ಸುಪ್ರೀಂ ಕೋರ್ಟ್ ಬಗ್ಗೆ ಯಾವುದೇ ಭರವಸೆ ಉಳಿದಿಲ್ಲ, ಸೂಕ್ಷ್ಮ ಪ್ರಕರಣಗಳನ್ನು ಕೆಲವು ನ್ಯಾಯಾಧೀಶರಿಗೆ ಮಾತ್ರ ನಿಯೋಜಿಸಲಾಗಿದೆ ಎಂದು ಹಿರಿಯ ನ್ಯಾಯವಾದಿ ಹಾಗು ರಾಜ್ಯಸಭಾ ಸದಸ್ಯ ಕಪಿಲ್ ಸಿಬಲ್ ತೀವ್ರ ಅಸಮಾಧಾನ ಹೊರ ಹಾಕಿದ್ದಾರೆ.
ದೆಹಲಿಯಲ್ಲಿ ಆಯೋಜಿಸಿದ್ದ ಪೀಪಲ್ಸ್ ಟ್ರಿಬ್ಯೂನಲ್‌ನಲ್ಲಿ “ನ್ಯಾಯಾಂಗ ದ ರೋಲ್ ಕುರಿತು ಮಾತನಾಡಿದ ಅವರು ಸುಪ್ರೀಂ ಕೋರ್ಟ್ ಇತ್ತೀಚೆಗೆ ನೀಡಿದ ಕೆಲವು ತೀರ್ಪುಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
“ಸುಪ್ರೀಂ ಕೋರ್ಟ್‌ನಿಂದ ನಿಮಗೆ ಪರಿಹಾರ ಸಿಗುತ್ತದೆ ಎಂದು ನೀವು ಭಾವಿಸಿದರೆ, ನೀವು ತುಂಬಾ ತಪ್ಪಾಗಿ ಭಾವಿಸುತ್ತೀರಿ. ಮತ್ತು ಸುಪ್ರೀಂ ಕೋರ್ಟ್‌ನಲ್ಲಿ ೫೦ ವರ್ಷಗಳ ಅಭ್ಯಾಸ ಮಾಡಿದ ನಂತರ ಇದನ್ನು ಹೇಳುತ್ತಿದ್ದೇನೆ” ಎಂದು ತಿಳಿಸಿದ್ದಾರೆ.
ಸುಪ್ರೀಂ ಕೋರ್ಟ್‌ನಿಂದ ಮಹತ್ವದ ತೀರ್ಪು ಬಂದರೂ ಅದು ನೆಲದ ವಾಸ್ತವತೆ ಬದಲಾಯಿಸುವುದಿಲ್ಲ ಎಂದು ಅವರು ಹೇಳಿದ್ದಾರೆ. ಸುಪ್ರೀಂ ಕೋರ್ಟ್ ನೀಡಿದ ಪ್ರಗತಿಪರ ತೀರ್ಪುಗಳ ಬಗ್ಗೆ ಮಾತನಾಡುತ್ತೀರಿ ಆದರೆ ವಾಸ್ತವಕ್ಕೆ ಭಾರಿ ವ್ಯತ್ಯಾಸವಿದೆ. . ಸುಪ್ರೀಂ ಕೋರ್ಟ್ ಗೌಪ್ಯತೆಯ ತೀರ್ಪು ನೀಡಿದರೆ ಇಡಿ ಅಧಿಕಾರಿಗಳು ನಿಮ್ಮ ಮನೆಗೆ ಬರುತ್ತಾರೆ… ನಿಮ್ಮ ಗೌಪ್ಯತೆ ಎಲ್ಲಿದೆ?” ಸಿಬಲ್ ಹೇಳಿದ್ದಾರೆ.
ಗೋದ್ರಾ ಹತ್ಯಾಕಾಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಲೀನ್ ಚಿಟ್ ನೀಡಿರುವುದನ್ನು ಪ್ರಶ್ನಿಸಿ ಮಾಜಿ ಕಾಂಗ್ರೆಸ್ ಸಂಸದ ಎಹ್ಸಾನ್ ಜಾಫ್ರಿ ಅವರ ವಿಧವೆ ಜಾಕಿಯಾ ಜಾಫ್ರಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ನ್ಯಾಯಾಲಯದ ಕ್ರಮ ಟೀಕಿಸಿದ್ದಾರೆ.
2002 ರ ಗುಜರಾತ್ ಗಲಭೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಇತರ ಹಲವರಿಗೆ ತನಿಖಾ ತಂಡ ಕ್ಲೀನ್ ಚಿಟ್ ನೀಡಿರುವುದನ್ನು; ಎತ್ತಿಹಿಡಿದಿತ್ತು.
ವರದಿ: ಆಂಟೋನಿ ಬೇಗೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz