ತುಮಕೂರು: ಶಿರಾ ಗೇಟ್–ಗುಬ್ಬಿ ಗೇಟ್‌ವರೆಗೂ ಸಂಪರ್ಕಿಸುವ ವರ್ತುಲ ರಸ್ತೆ ಕಾಮಗಾರಿಯ ಭೂಸ್ವಾಧೀನ ಪ್ರಕ್ರಿಯೆಗೆ ಸಂಬಂಧಿಸಿದಂತೆ ಸರ್ಕಾರದಿಂದ ಅಂತಿಮ ಅಧಿಸೂಚನೆ ಹೊರಡಿಸಲಾಗಿದ್ದು, ಶೀಘ್ರವಾಗಿ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ವರ್ತುಲ ರಸ್ತೆ ಕಾಮಗಾರಿ ಪರಿಶೀಲನೆಗಾಗಿ ಭೇಟಿ ನೀಡಿದ ಸಂದರ್ಭದಲ್ಲಿ ಮಾತನಾಡಿದ ಅವರು, ತಾಲ್ಲೂಕಿನ ಕಸಬಾ ಉತ್ತರ ಹೋಬಳಿ ವ್ಯಾಪ್ತಿ ಅಮಾನಿಕೆರೆ ಗ್ರಾಮದ ಸರ್ವೇ ನಂಬರ್ 37/1, 37/2, 37/3ರಲ್ಲಿ ಒಟ್ಟು 0.33 ಗುಂಟೆ ಜಮೀನನ್ನು ಈ ವರ್ತುಲ ರಸ್ತೆ ಅಭಿವೃದ್ಧಿಗಾಗಿ ಭೂಸ್ವಾಧೀನಪಡಿಸಿಕೊಳ್ಳಲು ಸರ್ಕಾರದಿಂದ ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ. ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಕಾಪಾಡಿಕೊಂಡು ಸ್ವಾಧೀನಪಡಿಸಿಕೊಂಡ ಭೂ ಮಾಲೀಕರಿಗೆ ನಿಗದಿತ ಅವಧಿಯೊಳಗೆ ಪರಿಹಾರ ನೀಡಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಉಪ ವಿಭಾಗಾಧಿಕಾರಿ ಗೌರವ ಕುಮಾರ್ ಶೆಟ್ಟಿ, ತಹಶೀಲ್ದಾರ್ ರಾಜೇಶ್ವರಿ, ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಸೇರಿದಂತೆ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q