ತಿಪಟೂರು: ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ತಾಲ್ಲೂಕಿನ ರೈತಾಪಿ ವರ್ಗದವರಿಗೆ ಉಪಯೋಗವಾಗುವ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯ ಬೆಳೆವಿಮೆ ಮಾಡಿಸಲು ತಾಲ್ಲೂಕು ಯೋಜನಾಧಿಕಾರಿ ಉದಯ್ ಕೆ. ರವರ ನೇತೃತ್ವದಲ್ಲಿ ಚಾಲನೆ ನೀಡಲಾಯಿತು.
ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಉದಯ್ ಕೆ. ರೈತಾಪಿ ವರ್ಗದವರ ಬಾಳು ಬೆಳಗಿಸುವ ಕೃಷಿ ಕ್ಷೇತ್ರದಲ್ಲಿ ಸಮಾಜದ ಎಲ್ಲಾ ಜನತೆಗೆ ಅನ್ನಕೊಡುವ ರೈತನಿಗೆ ಬೆಳೆ ಬೆಳೆಯುವ, ಭೂಮಿಯ ಹದದಿಂದ, ಬೆಳೆ ಕಟಾವಿನವರೆಗೂ ಅನೇಕ ಪ್ರಾಕೃತಿಕ ವಿಕೋಪಗಳಿಂದ ಬೆಳೆನಷ್ಟ ಅನುಭವಿಸಬಾರದು ಎಂಬ ಕಾರಣಕ್ಕೆ ಕೇಂದ್ರ ಸರಕಾರದ ವತಿಯಿಂದ ಫಸಲ್ ಭೀಮಾ ಬೆಳೆ ವಿಮೆಯಂತಹ ಅದ್ಬುತ ಯೋಜನೆಯನ್ನು ಪರಿಚಯಸಲಾಗಿದೆ. ಈ ಒಂದು ವಿಮೆ ರಾಜ್ಯದ ಎಲ್ಲಾ ರೈತಾಪಿ ವರ್ಗದವರಿಗೂ ಉಪಯೋಗವಾಗಬೇಕೆಂದು ಪೂಜ್ಯ ವೀರೇಂದ್ರ ಹೆಗ್ಗಡೆಯವರು ರಾಜ್ಯದ ಪ್ರತಿ ತಾಲ್ಲೂಕಿನ CSC ಸೇವಾದರರಿಂದ ರೈತರಿಗೆ ಬೆಳೆವಿಮೆ ಮಾಡಿಸಿಕೊಳ್ಳುವ ಸವಲತ್ತನ್ನು ಒದಗಿಸಿಕೊಡಲಾಗಿದೆ ಎಂದರು.
ಕಳೆದ ವರ್ಷ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ತಾಲ್ಲೂಕಿನಾದ್ಯಂತ ಸರಿಸುಮಾರು 4,252 ರೈತರಿಗೆ ಬೆಳೆವಿಮೆ ಮಾಡಿಕೊಡಲಾಗಿತ್ತು. ಪ್ರಸ್ತುತ ವರ್ಷ 8,400 ರೈತರಿಗೆ ಈ ಒಂದು ಬೆಳೆವಿಮೆಯ ಸೌಲಭ್ಯವನ್ನು ಒದಗಿಸಿಕೊಡಲು ತಾಲ್ಲೂಕಿನ ಎಲ್ಲಾ ಕಾರ್ಯಕರ್ತರು ಅವಿರತ ಶ್ರಮಿಸಬೇಕೆಂದು ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ತಾಲ್ಲೂಕಿನ ಗ್ರಾಮಾಭಿವೃದ್ಧಿ ಯೋಜನೆಯ ಎಲ್ಲಾ ಕಾರ್ಯಕರ್ತರು ಉಪಸ್ಥಿತರಿದ್ದರು.
ವರದಿ: ಆನಂದ್ ತಿಪಟೂರು
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW