ರಾಯಚೂರು: ಸಾರ್ವಜನಿಕ ಸೇವೆಯಲ್ಲಿ ತೊಡಗಿರುವ ಸರ್ಕಾರಿ ನೌಕರರು ಕೆಲಸ ಮಧ್ಯೆಯೇ ಕ್ರೀಡಾಚಟುಟಿಕೆಗಳಲ್ಲಿ ಭಾಗವಹಿಸಿ, ಮಾನಸಿಕ ಮತ್ತು ದೈಹಿಕ ಸದೃಢತೆ ಸಾಧಿಸಬೇಕೆಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಈಶ್ವರ ಕುಮಾರ್ ಕಾಂದೂ ಅವರು ಸಲಹೆ ನೀಡಿದರು.
ಫೆ.24ರ ಮಂಗಳವಾರ ದಂದು ನಗರದ ಕೃಷಿ ವಿಶ್ವವಿದ್ಯಾಲಯ ಕ್ರೀಡಾಂಗಣದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಮತ್ತು ಯುವಜನಸೇವಾ ಮತ್ತು ಕ್ರೀಡಾ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗಳ ಕ್ರೀಡಾ ಮತ್ತು ಸಾಂಸ್ಕೃತಿಕ ಉತ್ಸವಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಕ್ರೀಡೆಯಲ್ಲಿ ಸೋಲು-ಗೆಲುವು ಸಹಜ. ಪ್ರತಿಯೊಬ್ಬರು ಕ್ರೀಡಾ ಮನೋಭಾವನೆಯೊಂದಿಗೆ ಸ್ಪರ್ಧೆಗಳಲ್ಲಿ ಭಾಗವಹಿಸಬೇಕು. ಬದಲಾದ ಜೀವನ ಶೈಲಿ ಮತ್ತು ಆಹಾರ ಕ್ರಮಗಳಿಂದ ಒತ್ತಡ ಉಂಟಾಗುವುದು ಸಾಮಾನ್ಯವಾಗಿದೆ. ಹೀಗಾಗಿ ಪ್ರತಿ ನಿತ್ಯ ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿ ಆರೋಗ್ಯ ಕಾಪಾಡಿಕೊಳ್ಳಬೇಕು. ಹೀಗಾಗಿ ಎರಡು ದಿನಗಳ ಕಾಲ ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲಾಗಿದೆ. ಅವಕಾಶ ಸಿಕ್ಕಾಗ ಇದೆ ರೀತಿಯಲ್ಲಿ ಕ್ರೀಡೆಗಳನ್ನು ಏರ್ಪಡಿಸಿ, ನೌಕರರು ಮತ್ತು ಸಿಬ್ಬಂದಿಗಳನ್ನು ಪ್ರೋತ್ಸಾಹಿಸಲಾಗುವುದು ಎಂದರು.
ಸರ್ಕಾರಿ ನೌಕರರು ಮುಖ್ಯವಾಗಿ ಜನಸಾಮಾನ್ಯರ ನಿರೀಕ್ಷೆಯಂತೆ ಕೆಲಸ ನಿರ್ವಹಿಸಬೇಕು. ಕುಟುಂಬ ನಿರ್ವಹಣೆ ಜೊತೆಗೆ ಸಾರ್ವಜನಿಕ ಸಮಸ್ಯೆಗಳಿಗೆ ಸ್ಪಂದಿಸಬೇಕು. ಪ್ರತಿಯೊಬ್ಬರು ವಾಟ್ಸಪ್, ಪೇಸಬುಕ್ ಮತ್ತು ಇನ್ನೀತರ ಸಾಮಾಜಿಕ ಜಾಲತಾಣಗಳನ್ನು ಬಳಸುತ್ತಿದ್ದು, ಅಧಿಕಾರಿಗಳು ಮತ್ತು ಸಿಬ್ಬಂದಿ ವಾಟ್ಸಪ್ ಮತ್ತು ಇನ್ನಿತರ ಸಾಮಾಜಿಕ ಜಾಲತಾಣಗಳನ್ನು ಬಳಸಬೇಕು. ವಾಟ್ಸಾಪ್ ಮತ್ತು ಇನ್ನೀತರೆ ಸಾಮಾಜಿಕ ಜಾಲತಾಣ ಬಳಸುವಾಗ ಎಚ್ಚರಿಕೆ ವಹಿಸಬೇಕು. ಸರ್ಕಾರಿ ಅಧಿಕಾರಿಗಳು, ನೌಕರರು ಕಾಲಕ್ಕೆ ತಕ್ಕಂತೆ ಕಾರ್ಯ ಶೈಲಿಯನ್ನು ಮಾರ್ಪಾಡು ಮಾಡಿಕೊಳ್ಳಬೇಕು ಎಂದು ಸಿಇಓ ಅವರು ಮಹತ್ವ ಸಲಹೆ ನೀಡಿದರು.
ಈ ವೇಳೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಕಲಬುರಗಿ ವಿಭಾಗೀಯ ಉಪಾಧ್ಯಕ್ಷರು ಮತ್ತು ರಾಯಚೂರು ಜಿಲ್ಲಾ ಘಟಕದ ಅಧ್ಯಕ್ಷರಾದ ಕೃಷ್ಣ ಶಾವಂತಗೇರಿ ಅವರು ಮಾತನಾಡಿ, ಸರ್ಕಾರಿ ನೌಕರರು ಒಂದು ಕುಟುಂಬದಂತೆ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಬೇಕು. ರಾಜ್ಯಾದ್ಯಂತ ನೌಕರರಿಗಾಗಿಯೇ ಕ್ರೀಡಾಕೂಟಗಳನ್ನು ಏರ್ಪಡಿಸಿ ನೌಕರರು ಪ್ರತಿ ನಿತ್ಯದ ಜಂಜಾಟಗಳಿಂದ ಹೊರಬರುವಂತೆ ಮಾಡಲಾಗುತ್ತಿದೆ. ಸದಾ ಒತ್ತಡದಲ್ಲಿ ಕಾರ್ಯ ನಿರ್ವಹಿಸುವ ನೌಕರರು ಇಂಥ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಉತ್ಸವಗಳಲ್ಲಿ ಭಾಗವಹಿಸಿದಾಗ ಹೊಸ ಉಲ್ಲಾಸ ಮೂಡುತ್ತದೆ ಎಂದರು.
ಇದಕ್ಕೂ ಮುಂಚೆ ಕ್ರೀಡಾಕೂಟಕ್ಕೆ ಧ್ವಜಾರೋಹಣ, ಕ್ರೀಡಾ ಜ್ಯೋತಿ ಸ್ವೀಕರಿಸುವುದರ ಮೂಲಕ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಕ್ರೀಡಾಕೂಟಕ್ಕೆ ಚಾಲನೆ ನೀಡಿದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿಗಳಾದ ಹಾಲಸಿದ್ದಪ್ಪ ಪೂಜೇರಿ, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕರಾದ ಶರಣಬಸವರಾಜ ಕೆ., ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿಗಳಾದ ಡಾ.ಟಿ.ರೋಣಿ, ಜಿಲ್ಲಾ ಪಂಚಾಯತ್ ಮುಖ್ಯ ಲೆಕ್ಕಾಧಿಕಾರಿಗಳಾದ ವಿಜಯಶಂಕರ, ರಾಯಚೂರು ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ ಪವಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳಾದ ಡಾ.ಸುರೇಂದ್ರ ಬಾಬು, ಆಯುಷ್ ಇಲಾಖೆಯ ಡಾ.ಶಂಕರಗೌಡ, ಯುವಜನಸೇವಾ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಈರೇಶ ನಾಯಕ ಸೇರಿದಂತೆ ವಿವಿಧ ತಾಲೂಕು ಪಂಚಾಯತಿಗಳ ಕಾರ್ಯನಿರ್ವಾಹಕ ಅಧಿಕಾರಿಗಳು, ಸಹಾಯಕ ನಿರ್ದೇಶಕರು, ವಿವಿಧ ಇಲಾಖೆಗಳ ಅಧಿಕಾಗಳು ಉಪಸ್ಥಿತರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


