ಹೊಳೆನರಸೀಪುರ: ತಾಲ್ಲೂಕಿನ ಶ್ರವಣೂರು ಗ್ರಾಮದಲ್ಲಿ ವಾಸವಾಗಿದ್ದ ಮಂದಗೆರೆ ಬೈರನಾಯಕ (ಅಂದಾಜು 50 ವರ್ಷ) ಅವರು ರೈಲಿಗೆ ಸಿಲುಕಿ ದುರ್ಮರಣ ಹೊಂದಿದ್ದಾರೆ.
ಸೆಪ್ಟೆಂಬರ್ 02ರ ಮಧ್ಯರಾತ್ರಿ ಹಾಸನದಿಂದ ಅರಸೀಕೆರೆ ಮಾರ್ಗವಾಗಿ ಸಂಚರಿಸುತ್ತಿದ್ದ ರೈಲಿಗೆ ಸಿಲುಕಿ ಬೈರನಾಯಕ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೃತರು ಪತ್ನಿ, ಇಬ್ಬರು ಮಕ್ಕಳು ಹಾಗೂ ಬಂಧು–ಬಳಗವನ್ನು ಅಗಲಿದ್ದಾರೆ. ಕುಟುಂಬದ ಯಜಮಾನನ ಹಠಾತ್ ಅಗಲಿಕೆಯಿಂದ ಅವರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ವರದಿ: ಮಂಜು ಶ್ರವಣೂರು, ಹೊಳೆನರಸೀಪುರ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
