ನಿರ್ಮಲಾನಂದನಾಥ ಶ್ರೀಗಳ ಬಗ್ಗೆ ತಾವು ನೀಡಿದ್ಧ ಹೇಳಿಕೆ ಬಗ್ಗೆ ಕ್ಷಮೆಯಾಚಿಸಿದ ಅಡ್ಡಂಡ ಕಾರ್ಯಪ್ಪ, ನಿರ್ಮಲಾನಂದ ಶ್ರಿಗಳು ಈ ನಾಡಿನ ಸಂತ ಅವರ ಬಗ್ಗೆ ನನಗೆ ಬಹಳ ಗೌರವವಿದೆ ಎಂದರು.
ನಾನು ಹೇಳಿರುವ ಹೇಳಿಕೆಯನ್ನ ಮಾಧ್ಯಮಗಳು ಅವರಿಗೆ ಬೇಕಾದ ರೀತಿಯಲ್ಲಿ ತಿರುಚಿದ್ದಾರೆ. ನಾನು ನಿರ್ಮಲಾನಂದ ಶ್ರೀಗಳ ಕ್ಷಮೆಯಾಚಿಸುತ್ತೇನೆ. ನಿರ್ಮಲಾನಂದ ಶ್ರೀಗಳು ನಮ್ಮ ಸಂತರು. ನಾನು ಅವರ ವಿರುದ್ಧ ಯಾವುದೇ ಹೇಳಿಕೆ ನೀಡಿಲ್ಲ. ಅವರಿಗೆ ಅಪಮಾನ ಮಾಡುವಂತಹ ಕೆಲಸ ಮಾಡಿಲ್ಲ. ಆ ಹೇಳಿಕೆಯನ್ನ ರಾಜಕೀಯವಾಗಿ ಬಳಸಿಕೊಂಡಿದ್ದಾರೆ. ನಾನು ಅವರ ಭಕ್ತ ಕೋಟಿಗಳಿಗೆ ಕ್ಷಮೆ ಕೇಳಲ್ಲ. ನಾನು ನಿರ್ಮಲಾನಂದ ಶ್ರೀಗಳಿಗೆ ಮಾತ್ರ ಕ್ಷಮೆಯಾಚಿಸುವೆ ಎಂದರು.
ನನಗೆ ಒಕ್ಕಲಿಗರ ಮೇಲೆ ಅಪಾರ ಪ್ರೀತಿ ಇದೆ. ನಾನು ಎಂದೂ ಒಕ್ಕಲಿಗರ ವಿರೋಧಿಯಲ್ಲ. ನಾನು ನಿರ್ಮಲಾನಂದ ಶ್ರೀಗಳ ಪರಮ ಭಕ್ತ. ರಾಜಕೀಯವಾಗಿ ಈ ವಿಚಾರ ಎಳೆದಿರುವುದು ಸರಿಯಲ್ಲ. ಇಲ್ಲಿ ಬಂದು ಪ್ರತಿಭಟನೆ ಮಾಡುವವರಿಗೆ ಕ್ಷಮೆ ಕೇಳುವುದಿಲ್ಲ. ಶ್ರೀಗಳಿಗೆ ನನ್ನ ಹೇಳಿಕೆಯಿಂದ ಬೇಸರವಾಗಿದ್ದರೆ ನಾನು ಅವರಿಗೆ ಕ್ಷಮೆಕೇಳುತ್ತೇನೆ ಎಂದು ಅಡ್ಡಂಡ ಕಾರ್ಯಪ್ಪ ಹೇಳಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


