ನಮಗೆ ದೇವಾಲಯದ ತೀರ್ಥಪ್ರಸಾದ ಬೇಡ. ಉನ್ನತ ಶಿಕ್ಷಣಕ್ಕಾಗಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ(ಬಿಎಂಟಿಸಿ) ಬಸ್ ಗಳು ಬೇಕು” ಎಂದು ಎಂಟನೇ ತರಗತಿಯ ವಿದ್ಯಾರ್ಥಿಯೊಬ್ಬಳು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.
ಬೆಂಗಳೂರು ಗ್ರಾಮಾಂತರದ ತಾವರಕೆರೆ ವ್ಯಾಪ್ತಿಯ ಸೀಗೆಹಳ್ಳಿಯಲ್ಲಿ ವಾಸವಿರುವ 8ನೇ ತರಗತಿ ವಿದ್ಯಾರ್ಥಿನಿ ವಿ.ವೈ. ಹರ್ಷಿಣಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. “ಈ ದೇಶದ ರಾಷ್ಟ್ರಪತಿ ಮಹಿಳೆ. ಇಂದಿನ ದಿನಗಳಲ್ಲಿ ಹೆಣ್ಣು ಮಕ್ಕಳಿಗೆ ಉನ್ನತ ಶಿಕ್ಷಣ ಮತ್ತು ಸುರಕ್ಷತೆ ಸಿಗುವಂತೆ ಮಾಡಿರುವುದು ಬಾಬಾಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಅವರ ಆಶೀರ್ವಾದ. ಹಾಗಾಗಿ, ಬಾಬಾಸಾಹೇಬ್ ಅಂಬೇಡ್ಕರ್ ಅವರ ಹೆಸರಿನಲ್ಲಿ ಶಾಲಾ ಮಕ್ಕಳಿಗೆ ಪ್ರತಿ ಜಿಲ್ಲೆ ಮತ್ತು ತಾಲೂಕು ಹಳ್ಳಿಯ ಶಾಲಾ ಮಕ್ಕಳಿಗೆ ವಿಶೇಷ ಸಾರಿಗೆ ಬಸ್ ಆರಂಭಿಸಬೇಕು” ಎಂದು ಮನವಿ ಮಾಡಿದ್ದಾಳೆ.
ಸ್ವಾಮಿ, ನಾನು ಕುಮಾರಿ ವಿ.ವೈ.ಹರ್ಷಿಣಿ, 8ನೇ ತರಗತಿ ವಿದ್ಯಾರ್ಥಿನಿ. ನಾನು ಮತ್ತು ನನ್ನ ತಾಯಿ ಹಲವು ಬಾರಿ ತಮ್ಮ ಸಂಸ್ಥೆಯ ಅಧಿಕಾರಿಗಳಿಗೆ ತಾವರೆಕೆರೆಯಿಂದ ಮಾಗಡಿ ರಸ್ತೆಯ ಮುಖಾಂತರ ಶ್ರೀನಗರ ಬಸ್ ನಿಲ್ದಾಣಕ್ಕೆ ಸಾರಿಗೆ ಸಂಸ್ಥೆಯ ಬಸ್ ಬಿಡಬೇಕೆಂದು ಮನವಿ ಮಾಡಿಕೊಂಡಿದ್ದೇವೆ. ಈ ಪತ್ರಕ್ಕೆ ಸಂಸ್ಥೆಯ ಅಧಿಕಾರಿಗಳು ಯಾವುದೇ ಉತ್ತರವನ್ನು ನೀಡಿರುವುದಿಲ್ಲ. ಆದರೆ, ಪ್ರತಿ ಗುರುವಾರ ಹಾಗೂ ಭಾನುವಾರ ಸುಮ್ಮನಹಳ್ಳಿಯಿಂದ ಕಡಬಗೆರೆ ಮಾರ್ಗವಾಗಿ ರಾಯರ ಕಾಮದೇನು ದೇವಾಲಯಕ್ಕೆ ಪ್ರತಿ ಗಂಟೆಗೆ ಬಸ್ ಬಿಡಲಾಗುತ್ತಿದೆ.
ನಮಗೆ ದೇವಾಲಯದ ತೀರ್ಥಪ್ರಸಾದ ಬೇಡ, ನಮಗೆ ಉನ್ನತ ಶಿಕ್ಷಣಕ್ಕಾಗಿ ಸಂಸ್ಥೆಯ ಸಾರಿಗೆ ವಾಹನಗಳು ಬೇಕಾಗಿದೆ. ಈ ದೇಶದ ರಾಷ್ಟ್ರಪತಿ ಮಹಿಳೆ. ಇಂದಿನ ದಿನಗಳಲ್ಲಿ ಹೆಣ್ಣು ಮಕ್ಕಳಿಗೆ ಉನ್ನತ ಶಿಕ್ಷಣ ಮತ್ತು ಸುರಕ್ಷತೆ ಸಿಗುವಂತೆ ಮಾಡಿರುವುದು ಬಾಬಾಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಅವರ ಆಶೀರ್ವಾದ.
ಬಾಬಾಸಾಹೇಬ್ ಅಂಬೇಡ್ಕರ್ ಅವರ ಹೆಸರಿನಲ್ಲಿ ಶಾಲಾ ಮಕ್ಕಳಿಗೆ ಪ್ರತಿ ಜಿಲ್ಲೆ ಮತ್ತು ತಾಲೂಕು ಹಳ್ಳಿಯ ಶಾಲಾ ಮಕ್ಕಳಿಗೆ ವಿಶೇಷ ಸಾರಿಗೆ ಬಸ್ ಗಳನ್ನು ಆರಂಭಿಸಬೇಕು ಎಂದು ಮನವಿ ಮಾಡಿ ಪತ್ರ ಬರೆದಿದ್ದಾಳೆ.
ಈ ಪತ್ರವನ್ನು ಸಿಎಂ ಸಿದ್ದರಾಮಯ್ಯ ಅವರಿಗೆ ಮಾತ್ರವಲ್ಲದೆ, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಶಿಕ್ಷಣ ಸಚಿವ ಮಧು ಬಂಗಾರಪ್ಪ ಹಾಗೂ ಬಿಎಂಟಿಸಿ ಎಂಡಿ ರಾಮಚಂದ್ರನ್ ಆರ್ ಅವರಿಗೆ ಕಳುಹಿಸಿದ್ದಾಳೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


