ಮಂಗಳೂರಿನಲ್ಲಿ ಇತ್ತೀಚೆಗೆ ಸಂಭವಿಸಿದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಶಾರೀಕ್ ಗೆ ಸ್ಫೋಟದಿಂದ ಶ್ವಾಸಕೋಶಕ್ಕೆ ಹಾನಿಯಾಗಿದ್ದು, 8 ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದೆ.
ಪಂಪ್ ವೆಲ್ ಬಳಿ ಚಲಿಸುತ್ತಿದ್ದ ಆಟೋದಲ್ಲೇ ಕುಕ್ಕರ್ ಬಾಂಬ್ ಬ್ಲಾಸ್ಟ್ ಆಗಿದ್ದರಿಂದ ಪ್ರಮುಖ ಆರೋಪಿ ಶಾರೀಕ್ ಶೇ.45ರಷ್ಟು ಸುಟ್ಟ ಗಾಯಗಳಿಂದ ಬಳಲುತ್ತಿದ್ದು, ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಆಟೋದಲ್ಲಿ ಕುಕ್ಕರ್ ಬಾಂಬ್ ಬ್ಲಾಸ್ಟ್ ಆದ ಪರಿಣಾಮ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ತೀವ್ರ ಪ್ರಮಾಣದ ಹೊಗೆ ಆವರಿಸಿತ್ತು, ಅಪಾರ ಪ್ರಮಾಣದ ವಿಷಾನಿಲದ ಸೇವನೆಯಿಂದ ಶಾರೀಕ್ ಲಂಗ್ಸ್‌ಗೆ ಡ್ಯಾಮೇಜ್ ಆಗಿದ್ದು, 8 ವೈದ್ಯರಿಂದ ಉಗ್ರ ಶಾರೀಕ್‌ಗೆ ಐಸಿಯುನಲ್ಲಿ ಚಿಕಿತ್ಸೆ ಮುಂದುವರೆದಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


