ತುಮಕೂರು: ನಮ್ಮ ದೇಶದಲ್ಲಿ ಕ್ರೀಡೆಯನ್ನು ಕೇವಲ ಮನೋರಂಜನೆಯ ದೃಷ್ಟಿಯಲ್ಲಿ ಮಾತ್ರ ನೋಡುತ್ತಿದ್ದಾರೆ. ಅದು ಸಾಧನೆಯ ಮೆಟ್ಟಿಲಾಗಬೇಕು ಎಂದು ವಿಶ್ವವಿದ್ಯಾನಿಲಯ ಕಲಾ ಕಾಲೇಜಿನ ಇಂಗ್ಲಿಷ್ ಸಹಪ್ರಾಧ್ಯಾಪಕರಾದ ಡಾ.ರವಿ ಸಿ.ಎಂ. ಹೇಳಿದರು.
ತುಮಕೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ಮತ್ತು ಕ್ರೀಡಾ ವಿಭಾಗವು ಮಹಾತ್ಮ ಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಅಂತರ ಕಾಲೇಜು ಪುರುಷ ಮತ್ತು ಮಹಿಳೆಯರ ಟೇಕ್ವಾಂಡೋ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದರು.
ನಮ್ಮ ದೇಶದಲ್ಲಿ ಆಟ ಆಡುವವರಿಗಿಂತಲೂ ನೋಡುವವರ ಸಂಖ್ಯೆ ಹೆಚ್ಚಾಗಿದೆ. ಕಾರಣ ಕ್ರೀಡೆಯನ್ನು ಕೇವಲ ಮನೋರಂಜನೆಯ ದೃಷ್ಟಿಯಿಂದ ಮಾತ್ರ ನೋಡಲಾಗುತ್ತಿದೆ. ಈ ದೃಷ್ಟಿಕೋನವನ್ನು ನಾವು ಬದಲಾಯಿಸಿಕೊಳ್ಳಬೇಕು, ಹೆಚ್ಚು ಜನರು ಕ್ರೀಡೆಯಲ್ಲಿ ಭಾಗವಹಿಸಬೇಕು. ಕ್ರೀಡಾ ಜಗತ್ತು ಬದಲಾಗಿದೆ ಆ ಬದಲಾವಣೆಗೆ ನಾವು ಹೊಂದಿಕೊಂಡು ಹೋಗಬೇಕು ಎಂದರು.
ದೈಹಿಕ ಶಿಕ್ಷಣ ಹಾಗೂ ಕ್ರೀಡಾ ವಿಭಾಗದ ನಿರ್ದೇಶಕರಾದ ಡಾ. ಸುದೀಪ್ ಕುಮಾರ್ ಆರ್. ಅವರು ಯುವಕರು ಕ್ರೀಡೆಯಲ್ಲಿ ಹೆಚ್ಚಿನ ಆಸಕ್ತಿ ತೋರಬೇಕು. ಕಲಿತ ಕ್ರೀಡೆ ಎಂದಿಗೂ ವ್ಯರ್ಥವಾಗುವುದಿಲ್ಲ. ಅದು ದೈಹಿಕವಾಗಿ ಮನುಷ್ಯನನ್ನು ಸದೃಢನನ್ನಾಗಿ ಮಾಡುತ್ತದೆ ಎಂದರು.
ಕಾರ್ಯಕ್ರಮದಲ್ಲಿ ತುಮಕೂರು ವಿಶ್ವವಿದ್ಯಾನಿಲಯದ ಉಪ ಗ್ರಂಥಪಾಲಕ ಹಾಗೂ ವಿದ್ಯಾರ್ಥಿ ನಿಲಯ ಪಾಲಕ ಡಾ. ಕುಮಾರ ಬಿ., ಮನೋಹರ್ ಎ.ಪಿ, ಶ್ರೀನಿವಾಸ ಬಿ., ರಾಧಾ ಪಿ., ಜಗದೀಶ್ ಉಪಸ್ಥಿತರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW