ತುಮಕೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ನಡೆಸುತ್ತಿರುವ ಕ್ರೀಡಾ ಶಾಲೆ/ಕ್ರೀಡಾ ನಿಲಯಗಳಿಗೆ ಪ್ರತಿಭಾವಂತ ಕ್ರೀಡಾಪಟುಗಳನ್ನು ಆಯ್ಕೆ ಮಾಡಲು ಜನವರಿ 13 ರಿಂದ ಆಯ್ಕೆ ಪ್ರಕ್ರಿಯೆ ನಡೆಯಲಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರೋಹಿತ್ ಗಂಗಾಧರ್ ತಿಳಿಸಿದ್ದಾರೆ.
ಆಯ್ಕೆ ಪ್ರಕ್ರಿಯೆಯು ಜಿಲ್ಲೆಯ ಆಯಾ ತಾಲ್ಲೂಕು ಕೇಂದ್ರಗಳಲ್ಲಿ ನಿಗದಿತ ದಿನಾಂಕದಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ನಡೆಯಲಿದ್ದು, ಜನವರಿ 13ರಂದು ಕುಣಿಗಲ್ ತಾಲ್ಲೂಕು ಕ್ರೀಡಾಂಗಣ, ಜ.15ರಂದು ಮಧುಗಿರಿ ರಾಜೀವ್ ಗಾಂಧಿ ಕ್ರೀಡಾಂಗಣ, ಜ.16ರಂದು ಪಾವಗಡ ತಾಲ್ಲೂಕು ಕ್ರೀಡಾಂಗಣ, ಜ.17ರಂದು ಶಿರಾ ತಾಲ್ಲೂಕು ವಿವೇಕಾನಂದ ಕ್ರೀಡಾಂಗಣ, ಜ.18ರಂದು ಕೊರಟಗೆರೆ ತಾಲ್ಲೂಕು ಕ್ರೀಡಾಂಗಣ, ಜ.20ರಂದು ಚಿಕ್ಕನಾಯನಹಳ್ಳಿ ತಾಲ್ಲೂಕು ಕ್ರೀಡಾಂಗಣ, ಜ.21ರಂದು ತಿಪಟೂರು ತಾಲ್ಲೂಕು ಕಲ್ಪತರು ಕ್ರೀಡಾಂಗಣ, ಜ.27ರಂದು ಗುಬ್ಬಿ ಸರ್ಕಾರಿ ಪ್ರೌಢಶಾಲೆ ಮೈದಾನ, ಜ.28ರಂದು ತುರುವೇಕೆರೆ ತಾಲ್ಲೂಕು ಕ್ರೀಡಾಂಗಣ, ಜ.29ರಂದು ತುಮಕೂರು ನಗರದ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ತಾಲ್ಲೂಕು ಮಟ್ಟದ ಆಯ್ಕೆ ಪ್ರಕ್ರಿಯೆ ನಡೆಯಲಿದೆ.
ತಾಲ್ಲೂಕು ಮಟ್ಟದಲ್ಲಿ ಆಯ್ಕೆಯಾದ 7 ಮತ್ತು 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಬಾಲಕ/ಬಾಲಕಿಯರು ಜನವರಿ 29ರಂದು ಹಾಗೂ 4ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಬಾಲಕ/ಬಾಲಕಿಯರು ಫೆಬ್ರವರಿ 22ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ತುಮಕೂರು ನಗರದ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ಆಯ್ಕೆ ಪ್ರಕ್ರಿಯೆ ನಡೆಯಲಿದೆ.
ಆಯ್ಕೆಯಾದ ಕ್ರೀಡಾಪಟುಗಳನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ನಡೆಸುತ್ತಿರುವ ಕ್ರೀಡಾಶಾಲೆ/ಕ್ರೀಡಾ ವಸತಿ ನಿಲಯಗಳಿಗೆ ಪ್ರವೇಶ ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx