ತುಮಕೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ಜಿಲ್ಲಾ/ ತಾಲ್ಲೂಕು ಮಡಿವಾಳ ಸಂಘದ ವತಿಯಿಂದ ಫೆಬ್ರವರಿ 1ರಂದು ಬೆಳಿಗ್ಗೆ 11 ಗಂಟೆಗೆ ನಗರದ ಡಾ.ಗುಬ್ಬಿವೀರಣ್ಣ ಕಲಾಕ್ಷೇತ್ರದಲ್ಲಿ “ಶ್ರೀ ಮಡಿವಾಳ ಮಾಚಿದೇವ ಜಯಂತಿ” ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.
ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವ ಹಾಗೂ ಕ್ಷೇತ್ರದ ಸಂಸದ ವಿ.ಸೋಮಣ್ಣ ಅವರ ಘನ ಉಪಸ್ಥಿತಿಯಲ್ಲಿ ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ ಕಾರ್ಯಕ್ರಮವನ್ನು ಉದ್ಘಾಟಿಸುವರು.
ಚಿತ್ರದುರ್ಗ ಶ್ರೀ ಮಾಚಿದೇವ ಮಹಾಸಂಸ್ಥಾನ ಮಠದ ಪೀಠಾಧಿಪತಿ ಜಗದ್ಗುರು ಡಾ.ಶ್ರೀ ಶ್ರೀ ಬಸವ ಮಾಚಿದೇವ ಮಹಾಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸುವರು. ನಗರ ವಿಧಾನಸಭಾ ಕ್ಷೇತ್ರದ ಶಾಸಕ ಜಿ.ಬಿ.ಜ್ಯೋತಿಗಣೇಶ್ ಅಧ್ಯಕ್ಷತೆವಹಿಸುವರು. ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಸಚಿವರು, ಶಾಸಕರು, ಜನಪ್ರತಿನಿಧಿಗಳು, ಮಡಿವಾಳ ಸಮುದಾಯದ ಸಂಘ–ಸಂಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು ಹಾಗೂ ಮುಖಂಡರು ಭಾಗವಹಿಸಲಿದ್ದಾರೆ.
ಕಾರ್ಯಕ್ರಮವನ್ನು ಕುರಿತು ಕೆ.ಎಂ.ಎಫ್.ನ ನಿವೃತ್ತ ಜಂಟಿ ನಿರ್ದೇಶಕ ಡಾ.ಟಿ.ಎಂ.ಪ್ರಸಾದ್ ಉಪನ್ಯಾಸ ನೀಡಲಿದ್ದಾರೆ. ಮಡಿವಾಳ ಸಮುದಾಯದಲ್ಲಿ ವಿಶೇಷ ಸೇವೆ ಸಲ್ಲಿಸಿರುವ ಎಂ.ಎ.ಚೈತ್ರ ವಿನೋದ್ ಎಲ್., ನರಸಮ್ಮ ಬಿ.ಕೆಂಪನರಸಯ್ಯ, ಗೋಪಾಲ್ ಡಿ.ಎಸ್. ಹಾಗೂ ಗೋಪಾಲ್ ಆರ್. ಅವರನ್ನು ಸನ್ಮಾನಿಸಲಾಗುವುದು.
ಕಾರ್ಯಕ್ರಮದಲ್ಲಿ ಸರ್ಕಾರಿ ಇಲಾಖೆಗಳ ಅಧಿಕಾರಿ/ಸಿಬ್ಬಂದಿ ವರ್ಗ, ಸಮಾಜದ ಗಣ್ಯರು, ವಿವಿಧ ಸಮುದಾಯದ ಮುಖಂಡರು, ಕಲಾವಿದರು, ಜಿಲ್ಲೆಯ ಮಡಿವಾಳ ಸಮುದಾಯದ ಸಂಘ-ಸAಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು, ಮುಖಂಡರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಈಶ್ವರ್ ಕು ಮಿರ್ಜಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx