ತಿಪಟೂರು: ನಗರದ ಶ್ರೀ ಬಸವೇಶ್ವರ ಕಾಲೇಜ್ ಆಫ್ ಫಾರ್ಮಸಿಯಲ್ಲಿ ‘ವಿಶ್ವ ಫಾರ್ಮಸಿಸ್ಟ್ ದಿನಾಚರಣೆ — 2026’ ಅನ್ನು ಅತ್ಯಂತ ಸಂಭ್ರಮ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು. ಸಮಾರಂಭವನ್ನು ಅತಿಥಿಗಳು ದೀಪ ಬೆಳಗುವುದರ ಮೂಲಕ ಅಧಿಕೃತವಾಗಿ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ತುಮಕೂರಿನ ಶ್ರೀದೇವಿ ಇನ್ಸ್ಟಿಟ್ಯೂಟ್ ಆಫ್ ಫಾರ್ಮಾಸ್ಯುಟಿಕಲ್ ಸೈನ್ಸಸ್ನ ಫಾರ್ಮಸಿ ಪ್ರಾಕ್ಟೀಸ್ ವಿಭಾಗದ ಪ್ರೊಫೆಸರ್ ಮತ್ತು ಮುಖ್ಯಸ್ಥರಾದ ಡಾ. ರವಿನಂದನ್ ಎ.ಪಿ. ಅವರು, “ಆರೋಗ್ಯಕರ ಭವಿಷ್ಯಕ್ಕಾಗಿ ಫಾರ್ಮಸಿಸ್ಟ್ಗಳ ಸಬಲೀಕರಣ” ಎಂಬ ಈ ಬಷದ ಥೀಮ್ ಕುರಿತು ವಿಶೇಷ ಉಪನ್ಯಾಸ ನೀಡಿದರು. ಫಾರ್ಮಸಿಸ್ಟ್ಗಳು ಎಂದರೆ ಕೇವಲ ಔಷಧಗಳನ್ನು ನೀಡುವವರಷ್ಟೇ ಅಲ್ಲ, ಬದಲಾಗಿ ಔಷಧಕ್ಕೆ ಜೀವ ತುಂಬುವ ಆರೋಗ್ಯ ಸೇತುವೆಗಳು ಎಂದು ಅವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಬಿ.ಜಿ.ಐ ಅಧ್ಯಕ್ಷರಾದ ಎಚ್.ಎನ್. ಹಾಲಪ್ಪ ವಹಿಸಿ, ಆರೋಗ್ಯ ವಲಯದಲ್ಲಿ ಫಾರ್ಮಸಿಸ್ಟ್ಗಳ ಪಾತ್ರದ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು. ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಶ್ವೇತಾ, ನಿಶ್ಚಿತಾ ನಟರಾಜ್, ಮಣಿಕಾಂತ, ಬಸವರಾಜು ಎಸ್, ಚಂದನ ಮತ್ತು ಮೇಘನಾ ಎಂ.ಆರ್. ಅವರು ಕಾರ್ಯಕ್ರಮವನ್ನು ಅತ್ಯುತ್ತಮವಾಗಿ ಸಂಯೋಜಿಸಿದರು. ಈ ಸಮಾರಂಭದಲ್ಲಿ ಕಾಲೇಜಿನ ಎಲ್ಲಾ ಬೋಧಕ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ದೊಡ್ಡ ಸಂಖ್ಯೆಯಲ್ಲಿ ಉಪಸ್ಥಿತರಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
