ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಗ್ರಾಮೀಣಾಭಿವೃದ್ಧಿ ಸಂಸ್ಥೆ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವಂತಹ ಜವಾಬ್ದಾರಿಯುತ ಕಾರ್ಯ ಮಾಡುತ್ತಿದ್ದು, ಈ ಗ್ರಾಮ ಅಭಿವೃದ್ಧಿ ಕಾರ್ಯಗಳು ಮಹಿಳೆಯರು ಸ್ವಾವಲಂಬಿಗಳಾಗಲು ಪೂರಕವಾಗಿವೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ತಿಳಿಸಿದರು.
ಅವರಿಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಅಮೃತವರ್ಷಿಣಿ ಸಭಾಂಗಣದಲ್ಲಿ ನಡೆದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ರ (ರಿಜಿಸ್ಟರ್ಡ್) ಸ್ವಸಹಾಯ ಸಂಘಗಳಿಗೆ ಒಟ್ಟು 607.7 ಕೋಟಿ ರೂ ಗಳ ಲಾಭಾಂಶವನ್ನು ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಈ ಹಿಂದೆ ಗ್ರಾಮೀಣ ಅಭಿವೃದ್ಧಿಯು,ಕಲ್ಯಾಣ ಕಾರ್ಯಕ್ರಮಕ್ಕೆ ಸೀಮಿತವಾಗಿತ್ತು. ಹಣವನ್ನು ಸ್ವಸಾಯ ಸಂಘಗಳು ಸಣ್ಣಪುಟ್ಟ ಉದ್ದೇಶಗಳಿಗೆ ಬಳಸುತ್ತಿದ್ದರು ,ಈಗ ಗ್ರಾಮೀಣ ಅಭಿವೃದ್ಧಿ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿಸಲು ಉತ್ತೇಜನಗಳು ಹಾಗೂ ಸರ್ಕಾರದ ಕಾರ್ಯಕ್ರಮಗಳು ಜನರಿಗೆ ತಲುಪಲು ಶ್ರೀ ಧರ್ಮಸ್ಥಳ ಗ್ರಾಮ ಅಭಿವೃದ್ಧಿ ಸಂಸ್ಥೆ ನೆರವಾಗುತ್ತಿದೆ ಎಂದರು.
ಈ ಸಂಸ್ಥೆ ಪ್ರಯೋಗ ಶಾಲೆ ಇದ್ದಂತೆ ಇಲ್ಲಿ ಪ್ರಾಯೋಗಿಕವಾಗಿ ಅನುಷ್ಠಾನವಾದ ಕಾರ್ಯಕ್ರಮಗಳು ಯಶಸ್ಸನ್ನು ಆಧರಿಸಿ ರಾಷ್ಟ್ರಮಟ್ಟದಲ್ಲಿ ಸರ್ಕಾರದ ನೀತಿಯಾಗಿ ಜಾರಿಗೊಳಿಸಲಾಗುತ್ತದೆ ಎಂದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ರಾಜ್ಯಸಭಾ ಸದಸ್ಯರಾದ ಡಾ. ಡಿ ವೀರೇಂದ್ರ ಹೆಗ್ಗಡೆ ಮಾತನಾಡಿ ಇವರಿಗೆ ನಾವು 600 ಕೋಟಿ ರೂ. ಗಳಿಗೂ ಹೆಚ್ಚು ಲಾಭಾಂಶ ವಿತರಿಸಿ ಸಾಧನೆ ತೋರಿಸಿದ್ದೇವೆ. ಈ ಪದ್ಧತಿ ದೇಶದ ಇತರ ಭಾಗಗಳಿಗೆ ವಿಸ್ತರಿಸಬೇಕೆಂದರು.
ಕಾರ್ಯಕ್ರಮದಲ್ಲಿ ಜ್ಞಾನ ವಿಕಾಸ ಕಾರ್ಯಕ್ರಮದ ಅಧ್ಯಕ್ಷೇ ಡಾ.ಹೇಮಾವತಿ ವಿ. ಹೆಗಡೆ, ನಬಾರ್ಡ್ ಅಧ್ಯಕ್ಷ ಕೆ.ವಿ. ಶಾಜಿ, ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ , ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ತು ಸದಸ್ಯ ಪ್ರತಾಪ್ ಸಿಂಹ ನಾಯಕ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ .ಸಿ ಟ್ರಸ್ಟ್( ರಿಜಿಸ್ಟರ್) ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್.ಎಸ್.ಅನಿಲ್ ಕುಮಾರ್ ಭಾಗವಹಿಸಿದ್ದರು.
ವರದಿ: ಜೆ. ರಂಗನಾಥ, ತುಮಕೂರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296