ಮಂಗಳೂರು ಕುಕ್ಕರ್ ಬ್ಲಾಸ್ಟ್ ಗೆ ಮೊದಲು ಅಂದರೆ ನವೆಂಬರ್ 18ರಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ದಟ್ಟಾರಣ್ಯ ಪ್ರದೇಶದಲ್ಲಿ ಸ್ಯಾಟಲೈಟ್ ಫೋನ್ ರಿಂಗ್ ಆಗಿದ್ದು, ನಿಷೇಧಿತ ತುರಾಯ ಸ್ಯಾಟಲೈಟ್ ಫೋನ್ ಬಳಸಲಾಗಿರುವ ಮಾಹಿತಿ ಲಭ್ಯವಾಗಿದೆ.
ನ. 19 ರ ಸಂಜೆ ಮಂಗಳೂರಿನಲ್ಲಿ ಬ್ಲಾಸ್ಟ್ ಆಗಿತ್ತು. 18ರಂದು ಬಂಟ್ವಾಳದ ಕಕ್ಕಿಂಜೆಯಲ್ಲಿ ಸ್ಯಾಟಲೈಟ್ ಫೋನ್ ರಿಂಗ್ ಆಗಿದೆ. ದಕ್ಷಿಣ ಕನ್ನಡ ಜಿಲ್ಲೆಯ 2, ಉಡುಪಿಯ ಒಂದು, ಉತ್ತರ ಕನ್ನಡ ಜಿಲ್ಲೆಯ ಅರಣ್ಯ ಪ್ರದೇಶದಿಂದ ಸ್ಯಾಟಲೈಟ್ ಫೋನ್ ಮೂಲಕ ಸಂಪರ್ಕ ಮಾಡಿರುವ ಲೊಕೇಷನ್ ಅನ್ನು ಬೇಹುಗಾರಿಕಾ ಏಜೆನ್ಸಿಗಳು ಪತ್ತೆ ಮಾಡಿವೆ.
ಶಂಕಿತ ಉಗ್ರ ಶಾರೀಕ್ ಕರಾವಳಿಯ ದೇವಾಲಯಗಳನ್ನು ಟಾರ್ಗೆಟ್ ಮಾಡಿದ್ದ ಎಂಬ ಮಾಹಿತಿ ಬಹಿರಂಗವಾಗಿದೆ. ಕದ್ರಿ ಮಂಜುನಾಥ, ಮಂಗಳಾದೇವಿ, ಕುದ್ರೋಳಿ ದೇವಸ್ಥಾನವನ್ನು ಟಾರ್ಗೆಟ್ ಮಾಡಿದ್ದ ಎಂಬ ಮಾಹಿತಿ ಲಭ್ಯವಾಗಿದೆ. ಹಿಂದೂ ಸಂಘಟನೆಗಳು ದೇವಾಲಯದ ಮುಂಭಾಗ ಮುಸ್ಲಿಮರ ವ್ಯಾಪಾರದ ವಿರುದ್ದ ಸಿಡಿದೆದ್ದಿದ್ದರು. ಇದೇ ಕಾರಣಕ್ಕೆ ದೇವಸ್ಥಾನಗಳನ್ನೇ ಉಗ್ರ ಟಾರ್ಗೆಟ್ ಮಾಡಿದನಾ ಎಂಬ ಪ್ರಶ್ನೆ ಹುಟ್ಟಿಕೊಂಡಿದೆ.
ಕುಕ್ಕರ್ ಬಾಂಬ್ ಸ್ಫೋಟಿಸಿದ ಉಗ್ರ ಶಾರೀಕ್ ಶ್ವಾಸಕೋಶದೊಳಗೆ ಹೊಗೆ ತುಂಬಿಕೊಂಡಿದ್ದು, ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾನೆ ಎನ್ನಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


