nammatumakuru

    Subscribe to Updates

    Get the latest creative news from FooBar about art, design and business.

    What's Hot

    ದೇಶದಲ್ಲಿ ಪ್ರಜಾಪ್ರಭುತ್ವವೋ ಅಥವಾ ತುರ್ತು ಪರಿಸ್ಥಿತಿಯೋ? ಪ್ರಧಾನಿ ಮೋದಿ ಉತ್ತರಿಸಬೇಕು: ಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ

    October 12, 2026

    ‘ಪ್ರೇಮದ ಊರಲಿ’ ಸಿನಿಮಾ ವೀಕ್ಷಣೆಗೆ ಹೋಗಿದ್ದ ಕುಟುಂಬಕ್ಕೆ ಶಾಕ್; ಮಂಚದ ಕೆಳಗೆ ಅವಿತಿದ್ದ ಕಳ್ಳ ರೆಡ್‌ ಹ್ಯಾಂಡ್‌ ಸಿಕ್ಕಿಬಿದ್ದ!

    October 12, 2026

    ಸಿಎಂ ಹುದ್ದೆ ಖಾಲಿ ಇಲ್ಲ, ಸದ್ಯಕ್ಕೆ ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಡಾ. ಜಿ. ಪರಮೇಶ್ವರ್ ಸ್ಪಷ್ಟನೆ

    October 12, 2026
    Facebook Twitter Instagram
    ಟ್ರೆಂಡಿಂಗ್
    • ದೇಶದಲ್ಲಿ ಪ್ರಜಾಪ್ರಭುತ್ವವೋ ಅಥವಾ ತುರ್ತು ಪರಿಸ್ಥಿತಿಯೋ? ಪ್ರಧಾನಿ ಮೋದಿ ಉತ್ತರಿಸಬೇಕು: ಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ
    • ‘ಪ್ರೇಮದ ಊರಲಿ’ ಸಿನಿಮಾ ವೀಕ್ಷಣೆಗೆ ಹೋಗಿದ್ದ ಕುಟುಂಬಕ್ಕೆ ಶಾಕ್; ಮಂಚದ ಕೆಳಗೆ ಅವಿತಿದ್ದ ಕಳ್ಳ ರೆಡ್‌ ಹ್ಯಾಂಡ್‌ ಸಿಕ್ಕಿಬಿದ್ದ!
    • ಸಿಎಂ ಹುದ್ದೆ ಖಾಲಿ ಇಲ್ಲ, ಸದ್ಯಕ್ಕೆ ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಡಾ. ಜಿ. ಪರಮೇಶ್ವರ್ ಸ್ಪಷ್ಟನೆ
    • ‘We’re Sorry’: ಸಿಜೆಪಿ ನಾಯಕ ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಸುದ್ದಿ ಮುಟ್ಟಿಸಿದ ಪೊಲೀಸ್; ವೈರಲ್ ವೀಡಿಯೊ
    • ಕೆರೆಯಲ್ಲಿ ಮುಳುಗಿ ಪಿಯುಸಿ ವಿದ್ಯಾರ್ಥಿ ಸಾವು: ಕಣ್ಣು ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ಅರ್ಜುನ್
    • ಅಖಿಲ ಭಾರತ ಪ್ರತಿಭಟನಾ ದಿನ : AIDSO
    • ತುಮಕೂರು ದಸರಾ–2026: ದಸರಾ ಅಂಬಾರಿ ಬಸ್‌ ಗೆ ಚಾಲನೆ
    • ತುಮಕೂರು ದಸರಾ ಹಿಂದಿದೆ ವಿಶೇಷ ಇತಿಹಾಸ ಹಾಗೂ ಉದ್ದೇಶ! ಏನದು ?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿ: ಸಿಎಂ ಸಿದ್ದರಾಮಯ್ಯ
    ರಾಜ್ಯ ಸುದ್ದಿ April 12, 2026

    ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿ: ಸಿಎಂ ಸಿದ್ದರಾಮಯ್ಯ

    By adminApril 12, 2026No Comments2 Mins Read

    ಬೀದರ್ : ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ಮಾಡುತ್ತಿದ್ದೀವಾ? ಎಂದು ಪತ್ರಕರ್ತರು ತಮ್ಮನ್ನು ತಾವು ನೋಡಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

    ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಬೀದರ್ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿದ್ದ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು.

    ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾದದ್ದು.  ಕ್ಷುಲ್ಲಕ ವಿಚಾರವನ್ನು ದಿನವಿಡೀ ತೋರಿಸುವವರು ಅದರ ಪರಿಣಾಮದ ಬಗ್ಗೆಯೂ ಯೋಚಿಸಬೇಕು. ಗಂಡ ಹೆಂಡತಿ ಜಗಳವನ್ನು ಇಡೀ ದಿನ‌ ತೋರಿಸಿದರೆ ಅದರಿಂದ ಸಮಾಜಕ್ಕೆ ಏನು ಪ್ರಯೋಜನ ಎಂದು ಪ್ರಶ್ನಿಸಿದರು.

    ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ಮಾಡುತ್ತಿದ್ದೀವಾ? ಎಂದು ಪತ್ರಕರ್ತರು ತಮ್ಮನ್ನು ತಾವು ನೋಡಿಕೊಳ್ಳಬೇಕು.  ಅಂಬೇಡ್ಕರ್ ಮತ್ತು ಮಹಾತ್ಮಗಾಂಧಿ ಇಬ್ಬರೂ ಪತ್ರಕರ್ತರಾಗಿ ಧ್ವನಿ ಇಲ್ಲದವರ ಧ್ವನಿಯಾಗಿದ್ದರು. ಸಮಾಜದಲ್ಲಿರುವ ನ್ಯೂನ್ಯತೆಗಳನ್ನು ಹೋಗಲಾಡಿಸಿ ಸಮಾಜವನ್ನು ಕಟ್ಟುವ ಕಾಯಕವನ್ನು ಬಸವಾದಿ ಶರಣರು ಮಾಡಿದ್ದರು. ಶರಣರ ಆಶಯದ ಸಮಸಮಾಜ ಆಗದಿದ್ದರೆ ಅಸಮಾನತೆ ಮುಂದುವರೆಯುತ್ತದೆ. ಮುಂದುವರೆಯಲಿ ಎನ್ನುವುದು ಪಟ್ಟಭದ್ರರ ಹಿತಾಸಕ್ತಿಯಾಗಿದೆ ಎಂದರು.

    ಬಸವಣ್ಣ ತಿರಸ್ಕರಿದ್ದ ಕರ್ಮಸಿದ್ಧಾಂತವನ್ನು ಪಾಲಿಸುವವರು ಈಗ ಹೆಚ್ಚಾಗಿದ್ದಾರೆ. ಈ ಮೌಡ್ಯ ಆಚರಿಸುವವರೆಲ್ಲಾ ವಿದ್ಯಾವಂತರೇ ಎನ್ನುವುದು ಬೇಸರದ ಸಂಗತಿ, ಆದ್ದರಿಂದ ವೈಚಾರಿಕತೆ ಇರುವ ವೈಜ್ಞಾನಿಕ ಶಿಕ್ಷಣ ಪದ್ಧತಿ ಅಗತ್ಯ. ಯಾವ ದೇವರೂ ಯಾರನ್ನೂ ಕೂಡ ಅವಿದ್ಯಾವಂತನಾಗು ಅಂತಾಗಲೀ, ಕೆಳ ಜಾತಿಯಲ್ಲೇ ಹುಟ್ಟು ಎಂದು ಬಯಸುವುದಿಲ್ಲ. ಈ ಅರಿವನ್ನು ಜನರಲ್ಲಿ ಹೆಚ್ಚಿಸುವ ಕೆಲಸ ಪತ್ರಕರ್ತರಿಂದ ಆಗಬೇಕು. ಪತ್ರಕರ್ತರು ಕೇವಲ ಮಾಹಿತಿ ಕೊಡುವವರಾಗದೆ, ಸಮಾಜ ಸುಧಾರಣೆಗೂ ಒತ್ತು ನೀಡಬೇಕು ಎಂದರು.

    ಅಂಬೇಡ್ಕರ್ ಅವರ ಆಶಯದಂತೆ ಎಲ್ಲರಿಗೂ ಆರ್ಥಿಕ, ಸಾಮಾಜಿಕ‌ ಶಕ್ತಿ ಕೊಡುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ 2013 ರಲ್ಲೂ ಮಾಡಿತ್ತು. ಈಗಲೂ ಮುಂದುವರೆಸಿದ್ದೇವೆ. ನಾವು ಬಡವರ ಪರವಾದ ಯೂನಿವರ್ಸಲ್ ಬೇಸಿಕ್ ಇನ್ ಕಂ ಆರ್ಥಿಕತೆಯನ್ನು ಪಾಲುಸುತ್ತಿದ್ದೇವೆ. ಇದನ್ನು ಪತ್ರಕರ್ತರು ಅರ್ಥ ಮಾಡಿಕೊಳ್ಳಬೇಕು ಎಂದರು.

    ಜಾತಿ ಸಮಾಜ ಚಲನೆ ಇಲ್ಲದ್ದು.‌ ಸಮಾಜವನ್ನು ಚಲನಶೀಲಗೊಳಿಸಲು ವಸ್ತುನಿಷ್ಠವಾದ ವೃತ್ತಿಪರತೆಯನ್ನು ಪತ್ರಕರ್ತರು ಪಾಲಿಸಬೇಕು ಎಂದರು.

    ಕೆಲವು ಒಳ್ಳೆ ಪತ್ರಕರ್ತರೂ ಇದ್ದಾರೆ. ಆದರೆ ಬಹಳಷ್ಟು ಮಾಧ್ಯಮ‌ ಸಂಸ್ಥೆಗಳು ಕಾರ್ಪೋರೇಟ್ ಹಿಡಿತಕ್ಕೆ ಒಳಪಟ್ಟಿವೆ. ಪತ್ರಕರ್ತರು ಸತ್ಯ ಬರೆದರೂ ಕೆಲವೊಮ್ಮೆ ಸಂಪಾದಕರುಗಳು ಮಾಲೀಕರ ಒತ್ತಡಕ್ಕೆ ಮಣಿದು ಬದಲಾಯಿಸಿಬಿಡುತ್ತಾರೆ. ನಾನು ಮಂತ್ರಿಯಾಗಿ 40 ವರ್ಷ ಆಯ್ತು. ನಮ್ಮ ಸರ್ಕಾರದ ಪರವಾಗಿ ಬರೆಯಿರಿ ಎಂದು ಇವತ್ತಿನವರೆಗೂ ನಾನು ಯಾರನ್ನೂ ಕೇಳಿಲ್ಲ‌ ಎಂದರು.

    ಜನಸಾಮಾನ್ಯರು ಇನ್ನೂ ಪತ್ರಿಕೆಗಳ ಮೇಲೆ ನಂಬಿಕೆ ಇಟ್ಟಿದ್ದಾರೆ. ನಾನೂ ನಂಬಿಕೆ ಇಟ್ಟಿದ್ದೇನೆ ಎಂದರು.

    ಬೀದರ್ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ್  ಖಂಡ್ರೆ, ಸಚಿವರುಗಳಾದ ರಹೀಂ ಖಾನ್, ಶರಣ ಪ್ರಕಾಶ್ ಪಾಟೀಲ್, ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರರಾದ ಕೆ.ವಿ.ಪ್ರಭಾಕರ್, ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು, ಜಿಲ್ಲಾಧ್ಯಕ್ಷರಾದ ಆನಂದ್ ದೇವಪ್ಪ,  ಸಮ್ಮೇಳನದ ಪ್ರಧಾನ ಭಾಷಣಕಾರರಾಗಿರುವ ಹಿರಿಯ ಸಂಪಾದಕರಾದ ವಿಶ್ವೇಶ್ವರ ಭಟ್, ಸಂಸದರಾದ ಸಾಗರ್ ಖಂಡ್ರೆ, ಮಾಜಿ ಸಚಿವರಾದ ರಾಜಶೇಖರ್ ಪಾಟೀಲ್, ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸೋಮಣ್ಣ ಬೇವಿನಮರದ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.‌

    ಹಾರಕುಡ ಹಿರೇಮಠ ಸಂಸ್ಥಾನದ ಡಾ.ಚನ್ನವೀರ ಶಿವಾಚಾರ್ಯರು, ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷ ಡಾ.ಬಸವಲಿಂಗ ಪಟ್ಟದೇವರು ಇವರ ದಿವ್ಯ ಸಾನ್ನಿದ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪತ್ರಕರ್ತರ ಸಂಘದ ರಾಜ್ಯ ಮತ್ತು‌ ಜಿಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.‌

    ಉಚಿತ ಬಸ್ ಪಾಸ್ : ನಿಯಮಗಳ ತೊಂದರೆ ನಿವಾರಣೆ ; ಸಿಎಂ

    ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡುವ ಸವಲತ್ತನ್ನು ಜಾರಿ ಮಾಡಿದ್ದೇ ನಾನು. ಇದರಲ್ಲಿನ ನಿಯಮಗಳಲ್ಲಿ ತೊಂದರೆ ಇದ್ದರೆ, ಆ ಬಗ್ಗೆ ಚರ್ಚಿಸಿ ನಿವಾರಣೆಗೊಳಿಸಲಾಗುವುದು ಎಂದರು.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ‘ಪ್ರೇಮದ ಊರಲಿ’ ಸಿನಿಮಾ ವೀಕ್ಷಣೆಗೆ ಹೋಗಿದ್ದ ಕುಟುಂಬಕ್ಕೆ ಶಾಕ್; ಮಂಚದ ಕೆಳಗೆ ಅವಿತಿದ್ದ ಕಳ್ಳ ರೆಡ್‌ ಹ್ಯಾಂಡ್‌ ಸಿಕ್ಕಿಬಿದ್ದ!

    October 12, 2026

    “30 ನಾಯಕರಿಗೆ ಕೋಟಿ ಕೋಟಿ ಕೊಟ್ಟಿದ್ದೇನೆ” ಎಂದ ಪ್ರದೀಪ್ ಈಶ್ವರ್! ಕಾಂಗ್ರೆಸ್‌ ನಲ್ಲಿ ಭಿನ್ನಮತ ಸ್ಫೋಟ

    October 11, 2026

    ಕಲ್ಪತರು ನಾಡಿನಲ್ಲಿ ನಾಡಹಬ್ಬದ ಕಳೆ: ತುಮಕೂರು ದಸರಾ–2026ಕ್ಕೆ ಸಕಲ ಸಜ್ಜು, ಮುಖ್ಯಮಂತ್ರಿಗೆ ಆಹ್ವಾನ

    October 10, 2026

    Leave A Reply Cancel Reply

    Our Picks

    ‘We’re Sorry’: ಸಿಜೆಪಿ ನಾಯಕ ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಸುದ್ದಿ ಮುಟ್ಟಿಸಿದ ಪೊಲೀಸ್; ವೈರಲ್ ವೀಡಿಯೊ

    October 12, 2026

    ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!

    October 11, 2026

     CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?

    October 11, 2026

    ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ

    October 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ದೇಶದಲ್ಲಿ ಪ್ರಜಾಪ್ರಭುತ್ವವೋ ಅಥವಾ ತುರ್ತು ಪರಿಸ್ಥಿತಿಯೋ? ಪ್ರಧಾನಿ ಮೋದಿ ಉತ್ತರಿಸಬೇಕು: ಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ

    October 12, 2026

    ಮೈಸೂರು: ದೇಶದಲ್ಲಿ ಪ್ರಜಾಪ್ರಭುತ್ವವಿದೆಯೇ ಅಥವಾ ತುರ್ತು ಪರಿಸ್ಥಿತಿಯೇ ಎಂಬುದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನರಿಗೆ ಉತ್ತರ ನೀಡಬೇಕು…

    ‘ಪ್ರೇಮದ ಊರಲಿ’ ಸಿನಿಮಾ ವೀಕ್ಷಣೆಗೆ ಹೋಗಿದ್ದ ಕುಟುಂಬಕ್ಕೆ ಶಾಕ್; ಮಂಚದ ಕೆಳಗೆ ಅವಿತಿದ್ದ ಕಳ್ಳ ರೆಡ್‌ ಹ್ಯಾಂಡ್‌ ಸಿಕ್ಕಿಬಿದ್ದ!

    October 12, 2026

    ಸಿಎಂ ಹುದ್ದೆ ಖಾಲಿ ಇಲ್ಲ, ಸದ್ಯಕ್ಕೆ ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಡಾ. ಜಿ. ಪರಮೇಶ್ವರ್ ಸ್ಪಷ್ಟನೆ

    October 12, 2026

    ‘We’re Sorry’: ಸಿಜೆಪಿ ನಾಯಕ ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಸುದ್ದಿ ಮುಟ್ಟಿಸಿದ ಪೊಲೀಸ್; ವೈರಲ್ ವೀಡಿಯೊ

    October 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.