ಪಾವಗಡ: ಪಟ್ಟಣದ ಶ್ರೀನಿವಾಸ ನಗರದ ಜ್ಞಾನ ಬೋಧಿನಿ ಶಾಲೆಯಲ್ಲಿ 2026–27ನೇ ಶೈಕ್ಷಣಿಕ ಸಾಲಿನ ಸ್ಕೂಲ್ ಪ್ಯುಪಿಲ್ ಲೀಡರ್ SPL ಚುನಾವಣೆಯು ಜೂ.19, ಶುಕ್ರವಾರ ನಡೆಯಲಿದೆ.
ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ, ಜವಾಬ್ದಾರಿ ಮತ್ತು ಸೇವಾ ಮನೋಭಾವವನ್ನು ಬೆಳೆಸುವ ಉದ್ದೇಶದಿಂದ ಈ ಚುನಾವಣೆಯನ್ನು ಆಯೋಜಿಸಲಾಗಿದೆ. “ಪ್ರತಿಯೊಂದು ಮೂಲೆಯಿಂದ ಉದಾತ್ತ ಆಲೋಚನೆಗಳು ನಮ್ಮ ಬಳಿಗೆ ಬರಲಿ” ಎಂಬ ಶಾಲೆಯ ಧ್ಯೇಯವಾಕ್ಯದಂತೆ, ವಿದ್ಯಾರ್ಥಿಗಳೇ ತಮ್ಮ ಪ್ರತಿನಿಧಿಯನ್ನು ಆಯ್ಕೆ ಮಾಡುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಪ್ರಾಯೋಗಿಕವಾಗಿ ಕಲಿಯಲಿದ್ದಾರೆ.
ಮಧ್ಯಾಹ್ನ 2:00 ರಿಂದ 4:00 ಗಂಟೆಯವರೆಗೆ ಶಾಲಾ ಆವರಣದಲ್ಲಿ ನಡೆಯುವ ಈ ಚುನಾವಣೆಗೆ ವೈ.ಎನ್. ಹೋಸಕೋಟೆಯ ವಸವಿ ವಿದ್ಯಾನಿಕೇತನದ ಎನ್.ಜಿ.ಶ್ರೀನಿವಾಸ್, JBE & CT ಅಧ್ಯಕ್ಷ ಜಿ.ಅನಿಲ್ ಕುಮಾರ್ ಹಾಗೂ ಕಾರ್ಯದರ್ಶಿ ಡಾ.ಕೆ.ಎಸ್. ಅನಿಲ್ ಕುಮಾರ್ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.
ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸಿ ಜವಾಬ್ದಾರಿಯುತ ನಾಯಕರನ್ನು ಆಯ್ಕೆ ಮಾಡುವಂತೆ ಶಾಲಾ ಆಡಳಿತ ಮಂಡಳಿ ಎಲ್ಲಾ ವಿದ್ಯಾರ್ಥಿಗಳಿಗೆ ಮನವಿ ಮಾಡಿದೆ. ನಿಮ್ಮ ಒಂದು ಮತ ಶಾಲೆಯ ಭವಿಷ್ಯ ನಿರ್ಧರಿಸುತ್ತದೆ. ಬುದ್ಧಿವಂತಿಕೆಯಿಂದ ಆಯ್ಕೆ ಮಾಡಿ ಎಂದು ಪ್ರಾಂಶುಪಾಲರು ತಿಳಿಸಿದರು.
ವರದಿ: ನಂದೀಶ್ ನಾಯ್ಕ ಪಿ., ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


