣೆಯಿಂದ ನಡೆಸಲಾಯಿತು.
ಮಹೋತ್ಸವದ ಹಿನ್ನೆಲೆಯಲ್ಲಿ ಪಟ್ಟಣದ ನಾಯಕ ಸಮಾಜದ ಬೀದಿಗಳನ್ನು ವಿವಿಧ ಬಗೆಯ ತಳಿರು ತೋರಣಗಳಿಂದ ಅಲಂಕರಿಸಿ, ಪ್ರತಿ ಬೀದಿಗಳಲ್ಲಿ ರಂಗೋಲಿ ಬಿಡಿಸಿ ಬಣ್ಣ, ಬಣ್ಣದ ವಿದ್ಯುತ್ ದೀಪಾಲಂಕಾರ ಮಾಡಲಾಗಿತ್ತು. ಚಿಕ್ಕದೇವಮ್ಮನವರ ದೇವಾಲಯದಲ್ಲಿ ಮುಂಜಾನೆಯಿಂದಲೇ ಹೋಮ, ಹವನ ನಡೆಸಿ, ಗಣಪತಿ ಹೋಮ ಪುಣ್ಯಾಹ, ಕಳಸ ಪ್ರತಿಷ್ಠಾಪಿಸಿ, ನವಗ್ರಹದ ಹೋಮ, ದುರ್ಗಹೋಮ ಸೇರಿದಂತೆ ವಿವಿಧ ಹೋಮಗಳು ಹಾಗೂ ವಿವಿಧ ಪೂಜಾ ಕೈಂಕರ್ಯಗಳು ವಿಶೇಷವಾಗಿ ಜರುಗಿದವು.
ಇದಕ್ಕೂ ಮುನ್ನ ಕಪಿಲ ನದಿಗೆ ತೆರಳಿ ಗಂಗೆ ಪೂಜೆ ನಡೆಸಲಾಯಿತು. ಚಿಕ್ಕದೇವಮ್ಮನವರ ಉತ್ಸವ ಮೂರ್ತಿಯನ್ನು ವಿವಿಧ ಹೂವುಗಳಿಂದ ಅಲಂಕರಿಸಿ, ಪಲ್ಲಕ್ಕಿ ಮೇಲೆ ಅಮ್ಮನವರ ವಿಗ್ರಹ ಕೂರಿಸಿ ಪೂರ್ಣಕುಂಬ ಕಳಸದೊಂದಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು. ಮಂಗಳವಾದ್ಯ ಮೊಳಗಿದವು. ಸತ್ತಿಗೆ, ಬ್ಯಾಂಡ್‌ಸೆಟ್, ವೀರಗಾಸೆ ಕುಣಿತ ಮೆರವಣಿಗೆಗೆ ಮೆರಗು ನೀಡಿದವು.
ಚಿಕ್ಕದೇವಮ್ಮನವರ ಉತ್ಸವ ಮೂರ್ತಿಯನ್ನು ವಿವಿಧ ಹೂವುಗಳಿಂದ ಅಲಂಕರಿಸಿ, ಪಲ್ಲಕ್ಕಿಯಲ್ಲಿ ಕೂರಿಸಿ, ಪೂರ್ಣಕುಂಭ ಕಲಶದೊಂದಿಗೆ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ತರಲಾಯಿತು.
ಗಮನ ಸೆಳೆದ ವೀರಗಾಸೆ: ವಿವಿಧ ಕಲಾ ತಂಡಗಳು ತಮ್ಮ ಪ್ರದರ್ಶನ ನೀಡಿದವು. ಮಂಗಳವಾದ್ಯ, ಬ್ಯಾಂಡ್‌ಸೆಟ್ ನಾದ ಮೊಳಗಿದವು. ಸತ್ತಿಗೆಯನ್ನು ತರಲಾಯಿತು. ಹಳೇ ಹೆಗ್ಗುಡಿಲು ನೀಲಕಂಠ ತಂಡದಿಂದ ಪ್ರದರ್ಶಿಸಿದ ವೀರಗಾಸೆ ಕುಣಿತ ನೋಡುಗರ ಗಮನ ಸೆಳೆಯಿತು. ಉತ್ಸವ ದೇವಾಲಯ ತಲುಪಿದ ನಂತರ ವಿಶೇಷ ಪೂಜೆ ಸಲ್ಲಿಸಿ, ಮಹಾ ಮಂಗಳಾರತಿ ಮಾಡಿ ಪ್ರಸಾದ ವಿನಿಯೋಗ ಮಾಡಲಾಯಿತು.
ಕಪಿಲಾ ನದಿ ದಡದಿಂದಲೂ ಸಾಗಿದ ಮೆರವಣಿಗೆಯಲ್ಲಿ ಹೆಣ್ಣು ಮಕ್ಕಳು ಪೂರ್ಣಕುಂಭ ಹೊತ್ತು ಹರಕೆ ತೀರಿಸಿದರು. ಇನ್ನು ಕೆಲ ಬಾಲಕಿಯರು, ಮಹಿಳೆಯರು ದಾರಿಯುದ್ದಕ್ಕೂ ಉತ್ಸವ ಮೂರ್ತಿಗೆ ಆರತಿ ಎತ್ತಿ ತಮ್ಮ ಇಷ್ಟಾರ್ಥ ಈಡೇರಿಸುವಂತೆ ಪ್ರಾರ್ಥಿಸಿದರು. ಭಕ್ತಾದಿಗಳು ಮಜ್ಜಿಗೆ, ಪಾನಕ, ಕೋಸಂಬರಿ ವಿತರಿಸಿದರು.
ಉತ್ಸವಮೂರ್ತಿ ದೇವಾಲಯಕ್ಕೆ ತಲುಪಿದ ನಂತರ ವಿಶೇಷ ಪೂಜೆ ನಡೆಸಿ, ಮಹಾಮಂಗಳಾರತಿ ಮಾಡಿ ಪ್ರಸಾದ ವಿನಿಯೋಗ ಮಾಡಲಾಯಿತು. ಮೆರವಣೆಗೆಯಲ್ಲಿ ಹೆಣ್ಣು ಮಕ್ಕಳು 101 ಪೂರ್ಣ ಕಳಸ ಹೊತ್ತು ಹರಕೆ ತಿರಿಸಿದರು. ಭಕ್ತಾದಿಗಳು ದಾರಿ ಉದ್ದಕ್ಕೂ ಮಜ್ಜಿಗೆ, ಪಾನಕ, ಕೋಸುಂಬರಿ ವಿತರಿಸಿದರು. ಇನ್ನು ಕೆಲವರು ದೇವರಿಗೆ ನಮಸ್ಕರಿಸಿ ತೆಂಗಿನಕಾಯಿ ಹೊಡೆದರು. ಸರಗೂರು ಅಕ್ಕ, ಪಕ್ಕದ ಗ್ರಾಮಗಳ ಭಕ್ತಾಧಿಗಳು ಚಿಕ್ಕದೇವಮ್ಮನವರ ಉತ್ಸವಮೂರ್ತಿಯನ್ನು ಕಣ್ತುಂಬಿಕೊಂಡರು.
ಪಟ್ಟಣ ಹಾಗೂ ಅಕ್ಕ ಪಕ್ಕದ ಗ್ರಾಮಗಳಿಂದಲೂ ಸಾವಿರಾರು ಭಕ್ತರುವ ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸಿ, ದೇವಿಯ ದರ್ಶನ ಪಡೆದರು. ನಾಯಕ ಸಮಾಜದ ಯಜಮಾನರು.ಪಪಂ ಸದಸ್ಯರು ಹಾಗೂ ಮುಖಂಡರು ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ನಾಯಕ ಸಮಾಜದ ಯಜಮಾನರು, ಮುಖಂಡರು ಸಮಾಜದ ಬಂಧುಗಳು ಹಾಜರಿದ್ದರು.
ಇಂದಿನ ಚಿಕ್ಕದೇವಮ್ಮ ವಾರ್ಷಿಕೋತ್ಸವ ವಿಜೃಂಭಣೆಯಿಂದ ಜ 27 ರವರೆಗೂ ನಡೆಯುತ್ತಿದೆ .ಪ್ರತಿ ದಿನ ಸಾಂಸ್ಕೃತಿಕ ಕಾರ್ಯಕ್ರಮ ಇರುತ್ತದೆ .ತಾಯಿಗೆ ಪೂಜೆ ಕಾರ್ಯಕ್ರಮ ಆಚರಿಸಲಾಗುತ್ತದೆ.ತಾಲ್ಲೂಕಿನ ವಿವಿಧ ಗ್ರಾಮಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ತಾಯಿಗೆ ಪೂಜೆ ಸಲ್ಲಿಸಲು ಬರುತ್ತಿದ್ದಾರೆ.ತಾಯಿಯ ದರ್ಶನ ಪಡೆದು ಪುನೀತರಾಗಿ ಎಂದರು.
ಶ್ರೀನಿವಾಸ.ಪಪಂ ಸದಸ್ಯ ಹಾಗೂ ನಾಯಕ ಸಮಾಜದ ಉಪಾಧ್ಯಕ್ಷ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


